ಬೆಂಗಳೂರು: ದೆಹಲಿಯಲ್ಲಿ ನಡೆದ ವಿಧ್ವಂಸಕ ಕೃತ್ಯ ಬೆನ್ನಲ್ಲೇ ಕರ್ನಾಟಕದಲ್ಲಿ ಭಾರೀ ಕಟ್ಟೆಚ್ಚರ ವಹಿಸಲಾಗಿದೆ. ಸಿಎಂ ಸಿದ್ದರಾಮಯ್ಯ ಈಗಾಗಲೇ ಪೊಲೀಸ್ ಅಧಿಕಾರಿಗಳಿಗೆ ಖಡಕ್ ಸೂಚನೆ ನೀಡಿದ್ದು, ಅಂತೆಯೇ ವಿಮಾನ ನಿಲ್ದಾಣ, ರೈಲ್ವೇ ನಿಲ್ದಾಣ, ಮಾರುಕಟ್ಟೆ ಸೇರಿದಂತೆ ಜನಬಿಡ ಪ್ರದೇಶಗಳಲ್ಲಿ ಹೈಲರ್ಟ್ ಘೋಷಣೆ ಮಾಡಲಾಗಿದೆ. ಇನ್ನು ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ಪ್ರಕಟಣೆಯೊಂದನ್ನು ಹೊರಡಿಸಿದ್ದು, ಪ್ರಯಾಣಿಕರಿಗೆ ವಿಶೇಷ ಸೂಚನೆಯೊಂದನ್ನು ನೀಡಿದೆ.
ಅವಧಿಗಿಂತ ಮುಂಚಿತವಾಗಿ ಆಗಮಿಸುವಂತೆ ಮನವಿ ಮಾಡಿದೆ. ತೀವ್ರ ತಪಾಸಣೆ ಪ್ರಕ್ರಿಯೆ ನಡೆಯುತ್ತಿರುವ ಕಾರಣ ವಿಳಂಬವಾಗಲಿದೆ. ಭದ್ರತಾ ಪರಿಶೀಲನೆ ಪೂರ್ಣಗೊಳಿಸಲು ಸಾಕಷ್ಟು ಸಮಯ ಬೇಕು. ಈ ಹಿನ್ನೆಲೆಯಲ್ಲಿ ಪ್ರಯಾಣಿಕರು ಬೇಗ ಏರ್ಪೋರ್ಟ್ಗೆ ಆಗಮಿಸಿ ತಪಾಸಣೆ ಪ್ರಕ್ರಿಯೆ ಪೂರ್ಣಗೊಳಿಸಬೇಕು. ಇದರಿಂದ ನಿಮ್ಮ ಪ್ರಯಾಣಕ್ಕೂ ಅನುಕೂಲವಾಗಲಿದೆ. ಪ್ರಯಾಣಿಕರ ಸುಗಮ ಸಂಚಾರಕ್ಕೆ ಅನುಕೂಲವಾಗುವಂತೆ ಮನವಿ ಮಾಡಲಾಗಿದೆ ಎಂದು ಬೆಂಳೂರು ವಿಮಾನ ನಿಲ್ದಾಣ ಆಡಳಿತ ಮಂಡಳಿ ಮನವಿ ಮಾಡಿದೆ.
For More Updates Join our WhatsApp Group :
