ಬಂಗಾಳಕೊಲ್ಲಿಯಲ್ಲಿ ಸೈಕ್ಲೋನ್ 15 ಜಿಲ್ಲೆಗಳಲ್ಲಿ  ಹೆಚ್ಚು ಮಳೆ!

ಬಂಗಾಳಕೊಲ್ಲಿಯಲ್ಲಿ ಸೈಕ್ಲೋನ್ 15 ಜಿಲ್ಲೆಗಳಲ್ಲಿ ಹೆಚ್ಚು ಮಳೆ!

ಬಂಗಾಳಕೊಲ್ಲಿಯಲ್ಲಿ ಸೈಕ್ಲೋನ್ ಸೃಷ್ಟಿಯಾಗಿದೆ. ಇದರಿಂದ ರಾಜ್ಯದ ಹಲವು ಭಾಗದಲ್ಲಿ ಧಾರಾಕಾರ ಮಳೆಯಾಗುತ್ತದೆ. ಏಪ್ರಿಲ್‌ 17ರ ವರೆಗೆ ಬೆಂಗಳೂರು ಸೇರಿದಂತೆ ಒಟ್ಟು 15 ಜಿಲ್ಲೆಗಳಲ್ಲಿ ಧಾರಾಕಾರ ಮಳೆಯಾಗಲಿದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಬಂಗಾಳಕೊಲ್ಲಿಯಲ್ಲಿ ಚಂಡಮಾರುತ ಸೃಷ್ಟಿಯಾಗಿದ್ದು ರಾಜ್ಯದಲ್ಲಿ ಮುಂಗಾರು ಪೂರ್ವ ಮಳೆ ರಣಭೀಕರ ಸ್ವರೂಪ ಪಡೆದುಕೊಂಡಿದೆ. ಇನ್ನೂ ಒಂದು ವಾರಕ್ಕೂ ಹೆಚ್ಚು ಅವಧಿ ವರೆಗೆ ಬೆಂಗಳೂರು ಸೇರಿದಂತೆ ರಾಜ್ಯದಾದ್ಯಂತ ಮಳೆ ಆಗಲಿದೆ. ಮಂಗಳವಾರವೂ ಕರ್ನಾಟಕದ ವಿವಿಧ ಭಾಗದಲ್ಲಿ ಭರ್ಜರಿ ಮಳೆಯಾಗಿದೆ. ಕರ್ನಾಟಕದ ವಿವಿಧ ಜಿಲ್ಲೆಗಳಲ್ಲಿ ಮಳೆಯಾಗುತ್ತಿದ್ದರೂ ಕೆಲವು ಭಾಗದಲ್ಲಿ ಬಿಸಿಲ ಝಳವೂ ಇದೆ. ಆದರೆ ನಿರಂತರವಾಗಿ ಮಳೆಯಾಗುವ ನಿರೀಕ್ಷೆ ಇರುವ ಹಿನ್ನೆಲೆಯಲ್ಲಿ ಬಿಸಿಲ ಝಳ ಇಳಿಕೆಯಾಗುವ ಸಾಧ್ಯತೆ ದಟ್ಟವಾಗಿದೆ.

ಏಪ್ರಿಲ್‌ 10ಕ್ಕೆ: ಏಪ್ರಿಲ್‌ 10  ಗುರುವಾರ ಉತ್ತರ ಕನ್ನಡ, ಉಡುಪಿ ಹಾಗೂ ದಕ್ಷಿಣ ಕನ್ನಡ ಜಿಲ್ಲೆಗಳಲ್ಲಿ, ಗದಗ, ಕೊಪ್ಪಳ, ಯಾದಗಿರಿ, ರಾಯಚೂರು ಜಿಲ್ಲೆಗಳಲ್ಲಿ ಭರ್ಜರಿ ಮಳೆಯಾಗಲಿದೆ. ಇನ್ನು ಶಿವಮೊಗ್ಗ, ಚಿಕ್ಕಮಗಳೂರು, ಹಾಸನ, ಕೊಡಗು ಹಾಗೂ ಬೆಂಗಳೂರಿನಲ್ಲಿ ಮಳೆಯಾಗುವ ಸಾಧ್ಯತೆ ಇದೆ.

Leave a Reply

Your email address will not be published. Required fields are marked *