ತಾಯಿಯ ಮಾತುಗಳೇ ಶಕ್ತಿ – ದ್ವಿತೀಯ ಪಿಯುಸಿಯಲ್ಲಿ ರಾಜ್ಯಕ್ಕೆ ಪ್ರಥಮ ಸ್ಥಾನ.
ಮಂಗಳೂರು : ಮಂಗಳೂರು, ದಕ್ಷಿಣ ಕನ್ನಡ ಜಿಲ್ಲೆಯ ಮೂಡಬಿದಿರೆಯ ಆಳ್ವಾಸ್ ಕಾಲೇಜಿನ ವಿದ್ಯಾರ್ಥಿನಿ ದಿಶಾ ದ್ವಿತೀಯ ಪಿಯುಸಿ ವಾಣಿಜ್ಯ ವಿಭಾಗದಲ್ಲಿ ರಾಜ್ಯಕ್ಕೆ ಪ್ರಥಮ ಸ್ಥಾನ ಪಡೆದಿದ್ದಾರೆ.
ಪರೀಕ್ಷೆ ಮುಗಿಸಿ ಬಂದ ದಿಶಾಳಿಗೆ ಕಾದಿತ್ತು ಆಘಾತ!
ದಿನೇಶ್ ಹಾಗೂ ಸವಿತಾ ದಂಪತಿಯ ಇಬ್ಬರು ಮಕ್ಕಳಲ್ಲಿ ಹಿರಿಯವಳು ದಿಶಾ. ತಂಗಿ ದೀಕ್ಷಾ ಈಗಷ್ಟೇ ಎಸ್ಎಸ್ಎಲ್‌ಸಿ ಗೆ ಕಾಲಿಟ್ಟಿದ್ದಾಳೆ. ಅಂದು ದಿಶಾ ಗಣಿತ ಪರೀಕ್ಷೆಗೆ ರೂಂ ನಲ್ಲಿ ಕುಳಿತು ತಯಾರಿ ನಡೆಸುತ್ತಿದ್ದಳು. ರಾತ್ರಿಯಾಗುತ್ತಿದ್ದಂತೆ ರೂಂ ನ ಹೊರಗೆ ಯಾರೋ ಬಿದ್ದಂತೆ ಶಬ್ದ ಕೇಳಿ ಬಂದಿದೆ. ಹೊರಗೆ ಬಂದು ನೋಡಿದಾಗ ದಿಶಾ ತಾಯಿ ಆಕಸ್ಮಿಕವಾಗಿ ಜಾರಿ ಕೆಳಗೆ ಬಿದ್ದಿದ್ದರು. ತಕ್ಷಣಕ್ಕೆ ಏನೂ ಆಗಿಲ್ಲ ಎಂಬಂತೆ ಇದ್ದ ದಿಶಾ ತಾಯಿ ಮರುದಿನ ಬೆಳಗ್ಗಿನ ವೇಳೆಗೆ ಪ್ರಜ್ಞೆ ತಪ್ಪಿದ್ದರು. ಮನೆಯವರು ಮಂಗಳೂರಿನ ವೆನ್ಲಾಕ್ ಜಿಲ್ಲಾಸ್ಪತ್ರೆಗೆ ಅವರನ್ನು ದಾಖಲಿಸಿದ್ದರು. ಮರುದಿನ ಆಕೆಯನ್ನು ವೆನ್ಲಾಕ್ ಆಸ್ಪತ್ರೆಯಿಂದ ಮೂಡಬಿದಿರೆಯ ಖಾಸಗಿ ಆಸ್ಪತ್ರೆಗೆ ಕರೆ ತರಲಾಯಿತು.
ಈ ಸಮಯದಲ್ಲಿ ಆಕೆಗೆ ಬೆಂಬಲವಾಗಿ ನಿಂತಿದ್ದು ಕಾಲೇಜಿನ ಆಡಳಿತ ಮಂಡಳಿ ಮತ್ತು ಉಪನ್ಯಾಸಕರು. ಕೌಟುಂಬಿಕ ಸಮಸ್ಯೆಯಿಂದಾಗಿ ಈಗ ದಿಶಾ ಮತ್ತು ಆಕೆಯ ತಂಗಿ ಶಿಕ್ಷಕಿ ವೀಣಾ ಎಂಬುವರ ಮನೆಯಲ್ಲಿದ್ದು, ಮುಂದೆ ಹಾಸ್ಟೆಲ್ ಅಥವಾ ಪಿಜಿಯಲ್ಲಿದ್ದು ವಿದ್ಯಾಭ್ಯಾಸ ಮುಂದುವರಿಸುವ ಬಗ್ಗೆ ಇನ್ನಷ್ಟೇ ನಿರ್ಧಾರವನ್ನು ಮಾಡಲಿದ್ದಾರೆ. ದಿಶಾ ತನ್ನ ತಾಯಿಯ ಕನಸಿನಂತೆಯೇ ಸಿಎ ಮಾಡಲು ಮುಂದಾಗಿದ್ದು, ಪ್ರಸ್ತುತ ಸಿ.ಎ ಫೌಂಡೇಷನ್ ಪರೀಕ್ಷೆಗೂ ಸಜ್ಜಾಗುತ್ತಿದ್ದಾಳೆ.
For More Updates Join our WhatsApp Group :




