ರಾಹುಲ್ ಗಾಂಧಿ ಟೀಕೆ ನಡುವೆ, ವಿಶ್ವ ವೇದಿಕೆಯಲ್ಲಿ ಭಾರತ ಆರ್ಥಿಕತೆಗೆ ಬೆಂಬಲ.
ಬೆಂಗಳೂರು : ಭಾರತದ ಆರ್ಥಿಕತೆ ಬಗ್ಗೆ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಟೀಕೆ ನಡುವೆ ದಾವೋಸ್ನಲ್ಲಿ ನಡೆದ ವರ್ಲ್ಡ್ ಎಕನಾಮಿಕ್ ಫೋರಂನಲ್ಲಿ ಭಾಗಿಯಾಗಿದ್ದ ಕರ್ನಾಟಕ ಡಿಸಿಎಂ ಡಿ.ಕೆ. ಶಿವಕುಮಾರ್ ಆಡಿರುವ ಮಾತುಗಳೀಗ ಬಿಜೆಪಿಗೆ ಅಸ್ತ್ರವಾಗಿ ಮಾರ್ಪಟ್ಟಿದೆ. ವಿಶ್ವ ಆರ್ಥಿಕ ವೇದಿಕೆಯಲ್ಲಿ ಮಾತನಾಡಿರುವ ಡಿಕೆಶಿ, ಇಂದು ಜಗತ್ತು ಭಾರತವನ್ನು ಹೆಚ್ಚಿನ ವಿಶ್ವಾಸದೊಂದಿಗೆ ನೋಡುತ್ತಿದೆ. ನಮ್ಮ ಸಾಧನೆಗಳ ಮೇಲೂ, ಮುಂದೆ ಸಾಗುತ್ತಿರುವ ನಮ್ಮ ನಿರಂತರ ವೇಗದ ಮೇಲೂ ಜಾಗತಿಕ ವಿಶ್ವಾಸ ಹೆಚ್ಚುತ್ತಿದೆ ಎಂದಿದ್ದರು. ಇದೇ ವಿಚಾರವನ್ನಿಟ್ಟುಕೊಂಡು ಕಾಂಗ್ರೆಸ್ಗೀಗ ಬಿಜೆಪಿ ತಿವಿದಿದೆ.
ಪ್ರಧಾನಿ ನರೇಂದ್ರ ಮೋದಿ ಅವರ ನೇತೃತ್ವದಲ್ಲಿ ಭಾರತದ ಬೆಳವಣಿಗೆ ಎಷ್ಟೊಂದು ವೇಗವಾಗಿದೆ ಎಂಬುದನ್ನು ಈಗ ವಿರೋಧ ಪಕ್ಷವೂ ಸಹ ಒಪ್ಪಿಕೊಳ್ಳಲು ಆರಂಭಿಸಿದೆ. ಒಂದು ಕಡೆ ರಾಹುಲ್ ಗಾಂಧಿ ‘ಭಾರತದ ಆರ್ಥಿಕತೆ ಸತ್ತಿದೆ’ ಎಂಬ ಜಪವನ್ನೇ ಮುಂದುವರಿಸುತ್ತಿರುವಾಗ, ಮತ್ತೊಂದು ಕಡೆ ಕರ್ನಾಟಕದ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ವಿಶ್ವ ಆರ್ಥಿಕ ವೇದಿಕೆಯಲ್ಲಿ ಅದನ್ನು ಖಂಡಿಸಿರೋದನ್ನು ನೋಡುವುದೇ ಸಂತೋಷಕರವಾಗಿದೆ. ಸತ್ತಿರೋದು ಭಾರತದ ಆರ್ಥಿಕತೆಯಲ್ಲ, ನಿಮ್ಮ ಹೈಕಮಾಂಡ್ನ ವಾಸ್ತವದ ಜ್ಞಾನ ಎಂಬುದನ್ನು ದೃಢಪಡಿಸಿದ್ದಕ್ಕೆ ಧನ್ಯವಾದ ಡಿಕೆಶಿ ಅವರೇ ಎಂದು ಬಿಜೆಪಿ ಎಕ್ಸ್ ಪೋಸ್ಟ್ ಮಾಡಿದೆ.
For More Updates Join our WhatsApp Group :




