ವೈವಾಹಿಕ ಅತ್ಯಾಚಾರ ಅಪರಾಧೀಕರಣ: ಕೇಂದ್ರ ಸರ್ಕಾರದ ವಿರೋಧ

ಪತ್ರಕರ್ತರ ವಿರುದ್ಧ ಕ್ರಮಿನಲ್ ಪ್ರಕರಣ ದಾಖಲಿಸಲಾಗದು : ಸುಪ್ರೀಂ

ನವದೆಹಲಿ: ಪುರುಷನು ತನ್ನ ಸ್ವಂತ ಪತ್ನಿಯೊಂದಿಗೆ ಲೈಂಗಿಕ ಕ್ರಿಯೆ ಹೊಂದುವುದನ್ನು ದಂಡನಾರ್ಹ ‘ಅತ್ಯಾಚಾರ’ ಎಂದು ಪರಿಗಣಿಸಿದ್ದಲ್ಲಿ ಅದು ವೈವಾಹಿಕ ಸಂಬಂಧದ ಮೇಲೆ ತೀವ್ರ ಪರಿಣಾಮ ಬೀರುತ್ತದೆ ಎಂದು ಕೇಂದ್ರ ಸರ್ಕಾರ ಸುಪ್ರೀಂ ಕೋರ್ಟ್‌ಗೆ ತಿಳಿಸಿದೆ.

ವೈವಾಹಿಕ ಅತ್ಯಾಚಾರವನ್ನು ಅಪರಾಧೀಕರಣಗೊಳಿಸುವುದಕ್ಕೆ ಸಂಬಂಧಿಸಿದಂತೆ ಅನೇಕ ಅರ್ಜಿಗಳು ಸಲ್ಲಿಕೆಯಾಗಿದ್ದು, ಇದಕ್ಕೆ ವಿರೋಧ ವ್ಯಕ್ತಪಡಿಸಿ ಕೇಂದ್ರ ಸರ್ಕಾರ, ತನ್ನ ಪ್ರಾಥಮಿಕ ಅಫಿಡವಿಟ್ ನ್ನು ಉನ್ನತ ನ್ಯಾಯಾಲಯದಲ್ಲಿ ಸಲ್ಲಿಸಿದೆ.

ಅಪ್ರಾಪ್ತ ವಯಸ್ಕಳಲ್ಲದ ತನ್ನ ಹೆಂಡತಿಯನ್ನು ಲೈಂಗಿಕ ಕ್ರಿಯೆಗೆ ಒತ್ತಾಯಿಸಿದರೆ ಅತ್ಯಾಚಾರದ ಅಪರಾಧಕ್ಕಾಗಿ ಪತಿ ಕಾನೂನು ಕ್ರಮದಿಂದ ವಿನಾಯಿತಿ ಪಡೆಯಬೇಕೇ ಎಂಬ ಕಾನೂನಾತ್ಮಕ ಪ್ರಶ್ನೆಯನ್ನು ಎತ್ತುವ ಅರ್ಜಿಗಳನ್ನು ಸುಪ್ರೀಂ ಕೋರ್ಟ್ ತ್ವರಿತಗತಿಯಲ್ಲಿ ಕೈಗೆತ್ತಿಕೊಂಡಿದೆ.

ಈಗ ರದ್ದಾಗಿ ಭಾರತೀಯ ನ್ಯಾಯ ಸಂಹಿತೆ ಎಂದಾಗಿರುವ ಐಪಿಸಿ ಸೆಕ್ಷನ್ 375 ರ ಅಡಿಯಲ್ಲಿ, ಅಪ್ರಾಪ್ತ ವಯಸ್ಕಳಲ್ಲದ ತನ್ನ ಪತ್ನಿಯೊಂದಿಗೆ ಲೈಂಗಿಕ ಸಂಭೋಗ ಅಥವಾ ಲೈಂಗಿಕ ಕ್ರಿಯೆ ನಡೆಸಿದರೆ ಅದು ಅತ್ಯಾಚಾರವಲ್ಲ. ಹೊಸ ಕಾನೂನಿನ ಅಡಿಯಲ್ಲಿಯೂ ಸೆಕ್ಷನ್ 63 ವಿನಾಯಿತಿ 2 (ಅತ್ಯಾಚಾರ) 18 ವರ್ಷಕ್ಕಿಂತ ಕಡಿಮೆ ವಯಸ್ಸಿನ ಪತ್ನಿಯೊಂದಿಗೆ ಪುರುಷ ಲೈಂಗಿಕ ಸಂಭೋಗ ಅಥವಾ ಲೈಂಗಿಕ ಕ್ರಿಯೆ ನಡೆಸುವುದು ಅತ್ಯಾಚಾರವಲ್ಲ

ಸಾಂವಿಧಾನಿಕ ಸಿಂಧುತ್ವದ ಆಧಾರದ ಮೇಲೆ ಐಪಿಸಿಯ ಸೆಕ್ಷನ್ 375 ರಡಿ ಪತಿಗೆ ಕ್ರಿಮಿನಲ್ ಕ್ರಮದಿಂದ ವಿನಾಯಿತಿ ನೀಡಿರುವುದನ್ನು ತೆಗೆದುಹಾಕಿದ್ದಲ್ಲಿ ಅದು ವೈವಾಹಿಕ ಸಂಬಂಧದ ಮೇಲೆ ಅಗಾಧ ಪರಿಣಾಮ ಬೀರಲಿದೆ ಮತ್ತು ಮದುವೆ ಸಂಸ್ಥೆಯಲ್ಲಿ ಗಂಭೀರ ಅಡಚಣೆಗಳಿಗೆ ಕಾರಣವಾಗಬಹುದು ಎದು ಕೇಂದ್ರ ಸರ್ಕಾರ ತನ್ನ ಅಫಿಡವಿಟ್ ನಲ್ಲಿ ತಿಳಿಸಿದೆ.

Leave a Reply

Your email address will not be published. Required fields are marked *