ದರ್ಶನ್ ವಿರುದ್ಧ ಜೈಲು ವಿವಾದ – ಪತ್ನಿ ನೀಡಿದ ತಿರುಗೇಟು
ದರ್ಶನ್ ಅವರ ‘ಡೆವಿಲ್’ ಸಿನಿಮಾ ರಿಲೀಸ್ಗೆ ರೆಡಿ ಇದೆ. ಈ ಸಂದರ್ಭದಲ್ಲಿ ಅವರ ಬಗ್ಗೆ ಒಂದು ಗಂಭೀರ ಆರೋಪ ಕೇಳಿ ಬಂದಿತ್ತು. ಜೈಲಿನಲ್ಲಿ ಸಹ ಕೈದಿಗಳ ಮೇಲೆ ನಟ ದರ್ಶನ್ ಹಲ್ಲೆ ಮಾಡಿದ್ದಾರೆ ಎಂದು ಹೇಳಲಾಗಿತ್ತು. ಈ ಸುದ್ದಿ ಸಂಚಲನ ಸೃಷ್ಟಿ ಮಾಡಿತ್ತು. ಜೈಲಿಗೆ ಹೋದರೂ ದರ್ಶನ್ ಬದಲಾಗಲಿಲ್ಲವಲ್ಲ ಎಂದು ಅನೇಕರು ಅಭಿಪ್ರಾಯಪಟ್ಟಿದ್ದರು. ಈ ವಿಷಯ ದರ್ಶನ್ ಪತ್ನಿ ವಿಜಯಲಕ್ಷ್ಮೀ ಅವರಿಗೆ ಬೇಸರ ಮೂಡಿಸಿದೆ. ಈ ಬಗ್ಗೆ ಅವರು ಸ್ಪಷ್ಟನೆ ನೀಡಿದ್ದಾರೆ
ದರ್ಶನ್ ಮೇಲಿನ ಎಲ್ಲಾ ಆರೋಪಗಳು ಸುಳ್ಳು ಎಂದು ಅವರು ಸೋಶಿಯಲ್ ಮೀಡಿಯಾದಲ್ಲಿ ಪೋಸ್ಟ್ ಹಾಕಿದ್ದಾರೆ. ‘ದರ್ಶನ್ ಜೈಲಲ್ಲಿ ಯಾರ ಮೇಲೆಯೂ ಹಲ್ಲೆ ಮಾಡಿಲ್ಲ. ನಾನು ಖುದ್ದಾಗಿ ಜೈಲಿಗೆ ಭೇಟಿ ಮಾಡಿ ಅಧಿಕಾರಿಗಳ ಜೊತೆ ಮಾತನಾಡಿದ್ದೇನೆ. ಅವರ ಮೇಲಿನ ಆರೋಪಗಳೆಲ್ಲ ಉದ್ದೇಶಪೂರ್ವಕವಾಗಿ ಮಾಡಲಾಗಿದೆ’ ಎಂದು ವಿಜಯಲಕ್ಷ್ಮೀ ಬರೆದುಕೊಂಡಿದ್ದಾರೆ.
‘ದರ್ಶನ್ ಕುರಿತ ವದಂತಿಗಳಿಂದ ನನಗೆ ನೋವುಂಟಾಗಿ. ಸತ್ಯವು ಸ್ವಲ್ಪ ಸಮಯದವರೆಗೆ ಮೌನವಾಗಿರಬಹುದು. ಆದರೆ ಎಂದಿಗೂ ತಲೆಬಾಗುವುದಿಲ್ಲ. ಸುಳ್ಳುಗಳು ಜೋರಾಗಿ ಪ್ರತಿಧ್ವನಿಸುತ್ತದೆ’ ಎಂದು ವಿಜಯಲಕ್ಷ್ಮೀ ಪೋಸ್ಟ್ ಮಾಡಿದ್ದಾರೆ.
For More Updates Join our WhatsApp Group :



