ನವದೆಹಲಿ: ಇಲ್ಲಿನ ಹಳೆ ರಾಜಿಂದರ್ ನಗರದಲ್ಲಿರುವ ರಾವ್ಸ್ ಐಎಎಸ್ ಸ್ಟಡಿ ಸರ್ಕಲ್ನ ನೆಲಮಾಳಿಗೆಗೆ ಕಳೆದ ರಾತ್ರಿ ಮಳೆ ನೀರು ನುಗ್ಗಿ, ಇಬ್ಬರು ಹುಡುಗಿಯರು ಮತ್ತು ಓರ್ವ ಹುಡುಗ ಸೇರಿದಂತೆ ಮೂವರು ವಿದ್ಯಾರ್ಥಿಗಳು ಮೃತಪಟ್ಟಿದ್ದು,
ಮೃತದೇಹವನ್ನು ಹೊರತೆಗೆಯಲಾಗಿದೆ. ಇನ್ನೂ ಕೆಲವರು ಸಿಲುಕಿರುವ ಶಂಖೆ ಇದ್ದು ಅಗ್ನಿಶಾಮಕ ದಳ, ಸ್ಥಳೀಯ ಪೊಲೀಸರು ಮತ್ತು ಎನ್ಡಿಆರ್ಎಫ್ ಸಿಬ್ಬಂದಿ ರಕ್ಷಣಾ ಕಾರ್ಯಾಚರಣೆ ನಡೆಸುತ್ತಿದ್ದಾರೆ.