ಬೆಂಗಳೂರು: ಬಂಗಾಳಕೊಲ್ಲಿಯಲ್ಲಿ ಚಂಡಮಾರುತ ರೂಪುಗೊಂಡಿದ್ದು, ಅದರ ಪರಿಣಾಮ ಕರ್ನಾಟಕ ಸೇರಿ ಹಲವು ರಾಜ್ಯಗಳ ಮೇಲಾಗಲಿದೆ. ಕರ್ನಾಟಕದಾದ್ಯಂತ ಮಳೆ ಯ ಪ್ರಮಾಣ ಮತ್ತಷ್ಟು ಹೆಚ್ಚಳವಾಗಲಿದೆ. ಆಗಸ್ಟ್ 19ರಿಂದ ಕರಾವಳಿ ಜಿಲ್ಲೆಗಳಲ್ಲಿ ಭಾರಿ ಮಳೆಯಾಗಲಿದ್ದು, ರೆಡ್ ಅಲರ್ಟ್ ಘೋಷಿಸಲಾಗಿದೆ. ಕೇವಲ ಕರಾವಳಿ ಜಿಲ್ಲೆಗಳು ಮಾತ್ರವಲ್ಲದೆ ದಕ್ಷಿಣ ಒಳನಾಡಿನ ಕೆಲವೆಡೆ ಕೂಡ ಹೆಚ್ಚು ಮಳೆಯಾಗಲಿದೆ.
ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ, ಚಿಕ್ಕಮಗಳೂರು, ಶಿವಮೊಗ್ಗ ಜಿಲ್ಲೆಗಳಿಗೆ ರೆಡ್ ಅಲರ್ಟ್ ಘೋಷಿಸಲಾಗಿದೆ. ಬೆಳಗಾವಿ, ಬೀದರ್, ಕಲಬುರಗಿ, ಕೊಪ್ಪಳ, ರಾಯಚೂರು, ವಿಜಯಪುರ, ವಿಜಯನಗರ, ಯಾದಗಿರಿ, ಚಿಕ್ಕಬಳ್ಳಾಪುರ, ಚಿತ್ರದುರ್ಗ, ದಾವಣಗೆರೆ, ಕೋಲಾರ, ಮೈಸೂರು ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. ದಾವಣಗೆರೆಗೆ ಆರೆಂಜ್ ಅಲರ್ಟ್ ಘೋಷಿಸಲಾಗಿದೆ.
ತುಮಕೂರು, ರಾಮನಗರ, ಮಂಡ್ಯ, ಚಾಮರಾಜನಗರ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ ಜಿಲ್ಲೆಗಳಲ್ಲೂ ಮಳೆಯಾಗಲಿದೆ. ಆಗುಂಬೆ, ಕಮ್ಮರಡಿ, ಗೇರುಸೊಪ್ಪ, ಶೃಂಗೇರಿ, ಸಿದ್ದಾಪುರ, ಕೊಪ್ಪ, ಧರ್ಮಸ್ಥಳ, ಭಾಗಮಂಡಲದಲ್ಲಿ ಅತ್ಯಧಿಕ ಮಳೆಯಾಗಿದೆ. ಮೂಡುಬಿದಿರೆ, ಜಯಪುರ, ಬೆಳ್ತಂಗಡಿ, ಸುಳ್ಯ, ಮುನಿರಾಬಾದ್, ಲೋಂಡಾ, ಕಳಸ, ಕದ್ರಾ, ಸೋಮವಾರಪೇಟೆ, ಶಕ್ತಿನಗರ, ನಾಪೋಕ್ಲು, ಕೊಟ್ಟಿಗೆಹಾರ, ಖಾನಾಪುರ, ಹುಂಚದಕಟ್ಟೆ, ಬಂಟವಾಳ, ಯಲ್ಲಾಪುರದಲ್ಲಿ ಮಳೆಯಾಗಿದೆ.
ನೆಲೋಗಿ, ಮುಲ್ಕಿ, ಮಂಕಿ, ಮಾಣಿ, ಮಂಗಳೂರು, ಕಾರ್ಕಳ, ಜೇವರ್ಗಿ, ಹೊನ್ನಾವರ, ಬೆಳಗಾವಿ, ಬಾಳೆಹೊನ್ನೂರು, ಔರಾದ್, ಝಲ್ಕಿ, ಉಪ್ಪಿನಂಗಡಿ, ತ್ಯಾಗರ್ತಿ, ಸೇಡಬಾಳ, ಪುತ್ತೂರು, ನಿಪ್ಪಾಣಿ, ಎನ್ಆರ್ಪುರ, ಕುಮಟಾ, ಹಳಿಯಾಳ, ಬೀದರ್ನಲ್ಲಿ ಮಳೆಯಾಗಿದೆ.
ಸಿಂದಗಿ, ಶಿರಹಟ್ಟಿ, ಬೈಲಹೊಂಗಲ, ಯಲಬುರ್ಗಾ, ನರಗುಂದ, ಕುಂದಾಪುರ, ಕೋಟ, ಹುಕ್ಕೇರಿ, ಹಾರಂಗಿ, ದಾವಣಗೆರೆ, ಚಿತ್ತಾಪುರ, ಬೆಂಗಳೂರು, ಬಾದಾಮಿ, ಅಥಣಿ, ಅರಕಲಗೂಡು, ಅಂಕೋಲಾ, ಆನವಟ್ಟಿಯಲ್ಲಿ ಮಳೆಯಾಗಿದೆ.
ಬೆಂಗಳೂರಿನಲ್ಲಿ ಕೂಡ ಕಳೆದ ಎರಡು ವಾರಗಳಿಂದ ನಿರಂತರವಾಗಿ ಮಳೆಯಾಗುತ್ತಿದೆ. ಎಚ್ಎಎಲ್ನಲ್ಲಿ 28.2 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 19.6 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ನಗರದಲ್ಲಿ 26.8 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 20.1 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಕೆಐಎಎಲ್ನಲ್ಲಿ 28.6 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 20.9 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಜಿಕೆವಿಕೆಯಲ್ಲಿ 27.2 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 18.6 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ ದಾಖಲಾಗಿದೆ.
ಹೊನ್ನಾವರದಲ್ಲಿ 28.7 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 23.5 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಕಾರವಾರದಲ್ಲಿ 28.2 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 26.2 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಮಂಗಳೂರು ಏರ್ಪೋರ್ಟ್ನಲ್ಲಿ 26.2 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 23.1 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಶಕ್ತಿನಗರದಲ್ಲಿ 27.2 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 21.5 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ ದಾಖಲಾಗಿದೆ.
ಬೆಳಗಾವಿ ಏರ್ಪೋರ್ಟ್ನಲ್ಲಿ 25.0 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 19.8 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಬೀದರ್ನಲ್ಲಿ 29.4 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 20.8 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ವಿಜಯಪುರದಲ್ಲಿ 27.5 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 21.8 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಧಾರವಾಡದಲ್ಲಿ 25.2 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 19.8 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ ದಾಖಲಾಗಿದೆ.
ಗದಗದಲ್ಲಿ 28.2 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 21.0 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಕಲಬುರಗಿಯಲ್ಲಿ 29.7 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 22.4 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಹಾವೇರಿಯಲ್ಲಿ 24.6 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 21.4 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಕೊಪ್ಪಳದಲ್ಲಿ 29.1 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 23.8 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ರಾಯಚೂರಿನಲ್ಲಿ 32.4 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 22.6 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ ದಾಖಲಾಗಿದೆ.
For More Updates Join our WhatsApp Group :
