ಗೃಹಲಕ್ಷ್ಮಿʼ ಪಟ್ಟಿಯಿಂದ ಈ ಮಹಿಳೆಯರ ಹೆಸರು ಡಿಲೀಟ್ : ಇನ್ಮುಂದೆ ಸಿಗಲ್ಲ 2,000 ರೂ.!

ಬೆಂಗಳೂರು : ಅನರ್ಹ ಬಿಪಿಎಲ್ ಕಾರ್ಡ್ ಹೊಂದಿರುವವರಿಗೆ ಸಿಎಂ ಸಿದ್ದರಾಮಯ್ಯ ಬಿಗ್ ಶಾಕ್ ನೀಡಿದ್ದು, ಶೀಘ್ರವೇ ಅನರ್ಹ ಬಿಪಿಎಲ್ ಕಾರ್ಡ್ ರದ್ದು ಮಾಡಲಾಗುವುದು ಎಂದು ತಿಳಿಸಿದ್ದಾರೆ. ಈ ಮೂಲಕ ಸುಳ್ಳು ಮಾಹಿತಿ ನೀಡಿ ಬಿಪಿಎಲ್ ಕಾರ್ಡ್ ನೀಡಿ ಗೃಹಲಕ್ಷ್ಮಿ ಯೋಜನೆಯ ಹಣ ಪಡೆದುಕೊಂಡ ಮಹಿಳೆಯರಿಗೆ ಇನ್ಮುಂದೆ ಗೃಹಲಕ್ಷ್ಮಿ ಹಣ ಸ್ಥಗಿತವಾಗಲಿದೆ ಎನ್ನಲಾಗಿದೆ.

ಗೃಹಲಕ್ಷ್ಮೀ ಯೋಜನೆಗೆ ಸಂಬಂಧಿಸಿದಂತೆ ಹೊಸ ಆದೇಶ ಹೊರಬಿದ್ದಿದ್ದು, ಕೆಲ ಮಹಿಳೆಯರಿಗೆ ಇನ್ಮುಂದೆ ಗೃಹಲಕ್ಷ್ಮೀ ಯೋಜನೆಯ ಹಣ ಸಿಗೋದಿಲ್ಲ. ಕಾರಣ ರಾಜ್ಯಾದ್ಯಂತ ಅನರ್ಹ ಬಿಪಿಎಲ್ ಕಾರ್ಡ್ ರದ್ದು ಮಾಡಲು ರಾಜ್ಯ ಸರ್ಕಾರ ನಿರ್ಧರಿಸಿದೆ. ರಾಜ್ಯದಲ್ಲಿ 4,37,23,911 ಜನರು ಬಿಪಿಎಲ್ ಕಾರ್ಡ್ ಸೌಲಭ್ಯ ಪಡೆಯುತ್ತಿದ್ದು, ಶೇ.80ರಷ್ಟು ಕುಟುಂಬಗಳು ಬಿಪಿಎಲ್ ಅಡಿಯಲ್ಲಿವೆ. 1.27 ಕೋಟಿ ಬಿಪಿಎಲ್ ಕುಟುಂಬಗಳಿವೆ. ಹೊಸ ಕಾರ್ಡ್ಗಳಿಗೆ 2.95 ಲಕ್ಷ ಅರ್ಜಿ ಬಾಕಿಯಿದೆ.

ನೀತಿ ಆಯೋಗದ ಪ್ರಕಾರ ರಾಜ್ಯದಲ್ಲಿ ಬಡವರ ಸಂಖ್ಯೆ ಕಡಿಮೆಯಾಗಿದ್ದರೂ, ಬಿಪಿಎಲ್ ಕಾರ್ಡ್ ಪ್ರಮಾಣ ಕಡಿಮೆಯಾಗದಿರಲು ಕಾರಣವೇನು? ತಮಿಳುನಾಡಿನಲ್ಲಿ ಬಿಪಿಎಲ್ ಪ್ರಮಾಣ ಶೇ. 40ರಷ್ಟಿದೆ. ಈ ಕುರಿತು ಪರಿಶೀಲನೆ ನಡೆಸಿ, ಅನರ್ಹರನ್ನು ಕೈಬಿಡುವ ಕಾರ್ಯ ನಡೆಯಬೇಕು. ಇದೇ ರೀತಿ ಮೃತ ಸದಸ್ಯರ ಹೆಸರು ತೆಗೆದು ಹಾಕುವ ಪ್ರಕ್ರಿಯೆ ತ್ವರಿತಗೊಳಿಸಬೇಕು ಎಂದು ಸಿಎಂ ಸಿದ್ದರಾಮಯ್ಯ ತಿಳಿಸಿದ್ದಾರೆ.

ಇನ್ನೂ ಸುಳ್ಳು ಮಾಹಿತಿ ನೀಡಿ ಬಿಪಿಎಲ್ ಕಾರ್ಡ್ ಪಡೆದುಕೊಂಡು ಗೃಹಲಕ್ಷ್ಮಿ ಯೋಜನೆಯ ಹಣ ಪಡೆಯುತ್ತಿರುವ ಮಹಿಳೆಯರಿಗೂ ಇನ್ಮುಂದೆ ಗೃಹ ಲಕ್ಷ್ಮಿ ಹಣ ಬರುವುದಿಲ್ಲ ಎನ್ನಲಾಗಿದೆ. ಗೃಹಲಕ್ಷ್ಮಿ ಯೋಜನೆಗೆ ಮುಖ್ಯವಾಗಿ ಬಿಪಿಎಲ್ ಕಾರ್ಡ್ ಕಡ್ಡಾಯವಾಗಿದ್ದು, ಬಿಪಿಎಲ್ ಕಾರ್ಡ್ ರದ್ದಾದ್ದರೆ ಗೃಹಲಕ್ಷ್ಮಿ ಹಣವೂ ರದ್ದಾಗಲಿದೆ ಎನ್ನಲಾಗಿದೆ.

Leave a Reply

Your email address will not be published. Required fields are marked *