ದಕ್ಷಿಣ ಕ್ಷೇತ್ರದ ಉಪಚುನಾವಣೆಯಲ್ಲಿ ಕಾಂಗ್ರೆಸ್ಗೆ ಮತ್ತೊಂದು ಗೆಲುವು
ದಾವಣಗೆರೆ : ದಕ್ಷಿಣ ಕ್ಷೇತ್ರದ ಉಪಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ಸಮರ್ಥ್ ಶಾಮನೂರು ಭರ್ಜರಿ ಜಯ ಸಾಧಿಸಿದ್ದಾರೆ. ಶಾಮನೂರು ಶಿವಶಂಕರಪ್ಪ ನಿಧನದಿಂದ ತೆರವಾದ ಕ್ಷೇತ್ರವನ್ನು ಕಾಂಗ್ರೆಸ್ ಮರಳಿ ತನ್ನ ತೆಕ್ಕೆಗೆ ಪಡೆದಿದೆ.
ಬಿಜೆಪಿ ಅಭ್ಯರ್ಥಿ ಶ್ರೀನಿವಾಸ ದಾಸ್ ಕರಿಯಪ್ಪ ಪೈಪೋಟಿ ನೀಡಿದರೂ ಅಂತಿಮವಾಗಿ ಸೋಲು ಕಂಡಿದ್ದಾರೆ. ರಾಜ್ಯದ ಉಪಚುನಾವಣೆಯಲ್ಲಿ ಬಿಜೆಪಿ ಹಿನ್ನಡೆಯನ್ನು ಎದುರಿಸಿದೆ.ಸಮರ್ಥ್ ಶಾಮನೂರು ಗೆಲುವಿನ ಹಿನ್ನೆಲೆಯಲ್ಲಿ ಕಾಂಗ್ರೆಸ್ ಕಾರ್ಯಕರ್ತರು ಸಂಭ್ರಮಾಚರಣೆ ನಡೆಸಿ ವಿಜಯೋತ್ಸವ ಆಚರಿಸಿದ್ದಾರೆ.
ಮತ ವಿಭಜನೆ ವಿಚಾರವೂ ಚರ್ಚೆಗೆ ಗ್ರಾಸವಾಗಿದ್ದು, ಕೆಲವು ಮತಗಳು ಬೇರೆ ಅಭ್ಯರ್ಥಿಗಳಿಗೆ ಹೋಗಿರುವುದಾಗಿ ಕಾರ್ಯಕರ್ತರು ಅಭಿಪ್ರಾಯಪಟ್ಟಿದ್ದಾರೆ.ಈ ಬೆಳವಣಿಗೆ ಹಿನ್ನೆಲೆಯಲ್ಲಿ ಪಕ್ಷದ ಒಳಗಿನ ಕೆಲವು ಮುಖಂಡರ ವಿರುದ್ಧ ಕ್ರಮ ಕೈಗೊಳ್ಳಲಾಗಿದೆ ಎಂಬ ಮಾತುಗಳು ಕೇಳಿಬರುತ್ತಿವೆ.
For More Updates Join our WhatsApp Group :




