ಶವ ಪ್ಯಾಕ್ ಮಾಡಲು ₹500 ಬೇಡಿಕೆ.
ಹುಬ್ಬಳ್ಳಿ: ನಗರದಲ್ಲಿರುವ ಕಿಮ್ಸ್ನ ಬಡವರ ಪಾಲಿನ ಸಂಜೀವಿನಿ ಎಂದು ಕರೆಯುತ್ತಾರೆ. ಉತ್ತರ ಕರ್ನಾಟಕ ಜಿಲ್ಲೆಗಳಿಂದ ಪ್ರತಿನಿತ್ಯ ಸಾವಿರಾರು ರೋಗಿಗಳು ಇಲ್ಲಿಗೆ ಬಂದು ಚಿಕಿತ್ಸೆ ಪಡೆಯುತ್ತಾರೆ. ಆದ್ರೆ ಇದೇ ಕಿಮ್ಸ್ನಲ್ಲಿ ಸತ್ತ ಹೆಣದ ಮೇಲೂ ದುಡ್ಡು ಮಾಡುವ ಕೆಲಸವನ್ನು ಸಿಬ್ಬಂದಿ ಮಾಡುತ್ತಿದ್ದು, ಮೃತ ವ್ಯಕ್ತಿಯ ಶವ ಪ್ಯಾಕ್ ಮಾಡಿ ವಾಹನಕ್ಕ ಹಾಕುವುದರಿಂದ ಹಿಡಿದು ರೋಗಿಯನ್ನು ಶಿಫ್ಟ್ ಮಾಡೋದಕ್ಕೂ ಇಲ್ಲಿ ಹಣ ಕೊಡಲೇ ಬೇಕು. ಆಸ್ಪತ್ರೆಯಲ್ಲಿರುವ ಸ್ವಚ್ಚತಾ ಸಿಬ್ಬಂದಿ ಮತ್ತು ಡಿ ಗ್ರೂಪ್ ನೌಕರರು ರೋಗಿಗಳು ಮತ್ತು ಅವರ ಸಂಬಂಧಿಕರ ರಕ್ತ ಹೀರುವ ಕೆಲಸ ಮಾಡ್ತಿರೋದು ಭಾರೀ ಆಕ್ರೋಶಕ್ಕೆ ಕಾರಣವಾಗಿದೆ.
ರಾಯಚೂರು ಜಿಲ್ಲೆಯ ಲಿಂಗಸುಗೂರು ತಾಲೂಕಿನ ಆಶಾಳ ಅಡವಿಬಾವಿ ನಿವಾಸಿಯಾಗಿರೋ 52 ವರ್ಷದ ಗದ್ದೆಮ್ಮಾ ಎನ್ನುವ ಮಹಿಳೆ ಪಿತ್ತಕೋಶದ ಕಲ್ಲುಗಳಿಂದ ಅಸ್ವಸ್ಥರಾಗಿದ್ದರು. ಹೀಗಾಗಿ ಅವರನ್ನು ಕಳೆದ ಜನವರಿ 31ರಂದು ಹುಬ್ಬಳ್ಳಿ ಕಿಮ್ಸ್ಗೆ ದಾಖಲಿಸಲಾಗಿತ್ತು. ಕಳೆದ ಶನಿವಾರ ಆಕೆಗೆ ಶಸ್ತ್ರಚಿಕಿತ್ಸೆ ಕೂಡ ನಡೆದಿತ್ತು. ಆದ್ರೆ ಗದ್ದೆಮ್ಮ ಚಿಕಿತ್ಸೆ ಫಲಕಾರಿಯಾಗದೆ ಇಂದು ನಸುಕಿನ ಜಾವ ಮೃತಪಟ್ಟಿದ್ದಾರೆ. ಅವರ ಶವವನ್ನು ಪ್ಯಾಕ್ ಮಾಡಿ ವಾಹನಕ್ಕೆ ಹಾಕಲು ಅಲ್ಲಿನ ಡ್ರಿ ಗ್ರೂಪ್ ಸಿಬ್ಬಂದಿ ಐನೂರು ರೂಪಾಯಿಗೆ ಬೇಡಿಕೆ ಇಟ್ಟಿದ್ದು, ಕೊನೆಗೂ ಬೆನ್ನು ಬಿದ್ದು 200 ರೂಪಾಯಿ ಪಡೆದಿದ್ದಾರೆ. ಶವವನ್ನು ವಾಹನಕ್ಕೆ ಹಾಕಿದ ಮೇಲೆ ಮತ್ತೆ 200 ರೂಪಾಯಿಗಾಗಿ ಪೀಡಿಸಿದ್ದಾರೆ. ಇದರಿಂದ ನೊಂದ ಗದ್ದೆಮ್ಮ ಸಂಬಂಧಿ ವಿಡಿಯೋ ಮಾಡಿ ಹರಿಬಿಟ್ಟಿದ್ದಾರೆ.
For More Updates Join our WhatsApp Group :




