ವಿಳಂಬ ನೀತಿ ಭ್ರಷ್ಟಾಚಾರಕ್ಕೆ ಎಡೆಮಾಡಿಕೊಡುತ್ತದೆ : CM

ವಿಳಂಬ ನೀತಿ ಭ್ರಷ್ಟಾಚಾರಕ್ಕೆ ಎಡೆಮಾಡಿಕೊಡುತ್ತದೆ : CM

ಮಧ್ಯವರ್ತಿಗಳನ್ನು ದೂರವಿಡಿ: ಮುಖ್ಯಮಂತ್ರಿ ಸಿದ್ದರಾಮಯ್ಯ ಸೂಚನೆ

ಬೆಂಗಳೂರು : ಮಧ್ಯವರ್ತಿಗಳು ಎಲ್ಲೆಡೆ ಇರುತ್ತಾರೆ ಆದರೆ ಅವರನ್ನು ಕಚೇರಿಯೊಳಗೆ ಬಿಟ್ಟುಕೊಳ್ಳದೇ ಹೊರಗೆ ಕಳಿಸಿ ಎಂದು  ಮುಖ್ಯಮಂತ್ರಿ ಸಿದ್ದರಾಮಯ್ಯ  ಅಧಿಕಾರಿಗಳಿಗೆ ಸೂಚಿಸಿದರು.ಅವರು   ಇಂದು  ಕರ್ನಾಟಕ ಆಡಳಿತ ಸೇವೆ ಅಧಿಕಾರಿಗಳ ಒಕ್ಕೂಟ ಸಂಘ ಬೆಂಗಳೂರು ಇವರ ವತಿಯಿಂದ ಇನ್ ಫೆಂಟ್ರಿ ರಸ್ತೆಯಲ್ಲಿರುವ KAS ಅಧಿಕಾರಿಗಳ ಸಂಘದ ನವೀಕರಿಸಿದ ಕಟ್ಟಡ ಹೊಸದಾಗಿ ನಿರ್ಮಿಸಿದ ಹೆಚ್ಚುವರಿ ಕೊಠಡಿಗಳನ್ನು ಉದ್ಘಾಟನೆ ಮಾಡಿ ಸ್ಮರಣ ಸಂಚಿಕೆಯನ್ನು ಬಿಡುಗಡೆ ಮಾಡಿ  ಮಾತನಾಡಿದರು.

ವಿಳಂಬ ಧೋರಣೆ ಕೂಡದು: ಅಧಿಕಾರಿಗಳು ಯಾವುದೇ ಕಾರಣಕ್ಕೂ ಮಾಡದೇ, ಶೀಘ್ರವಾಗಿ ಕಡತಗಳನ್ನು ವಿಲೇವಾರಿ ಮಾಡಬೇಕು. ವಿಳಂಬ ನೀತಿ ಭ್ರಷ್ಟಾಚಾರಕ್ಕೆ ಎಡೆಮಾಡಿಕೊಡುತ್ತದೆ ಎಂದರು.

ಪ್ರಾಮಾಣಿಕವಾಗಿ ಕರ್ತವ್ಯ ನಿರ್ವಹಿಸಿ: ಕೆಎಎಸ್ ಅಧಿಕಾರಿಗಳು ತಮ್ಮ ಕರ್ತವ್ಯವನ್ನು ನಿಷ್ಠೆಯಿಂದ ಪ್ರಾಮಾಣಿಕವಾಗಿ ಮಾಡಬೇಕು. ಕೆಎಎಸ್ ಅಧಿಕಾರಿಗಳ ಸಂಘಕ್ಕೆ  ನೂರು ವರ್ಷಗಳ ಇತಿಹಾಸವಿದ್ದು, ನಾಲ್ವಡಿ ಕೃಷ್ಣರಾಜ ಒಡೆಯರ್ ಮೈಸೂರು ರಾಜ್ಯಕ್ಕೆ ಅಪಾರ ಕೊಡುಗೆ ಕೊಟ್ಟಿದ್ದಾರೆ. ಸಾಮಾಜಿಕ, ಆರ್ಥಿಕ , ಮೂಲಭೂತ ಸೌಕರ್ಯಗಳು,ಕೈಗಾರಿಕೆಗಳ ಬೆಳವಣಿಗೆಗೆ ಕಾರಣೀಭೂತಗಿದ್ದಾರೆ. ಅವರ ಕಾಲದಲ್ಲಿ ದಿವಾನರಾಗಿದ್ದವರು  ಸಂಘದ ಅಧ್ಯಕ್ಷರಾಗಿದ್ದರು ಎನ್ನುವುದು ಈ ಸಂಘದ ಹೆಗ್ಗಳಿಕೆ ಎಂದರು. ಅವರೆಲ್ಲರೂ ದಕ್ಷ ಆಡಳಿತಕ್ಕೆ  ನಮಗೆ ದಾರಿದೀಪವಾಗಿದ್ದಾರೆ ಎಂದರು.

ಜನರ ಹಿತವನ್ನು ಕಾಪಾಡುವುದು ನಮ್ಮ ಕರ್ತವ್ಯ: ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಕಾರ್ಯಾಂಗ ಹಾಗೂ ಶಾಸಕಾಂಗ ಒಟ್ಟಾಗಿ  ಕೆಲಸ ಮಾಡಬೇಕು. ಈ ಎರಡೂ  ಜನರ ಪ್ರತಿನಿಧಿಗಳಾಗಿ ಜನರ ಹಿತವನ್ನು ಕಾಪಾಡುವುದು ನಮ್ಮ ಕರ್ತವ್ಯ ಎಂದರು.

ನಿವೃತ್ತರಾಗುವವರೆಗೆ ಜನಸೇವೆಯಲ್ಲಿ ತೊಡಗಿಸಿಕೊಳ್ಳುವ ಅವಕಾಶವಿದೆ. ಅಸಮಾನತೆ ಇರುವ ಸಮಾಜದಲ್ಲಿ  ದುರ್ಬಲ ವರ್ಗಕ್ಕೆ ಸ್ಪಂದಿಸಬೇಕು. ಅಧಿಕಾರಿಗಳಿಗೆ ಕಾನೂನಿನ ಅರಿವಿನ ಜೊತೆಗೆ ಸಾಮಾನ್ಯ ಜ್ಞಾನ, ಸಮಾಜದ ಬಗ್ಗೆ ಅರಿವು ಇರಬೇಕು. ಆಗ ಮಾತ್ರ ಜನರಿಗೆ ಸ್ಪಂದಿಸಲು ಸಾಧ್ಯ ಎಂದರು.

For More Updates Join our WhatsApp Group :

https://chat.whatsapp.com/JVoHqE476Wn3pVh1gWNAcH

Leave a Reply

Your email address will not be published. Required fields are marked *