ಸಿಎಂ ಸಿದ್ದರಾಮಯ್ಯ ಆಗಮನಕ್ಕೂ ಮುನ್ನ ಅಘಾತ.
ಹುಬ್ಬಳ್ಳಿ : ಹುಬ್ಬಳ್ಳಿ ನಗರದ ಮಂಟೂರು ರಸ್ತೆಯಲ್ಲಿ ಸ್ಲಂ ಬೋರ್ಡ್ ವತಿಯಿಂದ ನಿರ್ಮಾಣಗೊಂಡಿರುವ 42,345 ಮನೆಗಳ ಹಂಚಿಕೆ ಕಾರ್ಯಕ್ರಮಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ, ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಸೇರಿದಂತೆ ಅನೇಕ ಸಚಿವರು ಆಗಮಿಸುವುದಕ್ಕೂ ಮುನ್ನವೇ ಅವಘಡ ಸಂಭವಿಸಿದೆ. ಕಾರ್ಯಕ್ರಮದ ಹಿನ್ನೆಲೆಯಲ್ಲಿ ವೇದಿಕೆಯ ಮುಂಭಾಗದಲ್ಲಿ ಸಿಎಂ ಸಿದ್ದರಾಮಯ್ಯ, ಡಿ.ಕೆ. ಶಿವಕುಮಾರ್, ಮಲ್ಲಿಕಾರ್ಜುನ ಖರ್ಗೆ, ರಾಹುಲ್ ಗಾಂಧಿ ಸೇರಿದಂತೆ ಹಲವು ನಾಯಕರ ಬೃಹತ್ ಕಟೌಟ್‌ಗಳನ್ನು ಅಳವಡಿಸಲಾಗಿತ್ತು. ಅವುಗಳು ಕುಸಿದು ಬಿದ್ದು ನಾಲ್ವರು ಗಾಯಗೊಂಡಿದ್ದಾರೆ.
ಕಟೌಟ್‌ಗಳನ್ನು ಸರಿಯಾಗಿ ನಿರ್ವಹಣೆ ಮಾಡದ ಕಾರಣ, ಕಾರ್ಯಕ್ರಮ ಆರಂಭಕ್ಕೂ ಮುನ್ನವೇ ಅವು ಕುಸಿದು ಬಿದ್ದಿವೆ. ಈ ಅವಘಡದಲ್ಲಿ ಸರಿಸುಮಾರು ನಾಲ್ಕು ಜನರು ಗಾಯಗೊಂಡಿದ್ದು, ಅವರನ್ನು ತಕ್ಷಣವೇ ಕಿಮ್ಸ್ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಅದೃಷ್ಟವಶಾತ್ ದೊಡ್ಡ ಅವಘಡ ಸಂಭವಿಸಿಲ್ಲ. ಕುಸಿದುಬಿದ್ದ ಕಟೌಟ್‌ಗಳನ್ನು ತೆರವುಗೊಳಿಸುವ ಕಾರ್ಯ ಪ್ರಗತಿಯಲ್ಲಿದೆ.
For More Updates Join our WhatsApp Group :




