ಭಾರತ ಕಂಡ ಧೀಮಂತ ನಾಯಕನ ಪುಣ್ಯತಿಥಿ: ಶ್ರದ್ಧಾಂಜಲಿ ಸಲ್ಲಿಸಿದ ಪ್ರಧಾನಿ ಮೋದಿ..!!

ನವದೆಹಲಿ: ಮಾಜಿ ಪ್ರಧಾನಿ ಮತ್ತು ಭಾರತೀಯ ಜನತಾ ಪಕ್ಷದ (ಬಿಜೆಪಿ) ಧೀಮಂತ ನಾಯಕ ಅಟಲ್ ಬಿಹಾರಿ ವಾಜಪೇಯಿ ಅವರ 5ನೇ ವರ್ಷದ ಪುಣ್ಯತಿಥಿ ನಿಮಿತ್ತ ರಾಷ್ಟ್ರಪತಿ ದ್ರೌಪದಿ ಮುರ್ಮು, ಪ್ರಧಾನಿ ನರೇಂದ್ರ ಮೋದಿ ಸೇರಿ ಗಣ್ಯರು ಶ್ರದ್ಧಾಂಜಲಿ ಸಲ್ಲಿಸಿದರು. ಜೊತೆಗೆ, “ವಾಜಪೇಯಿ ನಾಯಕತ್ವದಿಂದ ಭಾರತಕ್ಕೆ ಹೆಚ್ಚಿನ ಲಾಭವಾಗಿದೆ, ಅವರ ನಾಯಕತ್ವದಲ್ಲಿ ದೇಶವು ಹಿಂದೆಂದಿಗಿಂತಲೂ ಹೆಚ್ಚಿನ ಪ್ರಗತಿ ಸಾಧಿಸಿತ್ತು” ಎಂದು ಮೋದಿ ಮೆಚ್ಚುಗೆಯ ಮಾತುಗಳನ್ನಾಡಿದ್ದಾರೆ.

ಭಾರತ

ಈ ಕುರಿತು ಟ್ವೀಟ್ ಮಾಡಿರುವ ಮೋದಿ, “ವಾಜಪೇಯಿ ಅವರ ನಾಯಕತ್ವದಿಂದ ದೇಶವು ಹೆಚ್ಚು ಪ್ರಯೋಜನ ಪಡೆದಿದೆ. ಅವರ ಪುಣ್ಯ ತಿಥಿಯಾದ ಇಂದು ಭಾರತ ದೇಶದ 140 ಕೋಟಿ ಜನರ ಪರವಾಗಿ ಧೀಮಂತ ನಾಯಕನಿಗೆ ಗೌರವ ಸಲ್ಲಿಸುತ್ತಿದ್ದೇನೆ” ಎಂದಿದ್ದಾರೆ.

ವಾಜಪೇಯಿ ಅವರ ಪುಣ್ಯತಿಥಿಯ ಅಂಗವಾಗಿ ‘ಸದೈವ್ ಅಟಲ್’ ಸ್ಮಾರಕಕ್ಕೆ ರಾಷ್ಟ್ರಪತಿ ದ್ರೌಪದಿ ಮುರ್ಮು, ಪ್ರಧಾನಿ ನರೇಂದ್ರ ಮೋದಿ, ಕೇಂದ್ರ ಗೃಹ ಸಚಿವ ಅಮಿತ್ ಶಾ, ರಕ್ಷಣಾ ಸಚಿವ ರಾಜನಾಥ್ ಸಿಂಗ್ ಮತ್ತು ರಾಜ್ಯಸಭೆಯ ಉಪಾಧ್ಯಕ್ಷ ಹರಿವಂಶ್, ಉಪ ರಾಷ್ಟ್ರಪತಿ ಜಗದೀಪ್ ಧನಕರ್, ಕೇಂದ್ರ ರಾಜ್ಯ ಖಾತೆ ಸಚಿವೆ ಶೋಭಾ ಕರಂದ್ಲಾಜೆ ಸೇರಿದಂತೆ ಇತರೆ ಬಿಜೆಪಿ ನಾಯಕರು ಪುಷ್ಪ ನಮನ ಸಲ್ಲಿಸಿದರು.

Facebook: https://www.facebook.com/PragathiTV/

Pragati TV Social Connect for more latest u

Leave a Reply

Your email address will not be published. Required fields are marked *