ಸಿದ್ದರಾಮಯ್ಯ ಆಪ್ತನ ಮೇಲೆ D.K ಶಿವಕುಮಾರ್ ಕಣ್ಣಿಟ್ಟಾರಾ?

ರಾಜಕೀಯದಲ್ಲಿ ಮೇಲಿಂದ ಮೇಲೆ ಭೇಟಿಯ ರಹಸ್ಯ ಬಯಲು.

ಬೆಂಗಳೂರು: ಕರ್ನಾಟಕ ಕಾಂಗ್ರೆಸ್ ಪಕ್ಷದಲ್ಲಿ ಅಧಿಕಾರ ಹಂಚಿಕೆ ಚರ್ಚೆ ಮತ್ತೆ ಮೊನ್ನೆಲೆಗೆ ಬಂದಿದೆ. ಈ ಸಂದರ್ಭದಲ್ಲಿಯೇ ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್  ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಆಪ್ತ ನಾಯಕನನ್ನು ತಮ್ಮ ಕಡೆಗೆ ಸೆಳೆಯಲು ಯತ್ನಿಸಿರುವುದು ಬಹಿರಂಗವಾಗಿದೆ. ಶನಿವಾರವಷ್ಟೇ ಡಿಕೆ ಶಿವಕುಮಾರ್ ಮಾಜಿ ಸಚಿವ ಕೆಎನ್ ರಾಜಣ್ಣ ನಿವಾಸಕ್ಕೆ ಹೋಗಿ ಮಾತುಕತೆ ನಡೆಸಿದ್ದರು. ಅದಾದ ನಂತರದ ಬೆಳವಣಿಗೆಯಲ್ಲಿ, ಸೋಮವಾರ ಸಂಜೆ ಡಿಕೆ ಶಿವಕುಮಾರ್ ಜೊತೆ ರಾಜಣ್ಣ ಮಾತುಕತೆ ನಡೆಸಿದ್ದಾರೆ.

ರಾಜಣ್ಣ ಬಳಿ ಡಿಕೆ ಶಿವಕುಮಾರ್ ಹೇಳಿದ್ದೇನು?

ರಾಜಣ್ಣ ಜೊತೆ ರಾಜಕೀಯದ ಹಳೆ ನೆನಪುಗಳನ್ನು ಮೆಲುಕು ಹಾಕಿದ ಡಿಕೆ ಶಿವಕುಮಾರ್, ಯೂತ್ ಕಾಂಗ್ರೆಸ್ ದಿನಗಳನ್ನು ನೆನಪಿಸಿದ್ದಾರೆ. ನಾವಿಬ್ಬರೂ ಹಳೆಯ ಸ್ನೇಹಿತರು ನೆನಪಿರಲಿ. ಯೂತ್​ ಕಾಂಗ್ರೆಸ್​ ದಿನಗಳಿಂದಲೂ ಜತೆಯಾಗಿ ಕೆಲಸ ಮಾಡಿದ್ದೇವೆ. ನೀವು ಅಪೆಕ್ಸ್ ಬ್ಯಾಂಕ್ ಅಧ್ಯಕ್ಷರಾಗಲೂ ನಾನೇ ಸಹಾಯ ಮಾಡಿದ್ದು. ಹೀಗಾಗಿದ್ದಾಗ ರಾಜಕೀಯ ವಿರೋಧ ಯಾಕೆ ಎಂದು ರಾಜಣ್ಣ ಬಳಿ ಡಿಕೆ ಶಿವಕುಮಾರ್ ಪ್ರಶ್ನಿಸಿದ್ದಾರೆ ಎನ್ನಲಾಗಿದೆ.

ಸಿದ್ದರಾಮಯ್ಯ ಕಾಂಗ್ರೆಸ್​ ಪಕ್ಷಕ್ಕೆ ಬರುವ ಮೊದಲೇ ನಾವಿಬ್ಬರೂ ಸ್ನೇಹಿತರು. 2004ರ ಬಳಿಕ ಸಿದ್ದರಾಮಯ್ಯ ಕಾಂಗ್ರೆಸ್​ಗೆ ಬಂದಿದ್ದಾರೆ. ಅದಕ್ಕಿಂತ ಮೊದಲೇ ನಾವಿಬ್ಬರು ಸ್ನೇಹಿತರಾಗಿದ್ದೇವೆ ಎಂದು ರಾಜಣ್ಣ ಜತೆ ಆತ್ಮೀಯವಾಗಿ ಡಿಕೆ ಶಿವಕುಮಾರ್ ಸಂಭಾಷಣೆ ನಡೆಸಿದ್ದಾರೆ ಎಂದು ಮೂಲಗಳು ತಿಳಿಸಿವೆ.

ಡಿಕೆಶಿ ಮಾತಿಗೆ ರಾಜಣ್ಣ ಏನಂದ್ರು?

ಡಿಕೆಶಿ ಮಾತಿಗೆ ಪ್ರತಿಯಾಗಿ ರಾಜಣ್ಣ, ನಮಗೆ ಎಲ್ಲಿ ಗೌರವ ಇದೆಯೋ ಅಲ್ಲಿ ನಾವು ಇರುತ್ತೇವೆ. ನಿಮ್ಮ ಸ್ಥಾನಮಾನದ ಬಗ್ಗೆ ನಮ್ಮದೇನು ಅಭ್ಯಂತರವಿಲ್ಲ. ಹೈಕಮಾಂಡ್​ ಅನ್ನು ಒಪ್ಪಿಸಿ ಎಂದು ಹೇಳಿದ್ದಾರೆ.

For More Updates Join our WhatsApp Group :

https://chat.whatsapp.com/JVoHqE476Wn3pVh1gWNAcH

Leave a Reply

Your email address will not be published. Required fields are marked *