ಹಣವಿಲ್ಲದೆ ಬೆಳೆದ ಮೂಲಂಗಿಯನ್ನೇ ತಾಲೂಕು ಕಚೇರಿಗೆ ತಂದ ರೈತ.
ತುಮಕೂರು: ಕರ್ನಾಟದಲ್ಲಿ ಯಾವುದೇ ಕಚೇರಿಗಳಿಗೂ ಹೋದರೂ ಸಹ ಲಂಚವಿಲ್ಲದೇ ಯಾವುದೇ ಕೆಲಸಗಳು ಆಗುತ್ತಿಲ್ಲ. ಏನಾದರೂ ಒಂದು ಮಾಡಿಕೊಡಬೇಕೆಂದರೆ ಅಧಿಕಾರಿಗಳು ಮೊದಲು ಲಂಚಕ್ಕೆ ಬೇಡಿಕೆ ಇಡುತ್ತಾರೆ. ಅದರಂತೆ ತುಮಕೂರಿನ ರೈತನೋರ್ವ ಜಮೀನಿಗೆ ರಸ್ತೆ ಮಾಡಿಕೊಡಲು ಅಧಿಕಾರಿಗಳು ಲಂಚಕ್ಕೆ ಬೇಡಿಕೆ ಇಟ್ಟಿದ್ದು, ಹಣವಿಲ್ಲದ ಕಾರಣ ರೈತ ತಾನು ಬೆಳೆದ ಮೂಲಂಗಿಯನ್ನೇ ಲಂಚವಾಗಿ ನೀಡಲು ತಾಲೂಕು ಕಚೇರಿಗೆ ತಂದಿದ್ದಾರೆ. ಹೌದು.. ತುಮಕೂರು ಜಿಲ್ಲೆ ಮಧುಗುರಿ ತಾಲೂಕಿನ ದೊಡ್ಡರಿ ಜಕ್ಕೇನಹಳ್ಳಿ ಗ್ರಾಮದ ರೈತ ಪ್ರಸನ್ನಕುಮಾರ್ ಎಂಬವರಿಗೆ ಜಮೀನಿಗೆ ರಸ್ತೆ ಮಾಡಿಕೊಡುವಂತೆ ಲೋಕಾಯುಕ್ತರೇ ಸೂಚಿಸಿದ್ದರೂ ಕೂಡ ಕ್ಯಾರೇ ಎನ್ನದ ಕಂದಾಯ ಅಧಿಕಾರಿಗಳು (Revenue Officer) ಲಂಚಕ್ಕಾಗಿ (Bribe) ಬೇಡಿಕೆ ಇಟ್ಟು ಅಲೆದಾಡಿಸಿದ್ದಾರೆ. ಇದರಿಂದ ಅಕ್ರೋಶಗೊಂಡ ರೈತರೊಬ್ಬರು ತಾನು ಬೆಳೆದ ಮೂಲಂಗಿಯನ್ನೇ (Radish) ಲಂಚವಾಗಿ ನೀಡಲು ತಾಲೂಕು ಕಚೇರಿಗೆ ತಂದಿದ್ದಾರೆ. ಮೂಲಂಗಿ ಸಮೇತ ತಾಲೂಕು ಕಚೇರಿ ಮುಂದೆ ಮೈಕ್ ಹಿಡಿದು ‘ನನಗೆ ಅಧಿಕಾರಿಗಳಿಗೆ ಲಂಚ ನೀಡಲು ಹಣವಿಲ್ಲ. ನಾನು ಬೆಳೆದ ಮೂಲಂಗಿಯನ್ನೇ ಲಂಚವಾಗಿ ನೀಡುತ್ತೇನೆ ಬನ್ನಿ ಬನ್ನಿ’ ಎಂದು ಕೂಗಿದ್ದಾರೆ.
ಎರಡು ತಿಂಗಳಾದರೂ ರಸ್ತೆ ನಿರ್ಮಾಣಕ್ಕಾಗಿ ಸ್ಥಳ ಮಹಜರು ಹಾಗೂ ಪರಿಶೀಲನೆಗೆ ಬರಲು ಕೆಲವು ಅಧಿಕಾರಿಗಳು ಹಣಕ್ಕೆ ಬೇಡಿಕೆ ಇಟ್ಟಿದ್ದು, ಹಣವಿಲ್ಲದ ರೈತ ಪ್ರಸನ್ನಕುಮಾರ್ ಅಧಿಕಾರಿಗಳ ಈ ನಡೆಗೆ ಬೇಸರ ವ್ಯಕ್ತಪಡಿಸಿ ತಹಶೀಲ್ದಾರ್ ಬಳಿ ಮನವಿ ಮಾಡಿದ್ದರು. ಅವರು ರಸ್ತೆ ಮಾಡಿಕೊಡಲು ಸೂಚಿಸಿದ್ದರು. ಆದರೆ ಇಲ್ಲಿಯವರೆಗೂ ಕಂದಾಯ ಅಧಿಕಾರಿಗಳಾಗಲಿ, ಗ್ರಾಮ ಲೆಕ್ಕಿಗರಾಗಲಿ ಬಂದಿಲ್ಲ. ಇದರಿಂದ ಬೆಸತ್ತ ರೈತ ಪ್ರಸನ್ನಕುಮಾರ್ ತಾನು ಬೆಳೆದ ಮೂಲಂಗಿಯನ್ನೇ ಲಂಚವಾಗಿ ಕೊಡಲು ತಾಲೂಕು ಕಚೇರಿಗೆ ತಂದು ಗಮನಸೆಳೆದಿದ್ದಾರೆ.
For More Updates Join our WhatsApp Group :




