ತಮ್ಮ ಮೊದಲ ಬೈಕ್ ಹೊಸ ವಿನ್ಯಾಸದಲ್ಲಿ ಕಂಡು ಪುಳಕಿತರಾದ ಡಿಸಿಎಂ ಡಿ.ಕೆ. ಶಿವಕುಮಾರ್

ಬೈಕ್ ಹೊಸ ಲುಕ್ ನೋಡಿ‌ಖುಷಿ ಪಟ್ಟ ಡಿಕೆ ಶಿವಕುಮಾರ್

ಬೆಂಗಳೂರು : ಪ್ರತಿಯೊಬ್ಬರಿಗೂ ತಮ್ಮ ಜೀವನದ ಮೊದಲ ಬೈಕ್ ಜತೆಗೆ ವಿಶೇಷ ಬಾಂಧವ್ಯ, ಭಾವನಾತ್ಮಕ ಸಂಬಂಧ ಇರುತ್ತದೆ. ಬಹು ವರ್ಷಗಳ ನಂತರ ಮತ್ತೆ ತಮ್ಮ ಬೈಕ್ ಅನ್ನು ಕಂಡರೆ ನೂರೆಂಟು ನೆನಪುಗಳು ಗರಿ ಬಿಚ್ಚಿಕೊಳ್ಳುತ್ತವೆ. ಕಣ್ಮುಂದೆ ಹಾದು ಹೋಗುತ್ತವೆ. ಅಂತಹ ಘಳಿಗೆಗೆ ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ಭಾನುವಾರ ಸಾಕ್ಷಿಯಾದರು.

ವಿಂಟೇಜ್ ಬೈಕ್ ಪ್ರೇಮಿಯಾಗಿರುವ ಸುಪ್ರೀತ್ ಎಂಬುವವರು ಭಾನುವಾರ ಡಿಸಿಎಂ ಡಿ.ಕೆ. ಶಿವಕುಮಾರ್ ಅವರ ಸದಾಶಿವನಗರ ನಿವಾಸಕ್ಕೆ ಡಿಸಿಎಂ ಅವರ ಅವರು ಕಾಲೇಜು ದಿನಗಳಲ್ಲಿ ಬಳಸಿದ್ದ ಯಜ್ಡಿ (Yezde) ಬೈಕ್ (ನಂಬರ್ CAE 7684) ಅನ್ನು ಮರುವಿನ್ಯಾಸ ಮಾಡಿ ಸದಾಶಿವನಗರದ ನಿವಾಸಕ್ಕೆ ತಂದು ನಿಲ್ಲಿಸಿದಾಗ ಅದನ್ನು ಕಂಡ ಶಿವಕುಮಾರ್ ಅವರು ಪುಳಕಿತರಾದರು.

ತಾವೇ ಬೈಕ್ ಕಿಕ್ ಮಾಡಿ ಸ್ಟಾರ್ಟ್ ಮಾಡಿ ಖುಷಿಪಟ್ಟರು. “ನಾನು ಕಾಲೇಜು ದಿನಗಳಲ್ಲಿ ಬಳಸುತ್ತಿದ್ದ ಬೈಕ್ ಇದು, ಕನಕಪುರದ ಮನೆಯಲ್ಲಿ ಧೂಳು ಹಿಡಿದಿತ್ತು. ಸುಮಾರು 40 ವರ್ಷಗಳ ನಂತರ ನನ್ನ ಸ್ನೇಹಿತರು ಅದಕ್ಕೆ ಹೊಸ ರೂಪ ಕೊಟ್ಟು ತಂದಿದ್ದಾರೆ” ಎಂದು ಆನಂದ ತುಂದಿಲರಾದರು.

Leave a Reply

Your email address will not be published. Required fields are marked *