ವಯನಾಡು: ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಮತ್ತು ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಪ್ರಿಯಾಂಕಾ ಗಾಂಧಿ ವಾದ್ರಾ ಅವರು ಗುರುವಾರ ಭೂಕುಸಿತ ಪೀಡಿತ ವಯನಾಡ್‌ಗೆ ಭೇಟಿ ನೀಡಲಿದ್ದು, ಪ್ರಕೃತಿ ವಿಕೋಪದಿಂದ ಹಾನಿಗೊಳಗಾದ ಹಲವಾರು ಕುಟುಂಬಗಳನ್ನು ಭೇಟಿ ಮಾಡಲಿದ್ದಾರೆ ಎಂದು ಮೂಲಗಳು ತಿಳಿಸಿವೆ.
ರಾಹುಲ್ ಗಾಂಧಿ ಮತ್ತು ಪ್ರಿಯಾಂಕಾ ಗಾಂಧಿ ಅವರು ಬುಧವಾರ ಬೆಳಿಗ್ಗೆ ವಯನಾಡ್‌ಗೆ ಭೇಟಿ ನೀಡಬೇಕಿತ್ತು ಆದರೆ ನಿರಂತರ ಮಳೆ ಮತ್ತು ಪ್ರತಿಕೂಲ ಹವಾಮಾನದಿಂದಾಗಿ ಬರುವುದು ಬೇಡ ಎಂದು ಅಧಿಕಾರಿಗಳು ತಿಳಿಸಿದ್ದರಿಂದ ಅವರು ಭೇಟಿಯನ್ನು ಮುಂದೂಡಿದ್ದಾರೆ.
ಇವರಿಬ್ಬರೂ ಇಂದು ಮೆಪ್ಪಾಡಿಯ ಸರ್ಕಾರಿ ಪ್ರೌಢ ಶಾಲೆ ಮತ್ತು ಸೇಂಟ್ ಜೋಸೆಫ್ ಶಾಲೆಯಲ್ಲಿರುವ ಪರಿಹಾರ ಶಿಬಿರಗಳಿಗೆ ಭೇಟಿ ನೀಡಲಿದ್ದಾರೆ ಎಂದು ಕಾಂಗ್ರೆಸ್ ಮೂಲಗಳು ತಿಳಿಸಿವೆ. ಮೆಪ್ಪಾಡಿಯ ಡಾ ಮೂಪನ್ಸ್ ಮೆಡಿಕಲ್ ಕಾಲೇಜಿಗೂ ಭೇಟಿ ನೀಡಲಿದ್ದಾರೆ ಎನ್ನಲಾಗಿದೆ.