ಬೆಂಗಳೂರು : ಕಾಂಗ್ರೆಸ್ ಸರ್ಕಾರದ ಗ್ಯಾರಂಟಿ ಯೋಜನೆಗಳಲ್ಲಿ ಒಂದಾದ ಗೃಹಲಕ್ಷ್ಮೀ ಯೋಜನೆಯ ಹಣ ಬಂದಿಲ್ಲ ಎಂಬ ಮಾತುಗಳು ಕೇಳಿ ಬಂದ ಬೆನ್ನಲ್ಲೇ ಮಹಿಳೆಯರಿಗೆ ನೀಡುತ್ತಿರುವ 2 ಸಾವಿರ ಹಣ ಯೋಜನೆ ಎಂದಿಗೂ ನಿಲ್ಲುವುದಿಲ್ಲ ಎಂಧು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವೆ ಲಕ್ಷ್ಮೀ ಹೆಬ್ಬಾಳ್ಳರ್ ತಿಳಿಸಿದ್ದಾರೆ
ಈ ಬಗ್ಗೆ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಗೃಹಲಕ್ಷ್ಮೀ ಯೋಜನೆ ನಿತ್ಯ, ಸತ್ಯ, ನಿರಂತರವಾದುದು. ಕಳೆದ 2 ತಿಂಗಳಿನ ಬಾಕಿ ಹಣವನ್ನು ಒಂದೇ ಬಾರಿ ಖಾತೆಗೆ ಜಮಾ ಮಾಡಲಾಗುವುದು. ಲಿಂಗತ್ವ ಅಲ್ಪಸಂಖ್ಯಾತರಿಗೆ 3 ತಿಂಗಳ ಹಿಂದಷ್ಟೇ ಅರ್ಜಿ ಹಾಕಲು ಅವಕಾಶ ನೀಡಲಾಗಿತ್ತು. ಅವರಿಗೂ ಸಹ ಒಮ್ಮೆಲೇ ಹಣ ಪಾವತಿಯಾಗಲಿದೆ ಎಂದು ವಿವರಿಸಿದರು.