ವಿರೋಧ ಪಕ್ಷದವರನ್ನು ವಿಶ್ವಾಸಕ್ಕೆ ಪಡೆದೇ ತೀರ್ಮಾನ- DCM

ವಿರೋಧ ಪಕ್ಷದವರನ್ನು ವಿಶ್ವಾಸಕ್ಕೆ ಪಡೆದೇ ತೀರ್ಮಾನ- DCM

ಮುಸಲ್ಮಾನರ ಬಗ್ಗೆ ಹಗೆ ಸುಳ್ಳು ಆರೋಪ

ಬೆಂಗಳೂರು: “ಪ್ರಜಾಪ್ರಭುತ್ವ ವ್ಯವಸ್ಥೆಗೆ ಅನುಗುಣವಾಗಿ ವಿರೋಧ ಪಕ್ಷದ ಶಾಸಕರು, ಸಾರ್ವಜನಿಕರನ್ನು ವಿಶ್ವಾಸಕ್ಕೆ ಪಡೆದು ಜಿಬಿಎ ಪಾಲಿಕೆಗಳು ಹಾಗೂ ವಾರ್ಡ್ ಗಳ ಮರುವಿಂಗಡಣೆ ಮಾಡಲಾಗಿದೆ. ಆದರೆ ಈ ಬಗ್ಗೆ ಕುಮಾರಸ್ವಾಮಿ ಅವರಿಗೆ ಅರಿವಿಲ್ಲ. ಬೇಕಿದ್ದರೇ ಅವರ ಶಾಸಕರನ್ನೇ ಕೇಳಿ ತಿಳಿದುಕೊಳ್ಳಲಿ” ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ತಿರುಗೇಟು ನೀಡಿದ್ದಾರೆ.

ಸದಾಶಿವನಗರ ನಿವಾಸದ ಬಳಿ ಮಾಧ್ಯಮಗಳ ಪ್ರಶ್ನೆಗಳಿಗೆ ಶಿವಕುಮಾರ್ ಅವರು ಮಂಗಳವಾರ ಪ್ರತಿಕ್ರಿಯೆ ನೀಡಿದರು. ಕೇಂದ್ರ ಸರ್ಕಾರದ ಲೋಕಸಭಾ ಕ್ಷೇತ್ರ ಮರುವಿಂಗಡಣೆ ವಿಧೇಯಕ ಸಮರ್ಥಿಸಿಕೊಳ್ಳುವ ಭರದಲ್ಲಿ ಕೇಂದ್ರ ಸಚಿವ ಕುಮಾರಸ್ವಾಮಿ ಅವರು ಬೆಂಗಳೂರು ಪಾಲಿಕೆಗಳ ವಾರ್ಡ್ ಮರುವಿಂಗಡಣೆ ಬಗ್ಗೆ ಯಾರೊಂದಿಗೂ ಚರ್ಚೆ ನಡೆಸಿಲ್ಲ ಎಂದು ಮಾಡಿರುವ ಆರೋಪದ ಬಗ್ಗೆ ಕೇಳಿದಾಗ, “ಬೆಂಗಳೂರು ವಾರ್ಡ್ ಗಳ ಮರುವಿಂಗಡಣೆ ವೇಳೆ ಎಲ್ಲಾ ಪಕ್ಷದ ಶಾಸಕರನ್ನು ಒಳಗೊಂಡ ಸಮಿತಿ ರಚಿಸಲಾಗಿತ್ತು. ಅವರ ಪಕ್ಷದ ಶಾಸಕರು ಸಮಿತಿಯ ಭಾಗವಾಗಿದ್ದರು. ಜೆಡಿಎಸ್ ಹಾಗೂ ಬಿಜೆಪಿ ಶಾಸಕರ ಜತೆ ಚರ್ಚೆ ಮಾಡಿ, ಅವರೆಲ್ಲರ ಅಭಿಪ್ರಾಯ ಪಡೆದ ನಂತರವೇ ಅಂತಿಮ ತೀರ್ಮಾನ ಮಾಡಲಾಗಿದೆ” ಎಂದರು.

“ಕುಮಾರಸ್ವಾಮಿ ಅವರು ದೊಡ್ಡ ವ್ಯಕ್ತಿ ಇರಬಹುದು. ನನಗೂ ಸಣ್ಣ ಅನುಭವವಿದೆ. ಈ ಅನುಭವದ ಮೇಲೆ ಹೇಗೆ ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ವಿರೋಧ ಪಕ್ಷದ ಶಾಸಕರು, ನಾಯಕರನ್ನು ಹೇಗೆ ವಿಶ್ವಾಸಕ್ಕೆ ತೆಗೆದುಕೊಳ್ಳಬೇಕು ಎಂಬುದು ನನಗೂ ಗೊತ್ತಿದೆ. ನಾನು ಅವರ ಶಾಸಕರ ಜತೆ ಎಷ್ಟು ಗಂಟೆಗಳ ಕಾಲ ಚರ್ಚೆ ಮಾಡಿದ್ದೇನೆ, ಎಷ್ಟು ಗಂಟೆಗಳ ಕಾಲ ಸಾರ್ವಜನಿಕರೊಂದಿಗೆ ಸಂವಾದ ಮಾಡಲಾಗಿದೆ ಎಂದು ಕುಮಾರಸ್ವಾಮಿ ಅವರು ತಿಳಿದುಕೊಂಡು ಮಾತನಾಡುವುದು ಸೂಕ್ತ” ಎಂದು ಛೇಡಿಸಿದರು.

ಜಿಬಿಎ ಪಾಲಿಕೆಗಳ ಚುನಾವಣೆ ಯಾವಾಗ ನಡೆಯಲಿದೆ ಎಂದು ಕೇಳಿದಾಗ, “ನಾವು ಚುನಾವಣೆಗೆ ಸಿದ್ಧವಿರುವುದಾಗಿ ತಿಳಿಸಿದ್ದೇವೆ. ಉಳಿದಂತೆ ಆ ಪ್ರಕ್ರಿಯೆ ನಡೆಸಲು ರಾಜ್ಯ ಚುನಾವಣಾ ಆಯೋಗವಿದೆ, ನ್ಯಾಯಾಲಯವಿದೆ”  ಎಂದು ತಿಳಿಸಿದರು.

For More Updates Join our WhatsApp Group :

https://chat.whatsapp.com/JVoHqE476Wn3pVh1gWNAcH

Leave a Reply

Your email address will not be published. Required fields are marked *