ಪ್ರತಿ ಶುಕ್ರವಾರ ಫೋನ್–ಇನ್ ಕಾರ್ಯಕ್ರಮ ಆರಂಭ – ಉತ್ತರ ನಗರ ಪಾಲಿಕೆ
ಬೆಂಗಳೂರು: ಉತ್ತರ ನಗರ ಪಾಲಿಕೆಯಲ್ಲಿ ನಾಗರಿಕರ ಸೇವಾ ಸುಧಾರಣೆಗಾಗಿ ಪ್ರತೀ ಶುಕ್ರವಾರ ಫೋನ್-ಇನ್ ಕಾರ್ಯಕ್ರಮ ಬೆಂಗಳೂರು ಉತ್ತರ ನಗರ ಪಾಲಿಕೆ ವ್ಯಾಪ್ತಿಯ ಸಾರ್ವಜನಿಕರ ಅಹವಾಲುಗಳನ್ನು ನೇರವಾಗಿ ಆಲಿಸುವ ಉದ್ದೇಶದಿಂದ *ಉತ್ತರ ನಗರ ಪಾಲಿಕೆಯ ಆಯುಕ್ತರಾದ ಶ್ರೀ ಪೊಮ್ಮಲ ಸುನೀಲ್ ಕುಮಾರ್* ಅವರು ಪ್ರತೀ ಶುಕ್ರವಾರ ಸಾರ್ವಜನಿಕರೊಂದಿಗೆ ಫೋನ್-ಇನ್ ಕಾರ್ಯಕ್ರಮ ಆರಂಭಿಸಿದ್ದು, ಈ ವಾರದ ಫೋನ್-ಇನ್ ಕಾರ್ಯಕ್ರಮವು 2026ರ ಏಪ್ರಿಲ್, 17 ರಂದು (ಶುಕ್ರವಾರ) ಬೆಳಿಗ್ಗೆ 7.00ರಿಂದ 9.00 ಗಂಟೆಯವರೆಗೆ ನಡೆಯಲಿದೆ.
ಈ ಅವಧಿಯಲ್ಲಿ ನಾಗರಿಕರು ರಸ್ತೆ ಗುಂಡಿಗಳು ಹಾಗೂ ದುರಸ್ತಿ ಕಾರ್ಯಗಳು, ಬೀದಿ ದೀಪಗಳ ನಿರ್ವಹಣೆ, ಮನೆಮನೆ ಕಸ ಸಂಗ್ರಹಣೆ ಮತ್ತು ವಿಲೇವಾರಿ, ಅಪಾಯಕಾರಿಯಾದ ಮರಗಳು/ಕೊಂಬೆಗಳ ತೆರವು, ಸೊಳ್ಳೆ ನಿಯಂತ್ರಣ ಕ್ರಮಗಳು, ಬೀದಿ ನಾಯಿಗಳ ನಿಯಂತ್ರಣ, ಉದ್ಯಾನವನಗಳ ಅಭಿವೃದ್ಧಿ ಹಾಗೂ ಸಂರಕ್ಷಣೆ, ಅನಧಿಕೃತ ಬ್ಯಾನರ್ ಮತ್ತು ಪೋಸ್ಟರ್ ಗಳ ತೆರವು, ಪಾದಚಾರಿ ಮಾರ್ಗಗಳ ಮೇಲಿನ ಒತ್ತುವರಿ ನಿವಾರಣೆ, ಇ-ಖಾತಾ ಸಂಬಂಧಿತ ಸಮಸ್ಯೆಗಳು ಸೇರಿದಂತೆ ವಿವಿಧ ನಾಗರಿಕ ಸಮಸ್ಯೆಗಳ ಕುರಿತು ಆಯುಕ್ತರೊಂದಿಗೆ ನೇರವಾಗಿ ಮಾತನಾಡಬಹುದಾಗಿದೆ.
ಫೋನ್-ಇನ್ ಕಾರ್ಯಕ್ರಮದಲ್ಲಿ ಸ್ವೀಕರಿಸಲಾದ ಎಲ್ಲಾ ಅಹವಾಲುಗಳನ್ನು ‘ಸಹಾಯ 2.0’ ಪೋರ್ಟಲ್ ನಲ್ಲಿ ದಾಖಲಿಸಿ, ಸಂಬಂಧಿಸಿದ ಇಲಾಖಾ ಅಧಿಕಾರಿಗಳಿಗೆ ತಕ್ಷಣವೇ ಕಳುಹಿಸಲಾಗುತ್ತದೆ. ದೂರು ದಾಖಲಾಗಿರುವ ವಿವರಗಳು ಹಾಗೂ ಸಂಬಂಧಿತ ಅಧಿಕಾರಿಗಳ ಮಾಹಿತಿಯನ್ನು ನಾಗರಿಕರಿಗೆ ಎಸ್.ಎಂ.ಎಸ್ ಮೂಲಕ ತಿಳಿಸಲಾಗುವುದು.
ನಿಯಂತ್ರಣ ಕೊಠಡಿ ಸಂಪರ್ಕ ವಿವರಗಳು:ಮೊಬೈಲ್ / ವಾಟ್ಸಪ್:* 9480685705, ಲ್ಯಾಂಡ್ಲೈನ್:* 080-22975936 / 080-23636671 ಇದಲ್ಲದೆ, ನಾಗರಿಕರು ತಮ್ಮ ದೂರುಗಳನ್ನು ‘ಸಹಾಯ 2.0’ ಮೊಬೈಲ್ ಅಪ್ಲಿಕೇಶನ್ ಮೂಲಕವೂ ಸಲ್ಲಿಸಬಹುದಾಗಿದೆ.
For More Updates Join our WhatsApp Group :




