ಬಂಗಾಳ ಕೊಲ್ಲಿಯಲ್ಲಿ ಚಂಡಮಾರುತ : ರಾಜ್ಯದ ಕೆಲವು ಜಿಲ್ಲೆಗಳಿಗೆ ಆರೆಂಜ್ ಅಲರ್ಟ್ ಘೋಷಣೆ

ಬಂಗಾಳ ಕೊಲ್ಲಿಯಲ್ಲಿ ಚಂಡಮಾರುತ : ರಾಜ್ಯದ ಕೆಲವು ಜಿಲ್ಲೆಗಳಿಗೆ ಆರೆಂಜ್ ಅಲರ್ಟ್ ಘೋಷಣೆ

ನೈಋತ್ಯ ಬಂಗಾಳ ಕೊಲ್ಲಿಯ ಮೇಲೆ ಉಂಟಾಗಿರುವ ಚಂಡಮಾರುತ ಮತ್ತು ಅರಬ್ಬಿ ಸುಮುದ್ರದಲ್ಲಿನ ವಾಯುಭಾರ ಕುಸಿತದ ಪರಿಣಾಮ ರಾಜ್ಯದ ಕರಾವಳಿ ಮತ್ತು ದಕ್ಷಿಣ ಒಳನಾಡಿನ 10 ಜಿಲ್ಲೆಗಳಿಗೆ ಅಕ್ಟೋಬರ್ 17 ರಂದು ಹವಾಮಾನ ಇಲಾಖೆ ಆರೆಂಜ್ ಅಲರ್ಟ್ ಘೋಷಿಸಿದೆ.

ಈ ಜಿಲ್ಲೆಗಳಲ್ಲಿ ಆರೆಂಜ್ ಅಲರ್ಟ್: ಅಕ್ಟೋಬರ್ 17 ರ ಬೆಳಗ್ಗೆಯಿಂದ 18 ರ ಬೆಳಗಿನ ಜಾವದವರೆಗೆ ಕರಾವಳಿ ಜಿಲ್ಲೆಗಳಾದ ಉಡುಪಿ, ದಕ್ಷಿಣ ಕನ್ನಡ, ಉತ್ತರ ಕನ್ನಡ ಹಾಗೂ ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ಹಾಸನ, ಕೊಡಗು, ಕೋಲಾರ, ರಾಮನಗರ, ಶಿವಮೊಗ್ಗ, ತುಮಕೂರು ಜಿಲ್ಲೆಗಳಿಗೆ ಆರೆಂಜ್ ಅಲರ್ಟ್ ಕೊಡಲಾಗಿದೆ.

ಅಲ್ಲದೆ ಪ್ರತ್ಯೇಕವಾಗಿ ಅಕ್ಟೋಬರ್ 15 ರಿಂದ 17ರ ವರೆಗೆ ಉಡುಪಿ, ದಕ್ಷಿಣ ಕನ್ನಡ, ಉತ್ತರ ಕನ್ನಡ, ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಚಿಕ್ಕಬಳ್ಳಾಪುರ, ರಾಮನಗರ, ತುಮಕೂರು ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಕೊಡಲಾಗಿದೆ. ಉಳಿದಂತೆ ಉತ್ತರ ಒಳನಾಡಿನ ಬೆಳಗಾವಿ, ಧಾರವಾಡ, ಗದಗ ಜಿಲ್ಲೆಗಳಿಗೆ ಅಕ್ಟೋಬರ್ 17 ರಿಂದ 18ರ ವರೆಗೆ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. ದಕ್ಷಿಣ ಒಳನಾಡಿನ ಮತ್ತು ಉತ್ತರ ಒಳನಾಡಿನ ಹಲವು ಜಿಲ್ಲೆಗಳಿಗೆ ಸಹ ಅಕ್ಟೋಬರ್ 17 ರಂದು ಯೆಲ್ಲೋ ಅಲರ್ಟ್ ಇರಲಿದೆ.

ನಿನ್ನೆಯಿಂದ ಕರಾವಳಿ ಕರ್ನಾಟಕದಲ್ಲಿ ಹೆಚ್ಚು ಮಳೆಯಾಗಿದ್ದು, ದಕ್ಷಿಣ ಒಳನಾಡಿನಲ್ಲಿ ಸಾಮಾನ್ಯ ಮತ್ತು ಉತ್ತರ ಒಳನಾಡಿನಲ್ಲಿ ಕಡಿಮೆ ಮಳೆಯಾಗಿದೆ. ಉಡುಪಿ ಜಿಲ್ಲೆಯ ಕಾರ್ಕಳ, ಚಿಕ್ಕಮಗಳೂರು ಜಿಲ್ಲೆಯ ಬಾಳೆಹೊನ್ನೂರಿನಲ್ಲಿ ಮತ್ತು ಮೈಸೂರಿನ ನಂಜನಗೂಡಿನಲ್ಲಿ ಅತಿ ಹೆಚ್ಚು ಅಂದರೆ 5 ಸೆಂ.ಮೀ ಮಳೆ ದಾಖಲಾಗಿದೆ – ಬೆಂಗಳೂರು ಹವಾಮಾನ ಕೇಂದ್ರದ ಹಿರಿಯ ವಿಜ್ಞಾನಿ ಡಾ.ಎನ್. ಪುವಿಯರಸನ್

Leave a Reply

Your email address will not be published. Required fields are marked *