ಬೆಂಗಳೂರು: ಇವತ್ತು ಮಾಜಿ ಮುಖ್ಯಮಂತ್ರಿ ದಿವಂಗತ ಡಿ ದೇವರಾಜು ಅರಸುರವರ 110 ಜನ್ಮ ವಾರ್ಷಿಕೋತ್ಸವ. ಅವರ ಪ್ರತಿಮೆಗೆ ಮಾಲಾರ್ಪಣೆ ಮಾಡಿ ಮಾಧ್ಯಮಗಳೊಂದಿಗೆ ಮಾತಾಡಿದ ಮುಖ್ಯಮಂತ್ರಿ ಸಿದ್ದರಾಮಯ್ಯ, ಹಾವನೂರ್ ಆಯೋಗ ರಚಿಸಿ, ಅದು ನೀಡಿದ ವರದಿಯಲ್ಲಿನ ಶಿಫಾರಸ್ಸುಗಳನ್ನು ಜಾರಿಗೆ ತಂದು ಹಿಂದುಳಿದ ವರ್ಗಗಳಿಗೆ ಶಿಕ್ಷಣ ಮತ್ತು ಉದ್ಯೋಗಗಳಲ್ಲಿ ಮೀಸಲಾತಿ ಕಲ್ಪಿಸಿದ ಅರಸುರವರು ಸಾಮಾಜಿಕ ನ್ಯಾಯದ ಹರಿಕಾರ ಎಂದು ಕೊಂಡಾಡಿದರು.
ಅರಸುರವರು ಭೂ ಸುಧಾರಣಾ ಕಾಯ್ದೆಯನ್ನು ಜಾರಿಗೆ ತಂದು ಭೂಮಿಯನ್ನು ಉಳುವವನೇ ಅದರ ಒಡೆಯ ಎಂದು ಘೋಷಿಸಿದರು. ಸರ್ಕಾರ ಪ್ರತಿವರ್ಷ ಅವರ ಜನ್ಮ ವಾರ್ಷಿಕೋತ್ಸವ ಆಚರಿಸಿ ಗೌರವ ಸಲ್ಲಿಸುವ ಕೆಲಸ ಮಾಡುತ್ತಿದೆ ಎಂದು ಸಿದ್ದರಾಮಯ್ಯ ಹೇಳಿದರು.
For More Updates Join our WhatsApp Group :