ಬೆಂಗಳೂರು: ನವೆಂಬರ್ ಕ್ರಾಂತಿಯ ಊಹಾಪೋಹಗಳು ಹೆಚ್ಚುತ್ತಿರುವ ಬೆನ್ನಲ್ಲೇ, ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರ ದೆಹಲಿ ಭೇಟಿ ಕುತೂಹಲಕ್ಕೆ ಕಾರಣವಾಗಿದೆ. ಆದರೆ, ಈ ಕುರಿತು ಸ್ಪಷ್ಟನೆ ನೀಡಿರುವ ಅವರು, ದೆಹಲಿಯಲ್ಲಿ ಹೈಕಮಾಂಡ್ ನಾಯಕರನ್ನು ಭೇಟಿ ಮಾಡಿಲ್ಲ, ಮಾಡುತ್ತಲೂ ಇಲ್ಲ ಎಂದು ತಿಳಿಸಿದ್ದಾರೆ. ಎಲ್ಲಾ ಸುಳ್ಳು. ನಾನು ಯಾರನ್ನೂ ಭೇಟಿ ಮಾಡಿಲ್ಲ, ಭೇಟಿ ಮಾಡೋದೂ ಇಲ್ಲ ಎಂದು ಅವರು ಖಡಾಖಂಡಿತವಾಗಿ ಹೇಳಿದ್ದಾರೆ.
ದೆಹಲಿ ಭೇಟಿಯ ಮುಖ್ಯ ಉದ್ದೇಶ ರಾಜ್ಯದ ಪ್ರಮುಖ ಜಲ ವಿವಾದಗಳಾದ ಕಾವೇರಿ, ಮೇಕೆದಾಟು ಮತ್ತು ಕೃಷ್ಣಾ ನದಿ ವಿಚಾರಗಳ ಕುರಿತು ಚರ್ಚೆ ನಡೆಸುವುದಾಗಿತ್ತು ಎಂದು ಡಿಕೆಶಿ ಮಾಹಿತಿ ನೀಡಿದ್ದಾರೆ. ಮಹದಾಯಿ ವಿಚಾರದಲ್ಲೂ ಕೆಲವು ಅಂಶಗಳಿದ್ದು, ಸದ್ಯಕ್ಕೆ ಆ ಬಗ್ಗೆ ಮಾತನಾಡಲು ಬಯಸುವುದಿಲ್ಲ ಎಂದು ಹೇಳಿದ್ದಾರೆ. ಮಹದಾಯಿ ಯೋಜನೆಗೆ ಸಂಬಂಧಿಸಿದಂತೆ ಕೆಲವು ದಾಖಲೆಗಳನ್ನು ಸಿದ್ಧಪಡಿಸುವಂತೆ ಅಧಿಕಾರಿಗಳಿಗೆ ಸೂಚಿಸಿರುವುದಾಗಿ ತಿಳಿಸಿದ್ದಾರೆ. ಬುಧವಾರ ರಾತ್ರಿ ದೆಹಲಿಯಲ್ಲೇ ತಂಗಿರುವ ಡಿಕೆ ಶಿವಕುಮಾರ್ ಇಂದು ಬೆಂಗಳೂರಿಗೆ ವಾಪಸಾಗಲಿದ್ದಾರೆ.
For More Updates Join our WhatsApp Group :
