ಸಿದ್ದರಾಮಯ್ಯ ಬಣದ ಸಭೆಯಲ್ಲಿ ಏನೆಲ್ಲ ಚರ್ಚೆ?
ಬೆಳಗಾವಿ: ಚಳಿಗಾಲದ ಅಧಿವೇಶನದ ನಡುವೆ ರಾಜ್ಯ ಕಾಂಗ್ರೆಸ್ ಪಾಳಯದಲ್ಲಿ ಡಿನ್ನರ್ ಪಾಲಿಟಿಕ್ಸ್ ಜೋರಾಗಿ ನಡೆಯುತ್ತಿದೆ. ಸಚಿವ ಸತೀಶ್ ಜಾರಕಿಹೊಳಿ ಏರ್ಪಡಿಸಿದ್ದ ಡಿನ್ನರ್ನಲ್ಲಿ ಸಿಎಂ ಸಿದ್ದರಾಮಯ್ಯ ಸೇರಿ ಅವರ ಆಪ್ತವಲಯ ಭಾಗಿಯಾಗಿದೆ. ಅನಾರೋಗ್ಯದ ನಡುವೆಯೂ ಸಿದ್ದರಾಮಯ್ಯ ಡಿನ್ನರ್ನಲ್ಲಿ ಭಾಗಿಯಾಗಿದ್ದಾರೆ. ಅಧಿವೇಶನ ಮುಗಿಯುತ್ತಿದ್ದಂತೆ ರಾಜ್ಯ ನಾಯಕರಿಗೆ ಹೈಕಮಾಂಡ್ ಬುಲಾವ್ ಸಾಧ್ಯತೆ ಹಿನ್ನಲೆ ರಾಜಕೀಯ ಚಟುವಟಿಕೆಗಳು ಮತ್ತೆ ಗರಿಗೆದರಿವೆ ಎನ್ನಲಾಗಿದೆ.
ಡಿನ್ನರ್ ಮೀಟಿಂಗ್ ವೇಳೆ ಏನೆಲ್ಲ ಚರ್ಚೆ?
ಊಟದ ಹೆಸರಲ್ಲಿ ಸಿದ್ದರಾಮಯ್ಯ ಬಣದ ನಾಯಕರೆಲ್ಲ ಒಟ್ಟಿಗೆ ಸೇರಿದ್ದರೂ ಹಲವು ರಾಜಕೀಯ ವಿಚಾರಗಳು ಈ ವೇಳೆ ಚರ್ಚೆಯಾಗಿವೆ. ಸಿದ್ದರಾಮಯ್ಯ ದೆಹಲಿಗೆ ಹೋಗುವ ಮುನ್ನ ಡಿಸಿಎಂ ಡಿ.ಕೆ. ಶಿವಕುಮಾರ್ ದೆಹಲಿಗೆ ಹೋಗುವ ಸಾಧ್ಯತೆ ಇದೆ. ಒಂದೊಮ್ಮೆ ಅಂದುಕೊಂಡಂತೆ ಆದ್ರೆ ಯಾವ ರೀತಿಯಾಗಿ ತಾವು ಮುಂದಿನ ನಿರ್ಧಾರ ಕೈಗೊಳ್ಳಬೇಕು ಎಂದು ಸಭೆಯಲ್ಲಿ ಸಮಾಲೋಚನೆ ನಡೆಸಲಾಗಿದೆ. ಅಲ್ಲದೆ ಸಿಎಂ ಸ್ಥಾನ ಬದಲಾವಣೆ ವಿಚಾರ ಬಂದ್ರೆ ಅದನ್ನು ಹೇಗೆ ನಿಭಾಯಿಸಬೇಕು, ಸಿಎಂ ಸ್ಥಾನ ಬದಲಾವಣೆ ಆದರೆ ಅದರಿಂದ ಪಕ್ಷ ಹಾಗೂ ಸರ್ಕಾರಕ್ಕೆ ಯಾವ ರೀತಿ ಡ್ಯಾಮೇಜ್ ಆಗಲಿದೆ ಅನ್ನೋದನ್ನ ಹೇಗೆ ಮನವರಿಕೆ ಮಾಡಬೇಕು ಎಂಬ ಬಗ್ಗೆಯೂ ಮಾತುಕತೆ ನಡೆದಿದೆ.
ಯಾವುದೇ ಕಾರಣಕ್ಕೂ ಮುಖ್ಯಮಂತ್ರಿ ಹುದ್ದೆ ಬಿಟ್ಟುಕೊಡಬೇಡಿ. ಸಿಎಂ ಸ್ಥಾನ ಬಿಟ್ಟು ಕೊಟ್ಟರೆ ಸಾಂಪ್ರಾದಾಯಿಕ ಅಹಿಂದಾ ಮತಗಳು ದೂರವಾಗುವ ಸಾಧ್ಯತೆ ಬಗ್ಗೆ ಹೈಕಮಾಂಡ್‌ಗೆ ಮನವರಿಕೆ ಮಾಡಿ. ಅಹಿಂದಾ ಸಚಿವರು, ಬಹುತೇಕ ಶಾಸಕರು ತಮ್ಮ ಪರವಾಗಿದ್ದಾರೆಂದು ಗಟ್ಟಿಯಾಗಿ ಹೇಳಿ ಎಂದು ಸಿದ್ದರಾಮಯ್ಯ ಅವರ ಮೇಲೆ ಬೆಂಬಲಿಗರು ಈ ವೇಳೆ ಒತ್ತಡ ಹೇರಿದ್ದಾರೆ. ರಾಜಣ್ಣರಂತೆ ಇನ್ನುಳಿದ ಅಹಿಂದಾ ನಾಯಕರು ರಾಹುಲ್ ಗಾಂಧಿಗೆ ಪತ್ರ ಚಳುವಳಿ ಮಾಡುವ ಬಗ್ಗೆಯೂ ಚರ್ಚೆ ನಡೆದಿದೆ.
For More Updates Join our WhatsApp Group :




