ಸರ್ಕಾರಿ ನೌಕರರಿಗೆ ಹೊಸ ಭರಸೆ ಕೊಟ್ಟ ಡಿಸಿಎಂ ಡಿಕೆಶಿ

ಬೆಂಗಳೂರು: ಕರ್ನಾಟಕದ ಸರ್ಕಾರಿ ನೌಕರರು, ನಿವೃತ್ತ ನೌಕರರು ಕೆ. ಸುಧಾಕರ್ ರಾವ್ ನೇತೃತ್ವದ ರಾಜ್ಯ 7ನೇ ವೇತನ ಆಯೋಗದ ವರದಿಯನ್ನು ಸರ್ಕಾರ ಯಾವಾಗ ಜಾರಿಗೊಳಿಸುತ್ತದೆ? ಎಂದು ಕಾಯುತ್ತಿದ್ದಾರೆ. ಸರ್ಕಾರ ಈ ವಿಚಾರದಲ್ಲಿ ನೌಕರರಿಗೆ ಹಲವು ಭರವಸೆಗಳನ್ನು ನೀಡುತ್ತಲೇ ಇದೆ.

ಲೋಕಸಭೆ ಚುನಾವಣೆ 2024, ವಿಧಾನ ಪರಿಷತ್ ಚುನಾವಣೆ ನೀತಿ ಸಂಹಿತೆ ಮುಕ್ತಾಯಗೊಂಡಿದೆ. ನೀತಿ ಸಂಹಿತೆ ತೆರವಾದ ಬಳಿಕ ಕರ್ನಾಟಕ ಸರ್ಕಾರದ ಮೊದಲ ಸಚಿವ ಸಂಪುಟ ಸಭೆಯನ್ನು ಸಹ ನಡೆಸಲಾಗಿದೆ. ಆದರೆ ಸರ್ಕಾರಿ ನೌಕರರಿಗೆ ಸಹಿಸುದ್ದಿ ಸಿಕ್ಕಿಲ್ಲ.

ಈಗ ಉಪ ಮುಖ್ಯಮಂತ್ರಿ ಡಿ. ಕೆ. ಶಿವಕುಮಾರ್ ಸರ್ಕಾರಿ ನೌಕರರಿಗೆ ಮತ್ತೊಂದು ಭರವಸೆ ನೀಡಿದ್ದಾರೆ. ಜೂನ್ 15ರಂದು ಅವರು ಬೆಂಗಳೂರಿನ ಟೌನ್ಹಾಲ್ನಲ್ಲಿ ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘ ಆಯೋಜಿಸಿದ್ದ ಬೆಂಗಳೂರು ನಗರ, ರಾಮನಗರ ಹಾಗೂ ಬೆಂಗಳೂರು ಗ್ರಾಮಾಂತರ ಜಿಲ್ಲೆಗಳ ರಾಜ್ಯ ಸರ್ಕಾರಿ ನೌಕರರ ಮಕ್ಕಳಿಗೆ ಪ್ರತಿಭಾ ಪುರಸ್ಕಾರ ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದರು.

ಡಿ. ಕೆ. ಶಿವಕುಮಾರ್ ಭರವಸೆ ಏನು? ಡಿ. ಕೆ. ಶಿವಕುಮಾರ್ ಮಾತನಾಡಿ, “ಸರ್ಕಾರಿ ನೌಕರರ ಸಮಸ್ಯೆಗಳ ಅರಿವು ಇದೆ. ಮಂತ್ರಿಗಳು ಸರ್ಕಾರದ ಸೇವಕರೇ. ಸಮಸ್ಯೆಎಗ ಪರಿಹಾರ ಕಂಡುಕೊಳ್ಳಲು ಎಲ್ಲರೂ ಪ್ರಾಮಾಣಿಕವಾಗಿ ಪ್ರಯತ್ನಿಸೋಣ” ಎಂದು ಹೇಳಿದರು.

“7ನೇ ವೇತನ ಆಯೋಗದ ಶಿಫಾರಸುಗಳ ಜಾರಿಗೆ ಸರ್ಕಾರ ಬದ್ಧವಾಗಿದೆ. ನೌಕರರ ಎಲ್ಲಾ ಬೇಡಿಕೆಗಳನ್ನು ಹಂತ-ಹಂತವಾಗಿ ಈಡೇರಿಸಲಾಗುತ್ತದೆ. ಲೋಕಸಭೆ ಚುನಾವಣೆ ಸರ್ಕಾರಿ ನೌಕರರು ಸರ್ಕಾರದ ವಿರುದ್ಧ ಅಸಮಾಧಾನಗೊಂಡಿರುವುದಕ್ಕೆ ಸಾಕ್ಷಿಯಾಗಿದೆ” ಎಂದರು.

ಕರ್ನಾಟಕದಲ್ಲಿ ಬಿಜೆಪಿ ಸರ್ಕಾರವಿದ್ದಾಗ 7ನೇ ರಾಜ್ಯ ವೇತನ ಆಯೋಗ ರಚನೆ ಮಾಡಲಾಗಿತ್ತು. 2023ರ ವಿಧಾನಸಭೆ ಚುನಾವಣೆ ಬಳಿಕ ಕಾಂಗ್ರೆಸ್ ಸರ್ಕಾರ ರಚನೆಗೊಂಡಿತು. 2024ರ ಮಾರ್ಚ್ 16ರಂದು ಕೆ. ಸುಧಾಕರ್ ರಾವ್ ನೇತೃತ್ವದ ರಾಜ್ಯ 7ನೇ ವೇತನ ಆಯೋಗದ ಹಣಕಾಸು ಸಚಿವ, ಮುಖ್ಯಮಂತ್ರಿ ಸಿದ್ದರಾಮಯ್ಯಗೆ ವರದಿಯನ್ನು ನೀಡಿದೆ.

ಆದರೆ ವರದಿ ನೀಡಿದ ದಿನದಿಂದಲೇ ಚುನಾವಣಾ ಮಾದರಿ ನೀತಿ ಸಂಹಿತೆ ಜಾರಿಗೆ ಬಂದ ಕಾರಣ ವರದಿ ಬಗ್ಗೆ ಯಾವುದೇ ಕ್ರಮವನ್ನು ಸರ್ಕಾರ ಕೈಗೊಂಡಿಲ್ಲ. ಈಗ ನೀತಿ ಸಂಹಿತೆ ತೆರವು ಮಾಡಲಾಗಿದ್ದು, ಆಯೋಗದ ವರದಿ ಯಾವಾಗ ಜಾರಿಯಾಗಲಿದೆ? ಎಂದು ನೌಕರರು ಕಾಯುತ್ತಿದ್ದಾರೆ.

Leave a Reply

Your email address will not be published. Required fields are marked *