ಮನೆಯೂಟಕ್ಕೆ ಅನುಮತಿ ಕೋರಿ ದರ್ಶನ್ ಸಲ್ಲಿಸಿದ್ದ ಅರ್ಜಿ ವಜಾ

Renukaswamy murder case: Darshan judicial custody extended till August 28

Renukaswamy murder case: Darshan judicial custody extended till August 28

ಬೆಂಗಳೂರು: ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಬಂಧನಕ್ಕೊಳಗಾಗಿರುವ ನಟ ದರ್ಶನ್‌ ಅವರು ಮನೆ ಊಟಕ್ಕೆ ಕೋರಿ ಸಲ್ಲಿಸಿದ್ದ ಅರ್ಜಿಯನ್ನು ನಗರದ 24ನೇ ಎಸಿಎಂಎಂ ನ್ಯಾಯಾಲಯ ವಜಾಗೊಳಿಸಿದೆ.

ಆರೋಪಿಗೆ ಎಲ್ಲಾ ಮೂಲಭೂತ ಸೌಕರ್ಯ ಒದಗಿಸಲು ಸಾಧ್ಯವಿಲ್ಲ ಎಂದು ಅಭಿಪ್ರಾಯಪಟ್ಟಿರುವ ನ್ಯಾಯಾಲಯ, ದರ್ಶನ್ ಅರ್ಜಿಯನ್ನು ವಜಾ ಮಾಡಿದೆ. ಇದರಿಂದ ದರ್ಶನ್ ಅವರಿಗೆ ಹೈಕೋರ್ಟ್ ಮೊರೆ ಹೋಗುವುದೊಂದೇ ಮುಂದಿನ ಆಯ್ಕೆಯಾಗಿದೆ.

ಜೈಲಿನಲ್ಲಿ ನೀಡುತ್ತಿರುವ ಆಹಾರವನ್ನು ತಮ್ಮಿಂದ ಜೀರ್ಣಿಸಿಕೊಳ್ಳಲಾಗದೆ ಅತಿಸಾರ ಉಂಟಾಗಿದ್ದು, ಪದೇ ಪದೆ ಭೇದಿಯಾಗುತ್ತಿದೆ. ಪರಿಣಾಮ ದೇಹದ ತೂಕ ಕಡಿಮೆಯಾಗಿದೆ. ಈ ಹಿನ್ನೆಲೆಯಲ್ಲಿ ಮನೆ ಆಹಾರದೊಂದಿಗೆ ಹಾಸಿಗೆ, ಪುಸ್ತಕಗಳನ್ನ ತರಿಸಿಕೊಳ್ಳಲು ಜೈಲು ಅಧಿಕಾರಿಗಳಿಗೆ ಮೌಖಿಕವಾಗಿ ಮನವಿ ಮಾಡಿದ್ದೆ. ಆದರೆ, ಅವರು ಇದಕ್ಕೆ ಒಪ್ಪಿರಲಿಲ್ಲ ಎಂದಿದ್ದ ದರ್ಶನ್, ಅನುಮತಿ ಕಲ್ಪಿಸುವಂತೆ ಹೈಕೋರ್ಟ್​​ಗೆ ರಿಟ್ ಅರ್ಜಿ ಸಲ್ಲಿಸಿದ್ದರು.

Leave a Reply

Your email address will not be published. Required fields are marked *