ದೆಹಲಿ || ಅಪ್ರಾಪ್ತ ಬಾಲಕನಿಂದ ಐದು ವರ್ಷದ ಬಾಲಕಿ ಮೇಲೆ ಅತ್ಯಾಚಾರ

Kalaburagi: Teacher arrested for trying to rape girl in class; File a POCSO case

ನವದೆಹಲಿ: ನೈಋತ್ಯ ದೆಹಲಿಯ ಕಪಶೇರಾ ಪ್ರದೇಶದಲ್ಲಿ 5 ವರ್ಷದ ಬಾಲಕಿಯೊಬ್ಬಳು ಮನೆಯಲ್ಲಿ ಒಬ್ಬಳೇ ಇದ್ದ ಸಮಯದಲ್ಲಿ ನೆರೆಹೊರೆಯಲ್ಲಿ ವಾಸಿಸುತ್ತಿದ್ದ 14 ವರ್ಷದ ಬಾಲಕ ಆಕೆಯ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾನೆ ಎಂದು ಅಧಿಕಾರಿಯೊಬ್ಬರು ಶನಿವಾರ ತಿಳಿಸಿದ್ದಾರೆ.

ಸಂತ್ರಸ್ತ ಬಾಲಕಿಯ ಸಹೋದರನ ಸ್ನೇಹಿತನಾಗಿರುವ ಆರೋಪಿ ಬಾಲಕನನ್ನು ವಶಕ್ಕೆ ಪಡೆದು ವೀಕ್ಷಣಾಲಯಕ್ಕೆ ಕಳುಹಿಸಲಾಗಿದೆ ಎಂದು ಡಿಸಿಪಿ(ನೈಋತ್ಯ) ರೋಹಿತ್ ಮೀನಾ ಅವರು ಹೇಳಿದ್ದಾರೆ.

14 ವರ್ಷದ ಬಾಲಕ 5 ವರ್ಷದ ಬಾಲಕಿ ಮೇಲೆ ಅತ್ಯಾಚಾರ ಎಸಗಿದ ಘೋರ ಘಟನೆ ಬಗ್ಗೆ ಕಪಶೇರಾ ಪೊಲೀಸ್ ಠಾಣೆಯಲ್ಲಿ ಪಿಸಿಆರ್ ಗೆ ಕರೆ ಸ್ವೀಕರಿಸಲಾಗಿದೆ. ಪ್ರಕರಣದ ಗಂಭೀರತೆಯನ್ನು ಅರಿತು ಪೊಲೀಸ್ ತಂಡವನ್ನು ತಕ್ಷಣವೇ ಸ್ಥಳಕ್ಕೆ ಕಳುಹಿಸಲಾಯಿತು. ಅವರು ಮಗುವಿನ ಪೋಷಕರನ್ನು ಭೇಟಿ ಮಾಡಿ, ಸಂಪೂರ್ಣ ಮಾಹಿತಿ ಸಂಗ್ರಹಿಸಿದರು ಎಂದು ಅಧಿಕಾರಿ ತಿಳಿಸಿದ್ದಾರೆ.

“ಪೋಷಕರು, ಇಬ್ಬರೂ ಕೂಲಿ ಕಾರ್ಮಿಕರಾಗಿದ್ದು, ಅವರು ಕೆಲಸಕ್ಕೆ ಹೋಗಿದ್ದ ವೇಳೆ ಆರೋಪಿ ಬಾಲಕ, ಅವರ ಮನೆಗೆ ಹೋಗಿ ಅವರ ಮಗಳ ಮೇಲೆ ಅತ್ಯಾಚಾರವೆಸಗಿದ್ದಾನೆ” ಎಂದು ಡಿಸಿಪಿ ಹೇಳಿದ್ದಾರೆ.

ಪೊಲೀಸರು ಬಾಲಕಿಯನ್ನು ಆಸ್ಪತ್ರೆಗೆ ಕರೆದೊಯ್ದು ವೈದ್ಯಕೀಯ ಪರೀಕ್ಷೆ ನಡೆಸಿದ್ದು, ಸಂತ್ರಸ್ತೆಗೆ ಪೋಷಕರ ಸಮ್ಮುಖದಲ್ಲಿ ಕೌನ್ಸೆಲಿಂಗ್ ಮಾಡಲಾಗಿದೆ. ಅದರಂತೆ, ಅವರ ಹೇಳಿಕೆಯ ಆಧಾರದ ಮೇಲೆ, ಪೊಲೀಸರು ಭಾರತೀಯ ನ್ಯಾಯ ಸಂಹಿತೆಯ ಸೆಕ್ಷನ್ 65(2)(12 ವರ್ಷದೊಳಗಿನ ಮಹಿಳೆಯ ಅತ್ಯಾಚಾರ) ಮತ್ತು ಲೈಂಗಿಕತೆಯಿಂದ ಮಕ್ಕಳ ರಕ್ಷಣೆ ಕಾಯ್ದೆ(ಪೋಕ್ಸೊ) ಸೆಕ್ಷನ್ 6 ಅಡಿಯಲ್ಲಿ ಎಫ್‌ಐಆರ್ ದಾಖಲಿಸಿದ್ದಾರೆ.

Leave a Reply

Your email address will not be published. Required fields are marked *