ಧಾರವಾಡ || ಮಳೆ ಹಾನಿ ಪ್ರದೇಶಗಳಿಗೆ ಸಚಿವ Santhosh Lad ಭೇಟಿ                                                                                                                      

ಧಾರವಾಡ || ಮಳೆ ಹಾನಿ ಪ್ರದೇಶಗಳಿಗೆ ಸಚಿವ Santhosh Lad ಭೇಟಿ

ಧಾರವಾಡ: ಧಾರವಾಡ ಜಿಲ್ಲೆಯಲ್ಲಿ ಕಳೆದ ಎರಡು ಮೂರು ದಿನಗಳಿಂದ ಭಾರೀ ಪ್ರಮಾಣದಲ್ಲಿ ಮಳೆಯಾಗುತ್ತಿದ್ದು, ಮಳೆಯಿಂದ ಹಾನಿಯಾಗಿರುವ ಪ್ರದೇಶಗಳನ್ನು ಕಾರ್ಮಿಕ ಹಾಗೂ ಧಾರವಾಡ ಜಿಲ್ಲಾ ಉಸ್ತುವಾರಿ ಸಚಿವರಾದ ಸಂತೋಷ್ ಲಾಡ್ ಅವರು, ಶುಕ್ರವಾರ ವೀಕ್ಷಿಸಿದರು.


ಬಾಧಿತ ಪ್ರದೇಶಗಳ ವೀಕ್ಷಣೆಗೆ ಸರ್ಕಾರಿ ಕಾರಿನಲ್ಲಿ ತೆರಳದೆ, ವಾರ್ತಾ ಇಲಾಖೆಯಿಂದ ಆಯೋಜನೆಯಾಗಿದ್ದ ಪತ್ರಕರ್ತರ   ವಾಹನದಲ್ಲೇ ತೆರಳಿದ ಸಚಿವರು, ಪತ್ರಕರ್ತರೊಂದಿಗೆ ಮಾಹಿತಿ ವಿನಿಮಯ ಮಾಡಿಕೊಂಡರು.

ಜೂನ್ 13 ರಂದು ಧಾರವಾಡ ಜಿಲ್ಲಾ ಪ್ರವಾಸ ಕೈಗೊಂಡಿರುವ ಸಚಿವರು, ವಿವಿಧೆಡೆ ಮಳೆಯಿಂದ ತೊಂದರೆಯಾಗಿರುವ ಪ್ರದೇಶಗಳಿಗೆ ಭೇಟಿ ನೀಡಿ ಪರಾಮರ್ಶೆ ನಡೆಸಲಿದ್ದಾರೆ          

ಶಾಲಾ ಕಾಲೇಜುಗಳಿಗೆ ರಜೆ: ಧಾರವಾಡ ಜಿಲ್ಲೆಯ ಬಹುತೇಕ ನಗರ ಹಾಗೂ ಗ್ರಾಮೀಣ ಪ್ರದೇಶದಲ್ಲಿ ನಿರಂತರವಾಗಿ ಮತ್ತು ವ್ಯಾಪಕವಾಗಿ ಮಳೆಯಾಗುತ್ತಿದ್ದು, ಶಾಲಾ ಕಾಲೇಜು ಮಕ್ಕಳ ಸುರಕ್ಷತೆ ದೃಷ್ಟಿಯಿಂದ ಎಲ್ಲ ಅಂಗನವಾಡಿ, ಪ್ರಾಥಮಿಕಶಾಲೆ, ಪ್ರೌಢಶಾಲೆ, ಪಿಯು ಮತ್ತು ಪದವಿ ಕಾಲೇಜುಗಳಿಗೆ ಜೂ.13 ರಂದು ರಜೆ ಘೋಷಿಸಿ ಜಿಲ್ಲಾಧಿಕಾರಿಗಳು ಆದೇಶಿಸಿದ್ದಾರೆ.

                                                                                                                                                   

 

Leave a Reply

Your email address will not be published. Required fields are marked *