ಬೆಂಗಳೂರು : ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ನಟ ದರ್ಶನ್, ಪವಿತ್ರಾಗೌಡ ಸೇರಿ 7 ಆರೋಪಿಗಳ ಜಾಮೀನು ರದ್ಧು ಮಾಡಿ ಸುಪ್ರೀಂಕೋರ್ಟ್ ಆದೇಶ ಹೊರಡಿಸಿದೆ. ಹೈಕೋರ್ಟ್ ಆದೇಶಗಳ ಲೋಪವನ್ನು ಸುಪ್ರೀಂ ಎತ್ತಿ ತೋರಿಸಿದೆ. ಆ ಮೂಲಕ ಇನ್ನು ಮುಂದೆ ಆರೋಪಿ ಜೈಲಿನಲ್ಲಿ ಸಿಗರೇಟ್ ಸೇದಿದರೆ, ಯಾವುದೇ ಫೋಟೋ ಕಂಡು ಬಂದರೆ ಜೈಲು ಅಧಿಕಾರಿಗಳ ವಿರುದ್ಧ ಕ್ರಮಕೈಗೊಳ್ಳಲಾಗುವುದು ಎಂದು ಸುಪ್ರೀಂಕೋರ್ಟ್ ಎಚ್ಚರಿಕೆ ನೀಡಿದೆ.
ಸುಪ್ರೀಂ ಕೋರ್ಟ್ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಹೈಕೋರ್ಟ್‌ನ ವೈಫಲ್ಯವನ್ನು ತೀವ್ರವಾಗಿ ಖಂಡಿಸಿದೆ. ನಟ ದರ್ಶನ್ಗೆ ಜೈಲಿನಲ್ಲಿ ವಿಶೇಷ ಆತಿಥ್ಯ ನೀಡಲಾಗುತ್ತಿದೆ ಎಂದು ಆರೋಪಿಸಿ, ಜೈಲು ಅಧಿಕಾರಿಗಳ ವಿರುದ್ಧ ಕ್ರಮ ಕೈಗೊಳ್ಳುವಂತೆ ಸೂಚಿಸಿದೆ. ಭವಿಷ್ಯದಲ್ಲಿ ಇಂತಹ ಘಟನೆಗಳು ಪುನರಾವರ್ತನೆಯಾಗದಂತೆ ಎಲ್ಲಾ ಹೈಕೋರ್ಟ್ ಮತ್ತು ಜೈಲುಗಳಿಗೆ ಸೂಚಿಸಲಾಗಿದೆ.
For More Updates Join our WhatsApp Group :