ದೀಪಾವಳಿ  ಆಚರಣೆ : ಹಸಿರು ಪಟಾಕಿಗಳನ್ನು ಮಾತ್ರ ಬಳಸಿ

ದೀಪಾವಳಿ ಆಚರಣೆ : ಹಸಿರು ಪಟಾಕಿಗಳನ್ನು ಮಾತ್ರ ಬಳಸಿ

ತುಮಕೂರು : ದೀಪಾವಳಿ  ಆಚರಣೆ ಸಂದರ್ಭದಲ್ಲಿ ಶಬ್ದ ಮಾಲಿನ್ಯ ಮತ್ತು ವಾಯು ಮಾಲಿನ್ಯ ತಡೆಗಟ್ಟುವ ಸಲುವಾಗಿ  ಮಹಾನಗರ ಪಾಲಿಕೆಯ ವ್ಯಾಪ್ತಿಯಲ್ಲಿ ಕಡ್ಡಾಯವಾಗಿ ಪರಿಸರ ಸ್ನೇಹಿ ಹಸಿರು ಪಟಾಕಿಗಳನ್ನು ಮಾತ್ರ ಬಳಸಬೇಕು ಎಂದು  ಪಾಲಿಕೆ ಆಯುಕ್ತ ಬಿ.ವಿ. ಅಶ್ವಿಜ ತಿಳಿಸಿದ್ದಾರೆ.

ದೀಪಾವಳಿ ಹಬ್ಬದ ಆಚರಣೆಯ ಸಂದರ್ಭದಲ್ಲಿ ಹಸಿರು ಪಟಾಕಿಗಳನ್ನು ಹಚ್ಚಲು/ಸಿಡಿಸಲು ರಾತ್ರಿ 8 ರಿಂದ 10 ಗಂಟೆಯವರೆಗೆ ಮಾತ್ರ ಅವಕಾಶವಿದ್ದು, ಪ್ರಾಣಿ, ಪಕ್ಷಿ, ಮಕ್ಕಳು ಹಾಗೂ ವೃದ್ಧರಿಗೆ ತೊಂದರೆಯಾಗದಂತೆ ಹಸಿರು ಪಟಾಕಿಯ ಚಿಹ್ನೆ. ಕ್ಯೂಆರ್ ಕೋಡ್ ಇರುವಂತಹ ಪಟಾಕಿಗಳನ್ನು ಮಾತ್ರ ಬಳಸಬೇಕು. ನಗರದ ಆಸ್ಪತ್ರೆ ಹಾಗೂ ಶಿಕ್ಷಣ ಸಂಸ್ಥೆ ಸೇರಿದಂತೆ ಯಾವುದೇ ನಿಷೇಧಿತ ಪ್ರದೇಶಗಲ್ಲಿ ಪಟಾಕಿಗಳನ್ನು ಸಿಡಿಸಬಾರದು ಎಂದು ತಿಳಿಸಿದ್ದಾರೆ.

ಪಟಾಕಿ ಬಳಸುವ ಸಂದರ್ಭದಲ್ಲಿ ಇಯರ್ ಪ್ಲಗ್/ಗಾಗಲ್ಸ್(Ear plug/Goggles)ನಂತಹ ಅಗತ್ಯ ಸುರಕ್ಷತಾ ಕ್ರಮಗಳನ್ನು ಕೈಗೊಳ್ಳಬೇಕು. ಪಟಾಕಿ ಸಿಡಿಸಿದ ನಂತರ  ಉಂಟಾದ ತ್ಯಾಜ್ಯವನ್ನು  ಪಾಲಿಕೆ ವಾಹನಗಳಿಗೆ ಕಸ ವಿಂಗಡಣೆ ಮಾಡಿಕೊಡಬೇಕು ಎಂದು ಅವರು ಮನವಿ ಮಾಡಿದ್ದಾರೆ.

Leave a Reply

Your email address will not be published. Required fields are marked *