ಚಿತ್ರದುರ್ಗ ಮೂಲದ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ನಟ ದರ್ಶನ್ ಮತ್ತು ಪಟಾಲಾಂ ಗ್ಯಾಗ್ ಜೈಲುಪಾಲಾಗಿದೆ. ಈ ಪ್ರಕರಣದ ತನಿಖೆಯನ್ನು ಪೊಲೀಸರು ಚುರುಕುಗೊಳಿಸಿದ್ದು, ಮಹತ್ವದ ಸಾಕ್ಷ್ಯಗಳ ಸಂಗ್ರಹಕ್ಕೆ ಮುಂದಾಗಿದ್ದಾರೆ. ಮತ್ತೊಂದೆಡೆ ಈಗಾಗಲೇ ಪುಂಡಾಟ ಮೆರೆದ ಅಂಧಾಭಿಮಾನಿಗಳಿಗೆ ಬಿಸಿ ಮುಟ್ಟಿಸಿದ್ದರು.
ಇದರ ನಡುವೆಯೇ ಇದೀಗ ಮತ್ತೊಬ್ಬ ಅಂಧಾಭಿಮಾನ ಮೆರೆದಿರುವ ವಿಡಿಯೋ ಭಾರೀ ವೈರಲ್ ಆಗುತ್ತಿದೆ.
ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಜೈಲು ಸೇರಿರುವ ದರ್ಶನ್ನ್ನು ಹೊರತರಲು ಪತ್ನಿ ವಿಜಯಲಕ್ಷ್ಮಿ ಹಾಗೂ ಕುಟುಂಬಸ್ಥರು ಇನ್ನಿಲ್ಲದ ಪ್ರಯತ್ನಗಳನ್ನು ಮಾಡುತ್ತಿದ್ದಾರೆ. ಮತ್ತೊಂದೆಡೆ ಕೆಲ ಅಭಿಮಾನಿಗಳು ಅಂಧಾಭಿಮಾನಿಮಾ ಮೆರೆಯುತ್ತಿದ್ದಾರೆ. ಇನ್ನು ಈಗಾಗಲೇ ಅಂಧಾಭಿಮಾನ ಮೆರೆದ ಕೆಲವರನ್ನು ಪೊಲೀಸರು ಹೆಡೆಮುರಿ ಕಟ್ಟಿದ್ದಾರೆ.
ನಟ ದರ್ಶನ್ ಜೈಲಿಗೆ ಹೋದಾಗಿನಿಂದ ಕೆಲವು ಪುಂಡಾಟ ಮೆರೆದು ಫ್ಯಾನ್ ವಾರ್ ಮಾಡುತ್ತಿದ್ದರೆ, ಇನ್ನೂ ಕೆಲವರು ಎಲ್ಲೆಲ್ಲೋ ಅಚ್ಚೆ ಹಾಕಿಸಿಕೊಂಡು ಅಂಧಾಭಿಮಾನ ಮೆರೆಯುತ್ತಿದ್ದಾರೆ. ಅಲ್ಲದೆ, ನಟ ದರ್ಶನ್ ಪರ-ವಿರೋಧದ ಚರ್ಚೆಗಳು ಕೂಡ ಸಾಮಾಜಿಕ ಜಾಲತಾಣದಲ್ಲಿ ಆಗುತ್ತಲೇ ಇವೆ.