ಬೆಂಗಳೂರು: ಪೊಲೀಸ್ ಕಾನ್ಸ್ಟೇಬಲ್ ಹುದ್ದೆಗೆ ಕಾಯುತ್ತಿರುವ ಸಾವಿರಾರು ಯುವಕರಿಗೆ ಶೀಘ್ರದಲ್ಲೇ ಅತ್ಯಂತ ನಿರೀಕ್ಷಿತ ಸುದ್ದಿ ಬರಲಿದ್ದು, ವಯೋಮಿತಿ ಸಡಿಲಿಕೆ ಕುರಿತಂತೆ ಗೃಹ ಸಚಿವ ಡಾ. ಜಿ. ಪರಮೇಶ್ವರ್ ಶಕ್ತಿಶಾಲಿ ಸುಳಿವು ನೀಡಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, “ಕಳೆದ ಕೆಲವರ್ಷಗಳಿಂದ ಕಾನ್ಸ್ಟೇಬಲ್ ಹುದ್ದೆಗಳ ನೇಮಕಾತಿ ನಡೆದಿಲ್ಲ. ಇದರಿಂದಾಗಿ ಯುವಕರಲ್ಲಿ ಅಸಂತೋಷ ಹೆಚ್ಚಾಗಿದೆ. ಈ ಹಿನ್ನೆಲೆ ವಯೋಮಿತಿ ಪರಿಷ್ಕರಣೆ ಬಗ್ಗೆ ಪರಿಶೀಲನೆ ನಡೆಸಲು ಸೂಚಿಸಲಾಗಿದೆ,” ಎಂದು ಹೇಳಿದರು.
ಹೆಚ್ಚುವರಿಯಾಗಿ, “ಬೇರೆ ರಾಜ್ಯಗಳ ನಿಯಮಗಳನ್ನು ಅಧ್ಯಯನ ಮಾಡಿ, ಸೂಕ್ತ ಪ್ರಸ್ತಾವನೆನ್ನು ಸರ್ಕಾರಕ್ಕೆ ಸಲ್ಲಿಸಲು ಅಧಿಕಾರಿಗಳಿಗೆ ಸೂಚಿಸಲಾಗಿದೆ. ಈ ಪ್ರಸ್ತಾವನೆಗೆ ಸರ್ಕಾರದ ಅನುಮೋದನೆ ಸಿಕ್ಕ ನಂತರ ಅಂತಿಮ ನಿರ್ಧಾರ ಪ್ರಕಟಿಸಲಾಗುವುದು,” ಎಂದೂ ವಿವರಿಸಿದರು.
For More Updates Join our WhatsApp Group :




