LPG ಕೊರತೆಯ ನಡುವೆ ಹೊಸ ಮೋಸದ ಜಾಲ
ಬೆಂಗಳೂರು : ಇರಾನ್- ಇಸ್ರೇಲ್, ಅಮೆರಿಕದ ನಡುವೆ ನಡೆಯುತ್ತಿರುವ ಯುದ್ಧ ನಿಲ್ಲುವ ಯಾವ ಲಕ್ಷಣಗಳೂ ಕಾಣುತ್ತಿಲ್ಲ. ಈ ಮೂರು ದೇಶಗಳ ನಡುವಿನ ಸಂಘರ್ಷದಿಂದ ಗಲ್ಫ್ ರಾಷ್ಟ್ರಗಳ ಮೇಲೆ ಕೂಡ ದಾಳಿ ಮುಂದುವರೆದಿದ್ದು, ಇದರ ಪರಿಣಾಮವಾಗಿ ಹಲವು ದೇಶಗಳಲ್ಲಿ ತೈಲ, ಗ್ಯಾಸ್ ಮುಂತಾದ ಸೌಕರ್ಯಗಳ ಬಿಕ್ಕಟ್ಟು ಎದುರಾಗಿದೆ. ಬೆಂಗಳೂರು ಸೇರಿದಂತೆ ಭಾರತದ ಅನೇಕ ಪ್ರಮುಖ ನಗರಗಳ ಹೋಟೆಲ್, ರೆಸ್ಟೋರೆಂಟ್, ಹಾಸ್ಟೆಲ್ಗಳಲ್ಲಿ ಎಲ್ಪಿಜಿ ಕೊರತೆ ಎದುರಾಗಿದ್ದು, ಅವುಗಳ ಬಾಗಿಲು ಮುಚ್ಚಲಾಗುತ್ತಿದೆ. ಇಂಧನ ಪೂರೈಕೆಯಲ್ಲಿನ ಕೊರತೆಯ ಭಯದ ನಡುವೆ ಭಾರತದ ಹಲವಾರು ಭಾಗಗಳಲ್ಲಿ LPG ಸಿಲಿಂಡರ್‌ಗಳಿಗೆ ಬೇಡಿಕೆ ಹೆಚ್ಚಾಗಿದೆ. ಹೀಗಾಗಿ, ನಿಮ್ಮ ಮೊಬೈಲ್ ಅಥವಾ ಕಂಪ್ಯೂಟರ್ ಪರದೆ ಮೇಲೆ ‘ತಕ್ಷಣದ ಎಲ್ಪಿಜಿ ಡೆಲಿವರಿಗೆ ಈಗಲೇ ಹಣ ಪಾವತಿಸಿ’ ಎಂಬ ಜಾಹೀರಾತು ಬಂದರೆ ಅದನ್ನು ನಂಬಬೇಡಿ.
ಎಲ್ಪಿಜಿ ಸಿಲಿಂಡರ್ ಬುಕ್ ಮಾಡಲು ಜನರು ಪರದಾಡುತ್ತಿರುವಾಗ ಸೈಬರ್ ಅಪರಾಧಿಗಳು ಇದನ್ನೇ ಬಂಡವಾಳ ಮಾಡಿಕೊಂಡು ತಾವು ಲಾಭ ಮಾಡಲು ಪ್ರಯತ್ನಿಸುತ್ತಿದ್ದಾರೆ. ಸೈಬರ್ ಅಪರಾಧಿಗಳು LPG ಸಿಲಿಂಡರ್ ರೀಫಿಲ್ಲಿಂಗ್ಗೆ ಹುಡುಕುತ್ತಿರುವ ಜನರನ್ನು ಗುರಿಯಾಗಿಸಿಕೊಂಡು ಹೊಸ ರೀತಿಯ ವಂಚನೆಗಳನ್ನು ಪ್ರಾರಂಭಿಸಲು ಪ್ರಾರಂಭಿಸಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ. ಎಲ್ಪಿಜಿ ಸಿಲಿಂಡರ್‌ಗಳಿಗೆ ಬೇಡಿಕೆ ಹೆಚ್ಚುತ್ತಿರುವ ಮತ್ತು ಪೂರೈಕೆ ಕಡಿಮೆಯಾಗುತ್ತಿದೆ. ಈ ಬಗ್ಗೆ ವದಂತಿಗಳು ಆನ್‌ಲೈನ್‌ನಲ್ಲಿ ಹರಡುತ್ತಿರುವುದರಿಂದ, ಸೈಬರ್ ಅಪರಾಧಿಗಳು ಜನರ ಭಯದ ಲಾಭ ಪಡೆಯಲು ಪ್ರಯತ್ನಿಸುತ್ತಿದ್ದಾರೆ. ಈ ರೀತಿಯ ಸೈಬರ್ ಅಪರಾಧಿಗಳು ಗ್ಯಾಸ್ ಬುಕಿಂಗ್ ಸೇವೆಗಳಿಗಾಗಿ ಆನ್‌ಲೈನ್‌ನಲ್ಲಿ ಹುಡುಕುವ ವ್ಯಕ್ತಿಗಳನ್ನು ಟಾರ್ಗೆಟ್ ಮಾಡುತ್ತಿದ್ದಾರೆ ಎಂದು ಅಧಿಕಾರಿಗಳು ಎಚ್ಚರಿಸಿದ್ದಾರೆ.
ಸೈಬರ್ ವಂಚನೆ ದೂರುಗಳಿಗೆ ಪ್ರತಿಕ್ರಿಯಿಸಲು ಮತ್ತು ತಕ್ಷಣದ ಸಹಾಯವನ್ನು ಒದಗಿಸಲು ಸ್ಥಾಪಿಸಲಾದ 1930ಗೆ ಕರೆ ಮಾಡುವ ಮೂಲಕ ವಂಚನೆಗೆ ಒಳಗಾದವರು ರಾಷ್ಟ್ರೀಯ ಸೈಬರ್ ಅಪರಾಧ ಸಹಾಯವಾಣಿಯನ್ನು ಸಂಪರ್ಕಿಸಲು ಸೂಚಿಸಲಾಗಿದೆ. ಭಾರತ ಸರ್ಕಾರದ ರಾಷ್ಟ್ರೀಯ ಸೈಬರ್ ಅಪರಾಧ ವರದಿ ಪೋರ್ಟಲ್ ಮೂಲಕವೂ ದೂರುಗಳನ್ನು ನೋಂದಾಯಿಸಬಹುದು.
For More Updates Join our WhatsApp Group :




