ಧಾರವಾಡ || ಅಸಂಘಟಿತ ಕಾರ್ಮಿಕರಿಗೆ ಸ್ಮಾರ್ಟ್ ಕಾರ್ಡ್ ವಿತರಣೆ ಕಾರ್ಯಕ್ರಮದಲ್ಲಿ Labour Minister Santosh Lad.

ಧಾರವಾಡ || ಅಸಂಘಟಿತ ಕಾರ್ಮಿಕರಿಗೆ ಸ್ಮಾರ್ಟ್ ಕಾರ್ಡ್ ವಿತರಣೆ ಕಾರ್ಯಕ್ರಮದಲ್ಲಿ Labour Minister Santosh Lad.

ಧಾರವಾಡ : ಅಸಂಘಟಿತ ವಲಯದ ಕಾರ್ಮಿಕರ ಕಲ್ಯಾಣಕ್ಕಾಗಿ ರಾಜ್ಯ ಸರ್ಕಾರ ಹಲವಾರು ಯೋಜನೆ, ಕಾರ್ಯಕ್ರಮಗಳನ್ನು ಜಾರಿ ಮಾಡಿದೆ. ಅಸಂಘಟಿತ ವಲಯದ ಕಾರ್ಮಿಕರು ಹಾಗೂ ಅವರ ಅವಲಂಬಿತರ ಕ್ಷೇಮಾಭಿವೃದ್ಧಿಗಾಗಿ ಇನ್ನಷ್ಟು ಹೊಸ ಹೊಸ ಯೋಜನೆ ಜಾರಿ ಮಾಡಲಾಗುವುದು ಎಂದು ಕಾರ್ಮಿಕ ಹಾಗೂ ಧಾರವಾಡ ಜಿಲ್ಲಾ ಉಸ್ತುವಾರಿ ಸಚಿವ ಸಂತೋಷ್ ಲಾಡ್ ಅವರು ಹೇಳಿದರು.

ಹುಬ್ಬಳ್ಳಿಯ ಬೆಂಗೇರಿಯ ಸಂತೆ ಮೈದಾನದಲ್ಲಿ ಕಾರ್ಮಿಕ ಇಲಾಖೆಯ ವತಿಯಿಂದ ಹಮ್ಮಿಕೊಂಡಿದ್ದ ಧಾರವಾಡ ಜಿಲ್ಲೆಯ ವಿವಿಧ ಅಸಂಘಟಿತ ಕಾರ್ಮಿಕರಿಗೆ ಸ್ಮಾರ್ಟ್ ಕಾರ್ಡ್ ವಿತರಣೆ ಮತ್ತು ಸ್ಮಾರ್ಟ್ ಕಾರ್ಡ್ ಬಗ್ಗೆ ಅರಿವು ಮೂಡಿಸುವ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು.

ಅಸಂಘಟಿತ ವಲಯದ ಕಾರ್ಮಿಕರಿಗೆ ಸೌಲಭ್ಯಗಳನ್ನು ತಲುಪಿಸಲು ನಮ್ಮ ಇಲಾಖೆ ಅಧಿಕಾರಿಗಳು ಸಾಕಷ್ಟು ಶ್ರಮವಹಿಸಿದ್ದಾರೆ. ನಾನು ಇಲಾಖೆಯ ಸಚಿವನಾಗಿ ಅಧಿಕಾರ ಸ್ವೀಕರಿಸಿದಾಗ ಸಾಕಷ್ಟು ಸವಾಲುಗಳು ಇದ್ದವು. ಈಗಲೂ ಇವೆ. ಆದರೆ ಕಾರ್ಮಿಕರ ಕಲ್ಯಾಣಕ್ಕಾಗಿ ಏನಾದರೂ ಮಾಡಲೇ ಬೇಕು ಎಂಬ ಉದ್ದೇಶದಿಂದ ಪ್ರಾಮಾಣಿಕ ಪ್ರಯತ್ನ ಮಾಡಲಾಗಿದೆ ಎಂದು ಹೇಳಿದರು.

ಅಸಂಘಟಿತ ವಲಯದಲ್ಲಿ ಪ್ರಮುಖವಾಗಿ ಗುರುತಿಸಿಕೊಂಡಿರುವ ಸಾರಿಗೆ ಕಾರ್ಮಿಕರ ಕಲ್ಯಾಣಕ್ಕಾಗಿ ಸಾರಿಗೆ ಮಂಡಳಿ ರಚನೆ ಮಾಡಿದ್ದೇವೆ.  ಸಾರಿಗೆ ಸಚಿವರಾದ ರಾಮಲಿಂಗಾ ರೆಡ್ಡಿ ಅವರ ಸಹಕಾರ ಹಾಗೂ ಬೆಂಬಲದಿಂದ ಈ ಮಂಡಳಿ ರಚನೆ ಸಾಧ್ಯವಾಯಿತು. ಮಾನ್ಯ ಮುಖ್ಯಮಂತ್ರಿಗಳು ಎಲ್ಲಾ ರೀತಿಯಿಂದ ಸಹಕಾರ ನೀಡಿದರು. ಹೊಸ ವಾಹನಗಳನ್ನು ಖರೀದಿ ಮಾಡಿದಾಗ ಸಂಗ್ರಹಿಸುವು ಕರದಿಂದ ಈ ಕ್ಷೇತ್ರದಲ್ಲಿ ದುಡಿಯುವ ಕಾರ್ಮಿಕರಿಗೆ ನಿಧಿ ಸ್ಥಾಪಿಸಿ ಜೀವ ವಿಮೆ ಸೇರಿದಂತೆ  ಸೌಲಭ್ಯಗಳನ್ನು ಒದಗಿಸಲಾಗುವುದು. ಇಂತಹ ಒಂದು ಮಂಡಳಿಯನ್ನು ರಚನೆ ಮಾಡಿರುವುದು ಇಡೀ ದೇಶದಲ್ಲೇ ನಾವು ಎಂಬುದು ಹೆಮ್ಮೆಯ ಸಂಗತಿ ಎಂದು ವಿವರಿಸಿದರು.

Leave a Reply

Your email address will not be published. Required fields are marked *