ಸ್ವಪಕ್ಷ ಶಾಸಕ ಇಕ್ಬಾಲ್ ಹುಸೇನ್ ಬಜೆಟ್ ಸಮೀಕ್ಷೆಯ ಬಗ್ಗೆ ಮಾತನಾಡಿದ ಬಗ್ಗೆ ಸಾರಿಗೆ ಸಚಿವ ಪ್ರತಿಕ್ರಿಯೆ
ಬೆಂಗಳೂರು: ರಾಜ್ಯ ಸರ್ಕಾರ ಮಂಡಿಸಿರುವ ಬಜೆಟ್ ಬಗ್ಗೆ ಸ್ವಪಕ್ಷ ಶಾಸಕ ಇಕ್ಬಾಲ್ ಹುಸೇನ್ ನೀಡಿದ್ದ ಹೇಳಿಕೆ ಬಗ್ಗೆ ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಪ್ರತಿಕ್ರಿಯಿಸಿದ್ದಾರೆ. ಇಕ್ಬಾಲ್ ಹುಸೇನ್ ಮಾತ್ರವಲ್ಲ, ಯಾರೇ ಆಗಲಿ ಪಕ್ಷದ ಆಂತರಿಕ ವಿಚಾರಗಳನ್ನು ಮಾಧ್ಯಮಗಳ ಮುಂದೆ ಬಹಿರಂಗವಾಗಿ ಚರ್ಚಿಸಬಾರದು. ಯಾವುದೇ ಸಮಸ್ಯೆಗಳಿದ್ದರೂ, ಮುಖ್ಯಮಂತ್ರಿಗಳು ಅಥವಾ ಉಪಮುಖ್ಯಮಂತ್ರಿಗಳೊಂದಿಗೆ ನಾಲ್ಕು ಗೋಡೆಗಳ ಮಧ್ಯೆ ಕುಳಿತು ಮಾತನಾಡಿ ಪರಿಹಾರ ಕಂಡುಕೊಳ್ಳಬೇಕು. ಮಾಧ್ಯಮಗಳ ಮುಂದೆ ಮಾತನಾಡುವುದರಿಂದ ಪಕ್ಷಕ್ಕೆ ಹಾನಿಯಾಗುತ್ತದೆ ಎಂದು ಅವರು ಅಭಿಪ್ರಾಯಪಟ್ಟಿದ್ದಾರೆ.
ಬಜೆಟ್ ಸಮಾಧಾನ ತಂದಿಲ್ಲ. ಆಯವ್ಯಯ ಮಂಡನೆಗೂ ಮುನ್ನವೇ ಸಿಎಂ ಭೇಟಿಯಾಗಿ ಕ್ಷೇತ್ರಗಳ ಸಮಸ್ಯೆ ಬಗ್ಗೆ ಮನವರಿಕೆ ಮಾಡಿದ್ದೆ. ಹೀಗಾಗಿ ಹೆಚ್ಚಿನ ಅನುದಾನದ ನಿರೀಕ್ಷೆ ಇತ್ತು. ಆದರೆ ಅದು ಹುಸಿಯಾಗಿದೆ ಎಂದು ರಾಮನಗರ ಶಾಸಕ ಇಕ್ಬಾಲ್ ಹುಸೇನ್ ಹೇಳಿದ್ದರು.
For More Updates Join our WhatsApp Group :




