ಧಾರವಾಡ || 5 ದಿನಗಳ Mango fair, ವಿಶೇಷತೆಗಳು

ಧಾರವಾಡ || 5 ದಿನಗಳ Mango fair, ವಿಶೇಷತೆಗಳು

ಧಾರವಾಡ: ಮಾವು ಬೆಳೆಗಾರರು ಮತ್ತು ಜನರ ನಡುವೆ ವಹಿವಾಟಿಗೆ ಉತ್ತಮ ವೇದಿಕೆ ಕಲ್ಪಿಸಲು ಧಾರವಾಡದಲ್ಲಿ 5 ದಿನಗಳ ಮಾವು ಪ್ರದರ್ಶನ ಮತ್ತು ಮಾರಾಟ ಮೇಳಕ್ಕೆ ಚಾಲನೆ ನೀಡಲಾಗಿದೆ. ಧಾರವಾಡ ಜಿಲ್ಲಾಧಿಕಾರಿ ದಿವ್ಯ ಪ್ರಭು ಈ ಮೇಳವನ್ನು ಉದ್ಘಾಟಿಸಿದ್ದಾರೆ. ಈ ಮೇಳದಲ್ಲಿ 30 ಮಾವು ಬೆಳೆಗಾರರು ಮಳಿಗೆಗಳನ್ನು ಹಾಕಿದ್ದಾರೆ. ಸಾರ್ವಜನಿಕರಿಂದ ಸಹ ಒಳ್ಳೆಯ ಪ್ರತಿಕ್ರಿಯೆ ಸಿಕ್ಕಿದೆ.

ಮಾವು ಪ್ರದರ್ಶನ ಮತ್ತು ಮಾರಾಟ ಮೇಳ 2025 ಉದ್ಘಾಟಿಸಿ ಮಾತನಾಡಿದ ಜಿಲ್ಲಾಧಿಕಾರಿ ದಿವ್ಯ ಪ್ರಭು, “ಮಾವು ಬೆಳೆಗಾರರಿಗೆ ಮಾವು ಮಾರಾಟ ಮತ್ತು ವಿವಿಧ ಮಾವುಗಳ ಪ್ರದರ್ಶನಕ್ಕೆ ಅವಕಾಶವಾಗುವಂತೆ 5 ದಿನಗಳವರೆಗೆ ತೋಟಗಾರಿಕೆ ಕಚೇರಿ ಆವರಣದಲ್ಲಿ ಮಾವು ಪ್ರದರ್ಶನ ಮತ್ತು ಮಾರಾಟ ಮೇಳವನ್ನು ಆಯೋಜಿಸಲಾಗಿದೆ” ಎಂದು ಹೇಳಿದರು.

“ಧಾರವಾಡ ನಗರದ ತೋಟಗಾರಿಕೆ ಇಲಾಖೆಯ ಉಪನಿರ್ದೇಶಕರ ಕಚೇರಿ ಆವರಣದಲ್ಲಿ ಮಾವು ಮೇಳವನ್ನು ಆಯೋಜಿಸಲಾಗಿದೆ. ಮಾವು ಬೆಳೆಗಾರರಿಂದ ಮತ್ತು ಸಾರ್ವಜನಿಕರಿಂದ ಬೇಡಿಕೆ ಇರುವ ಹಿನ್ನೆಲೆಯಲ್ಲಿ ಮಾವು ಮೇಳವನ್ನು ಆಯೋಜಿಸಲಾಗಿದೆ. ಧಾರವಾಡ ಜಿಲ್ಲೆಯ ಪ್ರಮುಖ ವಾಣಿಜ್ಯ ಬೆಳೆಗಳಲ್ಲಿ ಇದು ಸಹ ಒಂದಾಗಿದೆ” ಎಂದು ಜಿಲ್ಲಾಧಿಕಾರಿಗಳು ತಿಳಿಸಿದರು. “ಮಾವು ಮಾರಾಟ ಮೇಳದಿಂದ ರೈತರಿಗೆ ಮತ್ತು ಮಾವು ಬೆಳೆಗಾರರಿಗೆ ಅನುಕೂಲವಾಗುತ್ತದೆ. ಸಾರ್ವಜನಿಕರಿಗೆ ಅದರಲ್ಲೂ ಗ್ರಾಹಕರಿಗೆ ಉತ್ತಮ ಬೆಲೆಗೆ, ರುಚಿಕರವಾದ ಮಾವು ಸಿಗುವುದಕ್ಕೆ ಇದೊಂದು ಸುವರ್ಣ ಅವಕಾಶವಾಗಿದೆ” ಎಂದರು. “ಧಾರವಾಡ ಜಿಲ್ಲೆಯಲ್ಲಿ ಮಾವು ಒಂದು ಪ್ರಮುಖ ಬೆಳೆಯಾಗಿದ್ದು, ಒಟ್ಟು 29,610 ಎಕರೆ, ಅಂದಾಜು 8,881 ರೈತರು ಮಾವು ಬೆಳೆಯುತ್ತಿದ್ದಾರೆ, ಸಾಂಪ್ರದಾಯಕವಾಗಿ 4 ಟನ್, ಎಕರೆ ಇಳುವರಿ ಬರುತ್ತಿದ್ದು, ಪ್ರಸಕ್ತ ಸಾಲಿನಲ್ಲಿ ಹವಾಮಾನ ವೈಪರೀತ್ಯದಿಂದಾಗಿ ಇಳುವರಿಯಲ್ಲಿ ಕುಂಠಿತವಾಗಿದ್ದು ಸುಮಾರು 1 ಟನ್, ಎಕರೆಯಂತೆ ಜಿಲ್ಲೆಯಿಂದ ಒಟ್ಟು 29,000 ಟನ್ ಇಳುವರಿಯನ್ನು ಅಂದಾಜಿಸಬಹುದಾಗಿದೆ” ಎಂದು ಜಿಲ್ಲಾಧಿಕಾರಿಗಳು ಹೇಳಿದರು.

Leave a Reply

Your email address will not be published. Required fields are marked *