ಚಂದನವನದಲ್ಲಿ ತಮ್ಮ ಅಮೋಘ ಅಭಿನಯದ ಮೂಲಕ ಜನರ ಮನ ಗೆದ್ದಿರುವ ಕೋಮಲ್ ಕುಮಾರ್ ಇದೀಗ ದ್ವಿಪಾತ್ರದ ಮೂಲಕ ಪ್ರೇಕ್ಷಕರನ್ನು ರಂಜಿಸಲು ಸಿದ್ಧರಾಗಿದ್ದಾರೆ. ‘ಯಲಾಕುನ್ನಿ’ ಸಿನಿಮಾದಲ್ಲಿ ಅವರು ವಜ್ರಮುನಿ ಲುಕ್ನಲ್ಲಿ ಕಾಣಿಸಿಕೊಳ್ಳಲಿದ್ದು, ಇದೇ ವಾರ ಸಿನಿಮಾ ಬಿಡುಗಡೆಯಾಗಲಿದೆ. ಈ ಚಿತ್ರಕ್ಕೆ ಯುವ ನಿರ್ದೇಶಕ ಎನ್ ಆರ್ ಪ್ರದೀಪ್ ಕಥೆ, ಚಿತ್ರಕಥೆ, ಸಂಭಾಷಣೆ ಬರೆದು ಡೈರೆಕ್ಷನ್ ಮಾಡಿದ್ದಾರೆ.
ಕೋಮಲ್ ಜೊತೆಗೆ ಸಿನಿ ತಂಡದಲ್ಲಿ ದೊಡ್ಡ ದೊಡ್ಡ ಕಲಾವಿದರ ದಂಡೇ ಇದೆ. ಹಿರಿಯ ನಟರಾದ ದತ್ತಣ್ಣ, ಸಾಧು ಕೋಕಿಲ, ಮಿತ್ರ, ಸುಚೇಂದ್ರ ಪ್ರಸಾದ್, ಶಿವರಾಜ್ ಕೆ ಆರ್ ಪೇಟೆ , ತಬಲಾ ನಾಣಿ, ರಾಜು ತಾಳಿಕೋಟೆ, ಸುಮನ್ ನಗರಕರ್, ಮಾನಸಿ ಸುಧೀರ್ (ಕಾಂತಾರ), ಜಗ್ಗೇಶ್ ಅವರ ಕಿರಿಯ ಪುತ್ರ ಯತಿರಾಜ್ ಜಗ್ಗೇಶ್, ಜಯಸಿಂಹ ಮುಸುರಿ, ರಘು ರಾಮನಕೊಪ್ಪ, ಮಹಾಂತೇಶ್, ಬೌಬೌ ಜಯರಾಮ್ , ನಿರ್ದೇಶಕ ಸಹನ ಮೂರ್ತಿ , ಭಜರಂಗಿ ಪ್ರಸನ್ನ , ತಿಥಿ ತಮ್ಮಣ್ಣ, ಪ್ರದೀಪ್ ಪೂಜಾರಿ, ತೇಜಸ್, ಉಮೇಶ್ ಸಕ್ಕರೆ ನಾಡು ಮಂತಾದವರ ತಾರಾಬಳಗವಿರುವ ಈ ಚಿತ್ರದ ನಾಯಕಿಯರಾಗಿ ನಿಸರ್ಗ ಅಪ್ಪಣ್ಣ ಮತ್ತು ಗಿಚ್ಚಿಗಿಲಿಯ ಅಮೃತಾ ಬಣ್ಣ ಹಚ್ಚಿದ್ದಾರೆ.
ಸಿನಿಮಾದ ಮತ್ತೊಂದು ವಿಶೇಷ ಎಂದರೆ ವಜ್ರಮುನಿ ಅವರ ಮೊಮ್ಮೊಗ ಆಕರ್ಶ್ ಈ ಚಿತ್ರದ ಮೂಲಕ ಮೊದಲ ಬಾರಿಗೆ ಬಣ್ಣದಲೋಕ ಪ್ರವೇಶಿಸುತ್ತಿದ್ದಾರೆ. ಮಯೂರ್ ಪಟೇಲ್ ಅವರು ಖಳ ನಾಯಕನಾಗಿ ನಟಿಸಿದ್ದಾರೆ.
ಸಂಪೂರ್ಣ ಹಳ್ಳಿ ಸೊಗಡಿನಲ್ಲಿ ಮೂಡಿಬಂದಿರುವ ‘ಯಲಾಕುನ್ನಿ’ ಸಿನಿಮಾಕ್ಕೆ ರಥಾವರ ಖ್ಯಾತಿಯ ಧರ್ಮ ವಿಶ್ ಸಂಗೀತ ನಿರ್ದೇಶನ, ದೀಪು ಎಸ್ ಕುಮಾರ್ ಸಂಕಲನ ಹಾಗೂ ಹಾಲೇಶ್ ಭದ್ರಾವತಿ ಅವರ ಛಾಯಾಗ್ರಹಣವಿದೆ. ಮುರಳಿ ಮಾಸ್ಟರ್ ನೃತ್ಯ ಸಂಯೋಜನೆ ಮಾಡಿರುವ ಈ ಚಿತ್ರಕ್ಕೆ ನರಸಿಂಹ ಮಾಸ್ಟರ್ ಸಾಹಸ ಸಂಯೋಜನೆ ಮಾಡಿದ್ದಾರೆ.