ಧಾರವಾಡ ಶಾಸಕ ವಿನಯ್ ಕುಲಕರ್ಣಿಗೆ ಸುಪ್ರೀಂ ಕೋರ್ಟ್ ಜಾಮೀನು.

ಧಾರವಾಡ ಶಾಸಕ ವಿನಯ್ ಕುಲಕರ್ಣಿಗೆ ಸುಪ್ರೀಂ ಕೋರ್ಟ್ ಜಾಮೀನು.

ಯೋಗೇಶ್ ಗೌಡ ಕೊ* ಪ್ರಕರಣದಲ್ಲಿ ಬಿಗ್ ರಿಲೀಫ್.

ಧಾರವಾಡ : ಯೋಗೇಶ್ ಗೌಡ ಕೊಲೆ ಪ್ರಕರಣದಲ್ಲಿ ಜೈಲುವಾಸದಲ್ಲಿದ್ದ ಧಾರವಾಡದ ಕಾಂಗ್ರೆಸ್ ಶಾಸಕ ವಿನಯ್ ಕುಲಕರ್ಣಿಗೆ  ಸುಪ್ರೀಂಕೋರ್ಟ್ ಜಾಮೀನು ನೀಡಿದೆ. ಸುಪ್ರೀಂಕೋರ್ಟ್ ಎರಡು ತಿಂಗಳಲ್ಲಿ ವಿಚಾರಣೆ ಪೂರ್ಣಗೊಳಿಸುವಂತೆ ಸೂಚನೆ ನೀಡಿದ್ದು, ಸಧ್ಯ ಕುಲಕರ್ಣಿಗೆ ರಿಲೀಫ್ ಸಿಕ್ಕಿದೆ. ಕುಲಕರ್ಣಿ ಪರ ವಾದ ಮಂಡಿಸಿದ್ದ ವಕೀಲ ಶರಣಗೌಡ ಪಾಟೀಲ್ ಅವರ ತಂಡ ಜಾಮೀನು ಪಡೆಯುವಲ್ಲಿ ಯಶಸ್ವಿಯಾಗಿದೆ. ಶಾಸಕ ವಿನಯ್ ಕುಲಕರ್ಣಿ ಜಾಮೀನು ಪಡೆಯುವ ಮೂಲಕ ನ್ಯಾಯ ಪ್ರಕ್ರಿಯೆಯಲ್ಲಿ ಮುಂದಿನ ಹಂತಕ್ಕೆ ಸಾಗಿದ್ದಾರೆ.

ಸಾಕ್ಷಿಗಳನ್ನು ಬೆದರಿಸಿದ್ದ ಶಾಸಕನ ಜಾಮೀನು ರದ್ದಾಗಿತ್ತು

2016 ರ ಜುಲೈ 15ರಂದು ಧಾರವಾಡ ತಾಲ್ಲೂಕಿನ ಹೆಬ್ಬಳ್ಳಿ ಕ್ಷೇತ್ರದ ಜೆಡಿಪಿ ಸದಸ್ಯ ಯೋಗೇಶ ಗೌಡನನ್ನು ಜಿಮ್‌ನಲ್ಲಿ ಹತ್ಯೆಗೈಯಲಾಗಿತ್ತು. ಪ್ರಕರಣಕ್ಕೆ ಸಂಬಂಧಿಸಿದಂತೆ 2020ರಲ್ಲಿ ಕಾಂಗ್ರೆಸ್ ಶಾಸಕ ವಿನಯ್ ಕುಲಕರ್ಣಿ ಸಿಬಿಐಗೆ ಬಂಧಿತರಾಗಿದ್ದರು. ಸುಪ್ರೀಂಕೋರ್ಟ್ ಜಾಮೀನಿನ ಶರತ್ತಿನಂತೆ ಇವರಿಗೆ ಧಾರವಾಡ ಪ್ರವೇಶ ನಿಷೇಧವಿತ್ತು.

ವಿಚಾರಣೆ ವೇಳೆ ಸಾಕ್ಷಿಗಳನ್ನು ಪ್ರಭಾವಿಸುವ ಪ್ರಯತ್ನ, ಹಣದ ಆಮಿಷ ಮತ್ತಿತರ ಷರತ್ತುಗಳ ಉಲ್ಲಂಘನೆಯ ದಾಖಲೆ ಸಿಬಿಐ ಪತ್ತೆ ಹಚ್ಚಿತು. ಹೀಗಾಗಿ ಸುಪ್ರೀಂಕೋರ್ಟ್ ಎಲ್ಲ ದಾಖಲೆಗಳನ್ನು ಪರಿಶೀಲಿಸಿ, ಶಾಸಕ ವಿನಯ್ ಕುಲಕರ್ಣಿಯ ಜಾಮೀನನ್ನು ರದ್ದುಪಡಿಸುವ ಆದೇಶ ನೀಡಿತ್ತು. ಅದಾದ ಬಳಿಕ ವಿಜಯಪುರ ಸೆಂಟ್ರಲ್ ಜೈಲಿನಲ್ಲಿ ಬಂಧಿತರಾಗಿದ್ದ ಕುಲಕರ್ಣಿ, ಹೈಕೋರ್ಟ್ ಸೂಚನೆಯಂತೆ ಜಾಮೀನುಗಾಗಿ ಸುಪ್ರೀಂಕೋರ್ಟ್ ಗೆ ಅರ್ಜಿ ಸಲ್ಲಿಸಿದ್ದರು. ಇದೀಗ ಕುಲಕರ್ಣಿಗೆ ಸುಪ್ರೀಂ ಕೋರ್ಟ್​ ಜಾಮೀನು ಮಂಜೂರು ಮಾಡಿದ್ದು, ತಾತ್ಕಾಲಿಕ ರಿಲೀಫ್ ಸಿಕ್ಕಿದೆ.

For More Updates Join our WhatsApp Group :

https://chat.whatsapp.com/JVoHqE476Wn3pVh1gWNAcH

Leave a Reply

Your email address will not be published. Required fields are marked *