ಕ್ಷಣಗಣನೆ ಆರಂಭ, ಮತದಾರರು ಸಜ್ಜಾಗಿದ್ದಾರೆ.
ಬೆಂಗಳೂರು: ಕರ್ನಾಟಕದಲ್ಲಿ ಉಪಚುನಾವಣೆ ಕದನ ಕ್ಲೈಮ್ಯಾಕ್ಸ್ ಘಟ್ಟಕ್ಕೆ ತಲುಪಿದೆ. ಆಡಳಿತಾರೂಢ ಕಾಂಗ್ರೆಸ್‌ಗೆ ಪ್ರತಿಷ್ಠೆ ಮತ್ತು ಪ್ರತಿಪಕ್ಷ ಬಿಜೆಪಿ ಸವಾಲಿನ ಪ್ರಶ್ನೆಯಾಗಿರುವ ದಾವಣಗೆರೆ ದಕ್ಷಿಣ ಮತ್ತು ಬಾಗಲಕೋಟೆ ಎರಡು ಕ್ಷೇತ್ರಗಳಲ್ಲಿ ಮತದಾನಕ್ಕೆ ಕ್ಷಣಗಣನೆ ಶುರುವಾಗಿದೆ. ಒಂದೆಡೆ ಚುನಾವಣೆ ಅಧಿಕಾರಿಗಳು ಕೊನೆಯ ಹಂತದ ಎಲ್ಲಾ ಸಿದ್ಧತೆಗಳನ್ನು ಮಾಡಿಕೊಂಡಿದ್ದಾರೆ. ಯಾವುದೇ ಅಹಿತಕರ ಘಟನೆಗಳು ನಡೆಯದಂತೆ ಬಿಗಿ ಪೊಲೀಸ್ ಭದ್ರತೆ ಕೈಗೊಳ್ಳಲಾಗಿದೆ. ಮತದಾರರು ಕೂಡ ತಮ್ಮ ನೆಚ್ಚಿನ ಅಭ್ಯರ್ಥಿಗಳಿಗೆ ವೋಟ್ ಮಾಡಲು ಸಜ್ಜಾಗಿದ್ದಾರೆ.
ಕ್ಲೈಮ್ಯಾಕ್ಸ್ ಹಂತಕ್ಕೆ ಉಪಚುನಾವಣೆ
ಜಿದ್ದಾಜಿದ್ದಿಗೆ ಸಾಕ್ಷಿಯಾಗಿರುವ ದಾವಣಗೆರೆ ದಕ್ಷಿಣ ಮತ್ತು ಬಾಗಲಕೋಟೆ 2 ಕ್ಷೇತ್ರಗಳ ಉಪಚುನಾವಣೆ ಸಮರ ಕ್ಲೈಮ್ಯಾಕ್ಸ್ ಹಂತಕ್ಕೆ ಬಂದಿದೆ. ಮತದಾನಕ್ಕೆ ಕ್ಷಣಗಣನೆ ಆರಂಭವಾಗಿದೆ. ಮಂಗಳವಾರ ಸಂಜೆ 5.30ಕ್ಕೆ ಬಹಿರಂಗ ಪ್ರಚಾರಕ್ಕೆ ತೆರೆ ಬಿದ್ದಿತ್ತು. ಕಳೆದೊಂದು ವಾರದಿಂದ ಕ್ಷೇತ್ರದಲ್ಲೇ ಬೀಡುಬಿಟ್ಟು ಬಿರುಸಿನ ಪ್ರಚಾರ ನಡೆಸಿದ್ದ ನಾಯಕರು ಕ್ಷೇತ್ರಬಿಟ್ಟು ವಾಪಸ್ ತೆರಳಿದ್ದಾರೆ. ಇಂದು ಅಭ್ಯರ್ಥಿಗಳು ಮನೆಮನೆ ಪ್ರಚಾರ ನಡೆಸಲಿದ್ದು, ನಾಳೆ ಬೆಳಗ್ಗೆ 7 ಗಂಟೆಯಿಂದ ಸಂಜೆ 6ಗಂಟೆಯವರೆೆಗೆ ಮತದಾನ ನಡೆಯಲಿದೆ.
ದಾವಣಗೆರೆ ದಕ್ಷಿಣದಲ್ಲಿ ಒಟ್ಟು 284 ಮತಗಟ್ಟೆಗಳ ನಿರ್ಮಾಣ ಮಾಡಲಾಗಿದ್ದು, ಇದರಲ್ಲಿ 76 ಸೂಕ್ಷ್ಮ ಮತಗಟ್ಟೆಗಳೆಂದು ಗುರುತಿಸಲಾಗಿದೆ. 1,489 ಚುನಾವಣಾ ಸಿಬ್ಬಂದಿ ನಿಯೋಜನೆ ಮಾಡಲಾಗಿದೆ. ಮತಗಟ್ಟೆಯ 200 ಮೀಟರ್ ವ್ಯಾಪ್ತಿಯಲ್ಲಿ ನಿಷೇಧಾಜ್ಞೆ ಜಾರಿಮಾಡಲಾಗಿದೆ. ಎಲ್ಲ ಮತಗಟ್ಟೆಯಲ್ಲಿ ವೆಬ್‌ಕಾಸ್ಟಿಂಗ್ ವ್ಯವಸ್ಥೆ ಇದೆ. ಇನ್ನು ಒಟ್ಟು 2,31072 ಮತದಾರರಿದ್ದು, ಮಹಿಳಾ ಮತದಾರರೇ ಹೆಚ್ಚಿದ್ದಾರೆ. ಕಣದಲ್ಲಿ 25 ಅಭ್ಯರ್ಥಿಗಳಿದ್ದಾರೆ. ಯಾವುದೇ ಅಹಿತಕರ ಘಟನೆಗಳು ನಡೆಯದಂತೆ ಬಿಗಿಭದ್ರತೆ ಕೈಗೊಳ್ಳಲಾಗಿದೆ. ಸಾವಿರಕ್ಕೂ ಹೆಚ್ಚು ಪೊಲೀಸರನ್ನು ಭದ್ರತೆ ನಿಯೋಜಿಸಲಾಗಿದೆ.
For More Updates Join our WhatsApp Group :




