ದಾಸರಹಳ್ಳಿಯಲ್ಲಿ ಅಭಿವೃದ್ಧಿ ಪರಿಶೀಲನಾ ಸಭೆ.

ದಾಸರಹಳ್ಳಿಯಲ್ಲಿ ಅಭಿವೃದ್ಧಿ ಪರಿಶೀಲನಾ ಸಭೆ.

ಆಯುಕ್ತರು-ಶಾಸಕರಿಂದ ಸಮಸ್ಯೆಗಳ ಚರ್ಚೆ.

ಬೆಂಗಳೂರು: ಬೆಂಗಳೂರು ಪಶ್ಚಿಮ ನಗರ ಪಾಲಿಕೆ ಆಯುಕ್ತರಾದ ಡಾ. ರಾಜೇಂದ್ರ ಕೆ.ವಿ. ಅವರು ಇಂದು ದಾಸರಹಳ್ಳಿ ವಿಧಾನಸಭಾ ಕ್ಷೇತ್ರದ ಶಾಸಕರಾದ ಶ್ರೀ ಎಸ್. ಮುನಿರಾಜು ಅವರ ಸಮ್ಮುಖದಲ್ಲಿ ದಾಸರಹಳ್ಳಿ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ವಾರ್ಡ್ ಗಳಿಗೆ ಸಂಬಂಧಿಸಿದಂತೆ ವಿವಿಧ ಸಮಸ್ಯೆಗಳ ಕುರಿತು ಎರಡನೇ ಪ್ರಗತಿ ಪರಿಶೀಲನಾ ಸಭೆ ನಡೆಸಿದರು.

 ಸಭೆಯಲ್ಲಿ ಚರ್ಚಿಸಿದ ಪ್ರಮುಖ ಅಂಶಗಳು ಹಾಗೂ ನಿರ್ದೇಶನಗಳು

•             ಅಮೃತ ನಗರೋತ್ಥಾನ ಯೋಜನೆಯಡಿ ನಡೆಯುತ್ತಿರುವ ಕಾಮಗಾರಿಗಳನ್ನು ತ್ವರಿತವಾಗಿ ಪೂರ್ಣಗೊಳಿಸಲು ಸೂಚನೆ.

•             ಅಗತ್ಯವಿರುವ ಪ್ರದೇಶಗಳಲ್ಲಿ ಬೋರ್ ವೆಲ್ ಗಳನ್ನು ಅಳವಡಿಸಿ ಸಮರ್ಪಕ ನಿರ್ವಹಣೆ ಮಾಡಲು ಸೂಚನೆ.

•             ಸುರಕ್ಷಾ-75 ಯೋಜನೆಯಡಿ ಸ್ಥಳಗಳನ್ನು ಗುರುತಿಸಿ ಸಿಗ್ನಲ್ ಸುಧಾರಣೆ ಕೈಗೊಳ್ಳಲು ತಿಳಿಸಿದರು.

•             ಅಗತ್ಯವಿರುವ ಕಡೆಗಳಲ್ಲಿ ಟೋಯಿಂಗ್ ವಾಹನಗಳ ಸಮರ್ಪಕ ಕಾರ್ಯಾಚರಣೆಗೆ ಕ್ರಮವಹಿಸಲು ಸೂಚನೆ.

•             ಕಸದ ಸಮಸ್ಯೆ ನಿರ್ವಹಣೆಗೆ ಆದ್ಯತೆ ನೀಡುವಂತೆ ತಿಳಿಸಿದರು.

•             ವಿದ್ಯುತ್ ದೀಪಗಳ ಸಮರ್ಪಕ ನಿರ್ವಹಣೆ ಖಚಿತಪಡಿಸಲು ತಿಳಿಸಿದರು.

•             ಪಾರ್ಕ್‌ಗಳ ಸಮರ್ಪಕ ನಿರ್ವಹಣೆ, ಕುಡಿಯುವ ನೀರು ಹಾಗೂ ಶೌಚಾಲಯ ವ್ಯವಸ್ಥೆ ಸುಧಾರಿಸಲು ತಿಳಿಸಿದರು.

•             ಅನಧಿಕೃತ ಫ್ಲೆಕ್ಸ್ ಹಾಗೂ ಬ್ಯಾನರ್ ಗಳನ್ನು ತೆರವುಗೊಳಿಸಲು ಸೂಚನೆ.

•             ಹೊಸ ಅಪಾರ್ಟ್ಮೆಂಟ್ ಪ್ರದೇಶಗಳ ಬಳಿ ಇ-ಖಾತಾ ಮೇಳ (ಡ್ರೈವ್) ಆಯೋಜನೆಗೆ ನಿರ್ದೇಶನ

•             ಪಾದಚಾರಿ ಮಾರ್ಗಗಳ ಮೇಲಿನ ಅನಧಿಕೃತ ಮಳಿಗೆಗಳನ್ನು ತೆರವುಗೊಳಿಸಲು ಸೂಚನೆ.

•             ವ್ಯಾಪಾರ ಪರವಾನಗಿ (ಟ್ರೇಡ್ ಲೈಸೆನ್ಸ್) ಪರಿಶೀಲನೆ ನಡೆಸಿ ನಿಯಮ ಉಲ್ಲಂಘನೆ ಕಂಡುಬಂದಲ್ಲಿ ದಂಡ ವಿಧಿಸಲು ಕ್ರಮ.

•             ಮಟನ್ ಹಾಗೂ ಚಿಕನ್ ಅಂಗಡಿಗಳಲ್ಲಿ ಸ್ವಚ್ಛತೆ ಕಾಪಾಡದಿದ್ದಲ್ಲಿ ನೋಟಿಸ್ ನೀಡಿ ದಂಡಾತ್ಮಕ ಕ್ರಮ ಕೈಗೊಳ್ಳಬೇಕು.

ಸಭೆಯಲ್ಲಿ ಜಂಟಿ ಆಯುಕ್ತರಾದ ಆರತಿ ಆನಂದ್, ಉಪ ಆಯುಕ್ತರು (ಆಡಳಿತ) ಸಾಯಿದ್ ಆಫ್ರಿನ್ ಭಾನು, ಮುಖ್ಯ ಅಭಿಯಂತರರಾದ ಸ್ವಯಂ ಪ್ರಭಾ, ಉಪ ಆಯುಕ್ತರು ಹಾಗೂ ಸಂಬಂಧಿಸಿದ ವಿವಿಧ ಇಲಾಖೆಗಳ ಮುಖ್ಯಸ್ಥರು ಉಪಸ್ಥಿತರಿದ್ದರು.

For More Updates Join our WhatsApp Group :

https://chat.whatsapp.com/JVoHqE476Wn3pVh1gWNAcH

Leave a Reply

Your email address will not be published. Required fields are marked *