ಚಿಕ್ಕಮಗಳೂರು: ದೇಶದ ವಿವಿಧೆಡೆಗಳಲ್ಲಿ ವೈದ್ಯರ ಮೇಲೆ ಹಲ್ಲೆ ನಡೆಯುತ್ತಿರುವ ಪ್ರಕರಣಗಳು ಬೆಳಕಿಗೆ ಬರುತ್ತಿದೆ. ಚಿಕಮಗಳೂರಿನ ಜಿಲ್ಲಾಸ್ಪತ್ರೆಯಲ್ಲಿ ವೈದ್ಯರ ಮೇಲೆ ನಡೆದ ಹಲ್ಲೆ ಪ್ರಕರಣ ಸಂಬಂಧ ಆರೋಪಿಗಳನ್ನು ಬಂಧಿಸಲಾಗಿದೆ.
ಚಿಕ್ಕಮಗಳೂರು ನಗರದ ಮಲ್ಲೇಗೌಡ ಜಿಲ್ಲಾಸ್ಪತ್ರೆಯಲ್ಲಿ ವೈದ್ಯರ ಮೇಲೆ ಮಹಿಳೆಯೊಬ್ಬರು ಹಲ್ಲೆ ನಡೆಸಿದ್ದರು.
ಸಹೋದರನ ಚಿಕಿತ್ಸೆಗಾಗಿ ಟಿಪ್ಪು ನಗರದ ನಿವಾಸಿ ತಸೀಮಾ ಹಾಗೂ ಸಂಬಂಧಿಕರು ಬಂದಿದ್ದರು. ತುರ್ತು ಚಿಕಿತ್ಸಾ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದ ಮೂಳೆ ತಜ್ಞ ವೆಂಕಟೇಶ್ ತಪಾಸಣೆ ನಡೆಸುತ್ತಿದ್ದಾಗ ರೋಗಿಗಳ ಸಂಬಂಧಿಕರು ವಾರ್ಡ್ ಗೆ ನುಗ್ಗಿ ಗಲಾಟೆ ಮಾಡಿದ್ದಾರೆ. ವೈದ್ಯರು ಎಲ್ಲರೂ ಹೊರ ಹೋಗುವಂತೆ ತಿಳಿಸಿದ್ದಾರೆ. ಈ ವೇಳೆ ತಸೀಮಾ ವೈದ್ಯರ ಕೊರಳ ಪಟ್ಟಿ ಹಿಡಿದು ಎಳೆದಿದ್ದಲ್ಲದೇ ಚಪ್ಪಲಿ ಎಸೆದಿದ್ದಾಳೆ.
ವೈದ್ಯರ ಮೇಲಿನ ಹಲ್ಲೆ ಪ್ರಕರಣ ಸಾಮಾಜಿಕ ಜಾಲತಾಣಗಳಳಲ್ಲಿಯೂ ವೈರಲ್ ಆಗಿತ್ತು. ಘಟನೆ ಬಳಿಕ ವೈದ್ಯರು ಹಾಗೂ ಸಿಬ್ಬಂದಿಗಳು ಸೇವೆ ಸ್ಥಗಿತಗೊಳಿಸಿ ಆಸ್ಪತ್ರೆ ಬಂದ್ ಮಾಡಿ ಪ್ರತಿಭಟನೆ ನಡೆಸಿದ್ದರು. ಸ್ಥಳಕ್ಕೆ ಧಾವಿಸಿದ ಚಿಕ್ಕಮಗಳೂರು ಪೊಲೀಸರು, ಹಲ್ಲೆ ನಡೆಸಿದ ಮಹಿಳೆ ತಸೀಮಾ ಇರ್ಫಾನ್ ವಿರುದ್ಧ ಎಫ್ಐಆರ್ ದಾಖಲಿಸಿದ್ದರು. ಇದೀಗ ಪ್ರಕರಣ ಸಂಬಂಧ ತಸೀಮಾ ಹಾಗೂ ಆಕೆಯ ಸಹೋದರನನ್ನು ಬಂಧಿಸಿದ್ದಾರೆ.