ರಾಸಲೀಲೆ ವಿಡಿಯೋ ಪ್ರಕರಣ.
ಬೆಂಗಳೂರು : ಡಿಜಿಪಿ ರಾಮಚಂದ್ರರಾವ್ ಅವರನ್ನು ಸರ್ಕಾರ ಅಮಾನತುಗೊಳಿಸಿ ಆದೇಶ ಹೊರಡಿಸಿದೆ. ಕಚೇರಿಯಲ್ಲೇ ಮಹಿಳೆ ಜೊತೆಗಿನ ರಾಸಲೀಲೆಯ ವಿಡಿಯೋ ರಾಜ್ಯಾದ್ಯಂತ ವೈರಲ್ ಆದ ಬೆನ್ನಲ್ಲೇ ಈ ಕ್ರಮ ಕೈಗೊಳ್ಳಲಾಗಿದೆ. ಈ ಪ್ರಕರಣ ಕರ್ನಾಟಕ ಸರ್ಕಾರಕ್ಕೆ ತೀವ್ರ ಮುಜುಗರವನ್ನುಂಟು ಮಾಡಿತ್ತು. ವಿಡಿಯೋ ವೈರಲ್ ಆದ ಬೆನ್ನಲ್ಲೇ ಆಡಿಯೋ ಕೂಡ ಸಾರ್ವಜನಿಕವಾಗಿ ಹರಿದಾಡಿತ್ತು. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಈ ಕುರಿತು ಶಿಸ್ತುಕ್ರಮ ಕೈಗೊಳ್ಳುವುದಾಗಿ ಹೇಳಿದ್ದರು.
ರಾಜ್ಯ ಪೊಲೀಸ್ ಮಹಾನಿರ್ದೇಶಕ ಡಾಕ್ಟರ್ ಎಂ.ಎಸ್. ಸಲೀಂ ಅವರಿಗೆ ಪರಿಶೀಲನೆ ನಡೆಸಿ ಸೂಕ್ತ ಕ್ರಮಕ್ಕಾಗಿ ಸೂಚನೆ ನೀಡಿದ್ದರು. ಮಾಧ್ಯಮಗಳಿಗೆ ಪ್ರತಿಕ್ರಿಯಿಸಿದ್ದ ಡಿಜಿಪಿ ರಾಮಚಂದ್ರರಾವ್, ಇದು ಎಐ ಸೃಷ್ಟಿ ಮತ್ತು ತಮ್ಮ ವಿರುದ್ಧದ ಷಡ್ಯಂತ್ರ ಎಂದು ಸ್ಪಷ್ಟೀಕರಣ ನೀಡಿದ್ದರು. ನಿವೃತ್ತಿಗೆ ಕೆಲವೇ ತಿಂಗಳು ಬಾಕಿ ಇರುವಾಗಲೇ ಅವರನ್ನು ಅಮಾನತುಗೊಳಿಸಲಾಗಿದೆ.
For More Updates Join our WhatsApp Group :




