ತುಮಕೂರು: ರಾಜ್ಯ ಉಪಲೋಕಾಯುಕ್ತ ಗೌರವಾನ್ವಿತ ನ್ಯಾಯಮೂರ್ತಿ ಬಿ. ವೀರಪ್ಪ ಅವರ ನೇತೃತ್ವದಲ್ಲಿ ನಗರದ ಗುಬ್ಬಿ ವೀರಣ್ಣ ಕಲಾಕ್ಷೇತ್ರದಲ್ಲಿ ಬೆಳಿಗ್ಗೆ 10 ಗಂಟೆಯಿಂದ ಜಿಲ್ಲಾ ವ್ಯಾಪ್ತಿಯ ಸಾರ್ವಜನಿಕ ಕುಂದು-ಕೊರತೆ ಅಹವಾಲುಗಳನ್ನು ಸ್ವೀಕರಿಸಿ ದೂರು ವಿಚಾರಣೆ ಹಾಗೂ ಪ್ರಕರಣಗಳ ವಿಲೇವಾರಿ ಸಭೆ ನಡೆಸಿದರು.
ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ತಮ್ಮ ಅಹವಾಲುಗಳನ್ನು ಸಲ್ಲಿಸಿದರು.
ಕ್ರಷರ್, ಕ್ವಾರಿ ನಿಯಮ ಮೀರಿ ಕಾರ್ಯ ನಿರ್ವಹಿಸುತ್ತಿವೆ. ಇದರಿಂದ ಮಕ್ಕಳಿಗೆ ತೀವ್ರ ತೊಂದರೆಯಾಗುತ್ತಿದೆ ಎಂದು ಸಾರ್ವಜನಿಕರು ದೂರನ್ನು ತಂದರು. ದೂರಿನ ಅನ್ವಯ ಸಂಬಂಧಿಸಿದ ಅಧಿಕಾರಿಗಳಿಗೆ ತರಾಟೆ ತೆಗೆದುಕೊಂಡರು. ತಕ್ಷಣವೇ ನಿಯಮ ಮೀರಿ ಕಾರ್ಯ ನಿರ್ವಹಿಸುತ್ತಿರುವ ಕ್ವಾರಿಗಳನ್ನು ಬಂದ್ ಮಾಡುವಂತೆ ಕಟ್ಟುನಿಟ್ಟಿನ ಸೂಚನೆ ನೀಡಿದರು.
ಸಾರ್ವಜನಿಕರಿಗೆ ಸಂಪೂರ್ಣವಾಗಿ ತೊಂದರೆಯಾಗುತ್ತಿದ್ದರೆ ಅಂತಹ ಕ್ರಷರ್ ನಿಲ್ಲಿಸಲು ಉಚ್ಚ ನ್ಯಾಯಾಲಯದಲ್ಲಿ ಮೊಕದ್ದಮೆ ಹಾಕಿ ಚಾಲೆಂಜ್ ಮಾಡುವಂತೆ ಸಾರ್ವಜನಿಕರಿಗೆ ಮಾಹಿತಿ ನೀಡಿದರು.
ಈ ವೇಳೆ ಕರ್ನಾಟಕ ರಾಜ್ಯ ಲೋಕಾಯುಕ್ತದ ಗೌರವಾನ್ವಿತ ನ್ಯಾಯಮೂರ್ತಿ ಹಾಗೂ ಉಪಲೋಕಾಯುಕ್ತ ಕೆ.ಎನ್. ಫಣೀಂದ್ರ, ಜಿಲ್ಲಾಧಿಕಾರಿ ಶುಭ ಕಲ್ಯಾಣ್, ಮುಖ್ಯ ಅತಿಥಿಗಳಾಗಿ ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರು ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಅಧ್ಯಕ್ಷ ಬಿ.ಜಯಂತ ಕುಮಾರ್, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಜಿ.ಪ್ರಭು, ಪಾಲಿಕೆ ಆಯುಕ್ತ ಬಿ.ವಿ.ಅಶ್ವಿಜ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕೆ.ವಿ. ಅಶೋಕ್ ಸೇರಿದಂತೆ ಕರ್ನಾಟಕ ಲೋಕಾಯುಕ್ತ ಕಚೇರಿಯ ವಿವಿಧ ಅಧಿಕಾರಿಗಳು ಭಾಗವಹಿಸಿದ್ದರು.