ಬೆಳ್ತಂಗಡಿ (ದಕ್ಷಿಣ ಕನ್ನಡ) : ದಂಪತಿಗಳಿಬ್ಬರು ಕಾಡಿನೊಳಗೆ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಇಂದು ಬೆಳಗ್ಗೆ ತಿಳಿದುಬಂದಿದೆ. ಬೆಳ್ತಂಗಡಿ ತಾಲೂಕಿನ ಕಾಶಿಪಟ್ಣ ಗ್ರಾಮದಲ್ಲಿ ನಿನ್ನೆ ರಾತ್ರಿ ಆತ್ಮಹತ್ಯೆಮಾಡಿಕೊಂಡಿರುವ ಘಟನೆ ಬೆಳಕಿಗೆಬಂದಿದೆ. ಕಾಶಿಪಟ್ಣ ಗ್ರಾಮದಸ ವಾಸಿಗಳಾದ ನೊಣಯ್ಯ ಪೂಜಾರಿ (63) ಹಾಗೂ ಅವರ ಪತ್ನಿ ಬೇಬಿ (46) ಆತ್ಮಹತ್ಯೆ ಮಾಡಿಕೊಂಡವರು.
ದOಪತಿ ಮನೆಯ ಸಮೀಪದ ಕಾಡಿನಲ್ಲಿ ಆತ್ಮಹತ್ಯೆ ಮಾಡಿಕೊಂಡಿರುವುದಾಗಿ ತಿಳಿದು ಬಂದಿದೆ. ನೊಣಯ್ಯ ಪೂಜಾರಿ ಹಾಗೂ ಪತ್ನಿಯ ಆತ್ಮಹತ್ಯೆಗೆ ನಿಖರ ಕಾರಣ ತಿಳಿದು ಬಂದಿಲ್ಲ ಎಂದು ಪೊಲೀಸರು ತಿಳಿಸಿದ್ದಾರೆ. ನೋಣಯ್ಯ ಪೂಜಾರಿಯವರಿಗೆ ಇದು ೨ನೇ ಮದುವೆಯಾಗಿತ್ತು. ಅವರ ಮೊದಲ ಪತ್ನಿ ೧೦ ವರ್ಷಗಳ ಹಿಂದೆಯೇ ಮೃತಪಟ್ಟಿದ್ದರು. ಕೆಲವು ವರ್ಷಗಳ ಹಿಂದೆ ಅವರು ಬೇಬಿಯವರನ್ನು ೨ನೇ ವಿವಾಹವಾಗಿದ್ದರು. ಮೊದಲನೇ ಪತ್ನಿಗೆ ಐವರು ಪುತ್ರರು, ಓರ್ವ ಪುತ್ರಿ ಇದ್ದಾರೆ ಎಂದು ತಿಳಿದುಬಂದಿದೆ. ಈ ಬಗ್ಗೆ ವೇಣೂರು ಪೊಲೀಸರು ಸ್ಥಳಕ್ಕೆ ಆಗಮಿಸಿ ಪರಿಶೀಲನೆ ನಡೆಸಿ, ಪ್ರಕರಣ ದಾಖಲಿಸಿಕೊಂಡಿದ್ದಾರೆ.