ದೆಹಲಿ ತೆರಳಿದ ಶಾಸಕರಿಗೆ ಖಡಕ್ ಎಚ್ಚರಿಕೆ.!
ಬೆಂಗಳೂರು: ಕರ್ನಾಟಕದಲ್ಲಿ ಎರಡು ಉಪ ಚುನಾವಣೆಗಳು ಮುಕ್ತಾಯವಾದ ಬೆನ್ನಲ್ಲೆ ಸಚಿವ ಸಂಪುಟ ಪುನಾರಚನೆ ಚಟುವಟಿಕೆಗಳು ಜೋರಾಗಿವೆ. ಸರ್ಕಾರವೂ ಮೂರು ವರ್ಷ ಪೂರೈಸುತ್ತಿರುವ ಹಿನ್ನೆಲೆ ನಮಗೂ ಸಚಿವ ಸ್ಥಾನ ಕೊಡಿ ಎಂದು 25 ಕ್ಕೂ ಅಧಿಕ ಶಾಸಕರು ಹೈಕಮಾಂಡ್ ಭೇಟಿಗೆ ದೆಹಲಿಗೆ ತೆರಳಿದ್ದಾರೆ. ಆದ್ರೆ, ಶಾಸಕರ ದೆಹಲಿ ಯಾತ್ರೆಗೆ ಪರೋಕ್ಷವಾಗಿ ಸಿಎಂ ಸಿದ್ದರಾಮಯ್ಯ ಬೆಂಬಲಿಸಿದರೆ ಮತ್ತೊಂದೆಡೆ ಡಿಸಿಎಂ ಡಿಕೆ ಶಿವಕುಮಾರ್ ಗರಂ ಆಗಿದ್ದಾರೆ. ಅಲ್ಲದೇ ಖಡಕ್ ಎಚ್ಚರಿಕೆಯನ್ನೂ ಸಹ ನೀಡಿದ್ದು, ಇದು ರಾಜ್ಯ ಕಾಂಗ್ರೆಸ್ನಲ್ಲಿ ಭಾರೀ ಸಂಚಲನಕ್ಕೆ ಕಾರಣವಾಗಿದೆ.
ಮತ್ತೆ ಶುರುವಾಯ್ತಾ ಡಿಕೆಶಿ-ಸಿದ್ದರಾಮಯ್ಯ ಮುಸುಕಿನ ಗುದ್ದಾಟ?
ನಾಯಕತ್ವ ಬದಲಾವಣೆ ವಿಚಾರವಾಗಿ ಸಿಎಂ ಸಿದ್ದರಾಮಯ್ಯ ಹಾಗೂ ಡಿಕೆ ಶಿವಕುಮಾರ್ ನಡುವೆ ಮುಸುಕಿನ ಗುದ್ದಾಟ ನಡೆಯುತ್ತಲೇ ಇದೆ. ಸಮಯ ಸಂದರ್ಭ ಬಂದಾಗೆಲ್ಲಾ ಡಿಕೆ ಶಿವಕುಮಾರ್ ಪರೋಕ್ಷವಾಗಿ ನಾಯಕತ್ವ ಬದಲಾವಣೆ ಬಗ್ಗೆ ಪ್ರಸ್ತಾಪಿಸುತ್ತಲೇ ಬಂದಿದ್ದಾರೆ. ಸಿಎಂ ಆಗಲೇಬೇಕೆಂದು ಪಟ್ಟು ಹಿಡಿದಿರುವ ಡಿಕೆ ಶಿವಕುಮಾರ್ ಆಗಾಗ ದೆಹಲಿಗೆ ಹೋಗಿರು ಬರುತ್ತಲೇ ಇದ್ದಾರೆ. ಇನ್ನು ಅವರ ಬೆಂಬಲಿಗ ಶಾಸಕರು ಸಹ ನಾಯಕತ್ವ ಬದಲಾವಣೆ ಬಗ್ಗೆಯೂ ಧ್ವನಿ ಎತ್ತುತ್ತಲೇ ಇದ್ದಾರೆ. ಆದ್ರೆ, ಇದೀಗ ಸಂಪುಟ ಪುನಾರಚನೆಗೆ ಡಿಕೆ ಶಿವಕುಮಾರ್ ಆಗಲಿ ಅಥವಾ ಅವರ ಬಣದ ಶಾಸಕರಾಗಲಿ ಯಾವುದೇ ಬೆಂಬಲ ಕೊಡುತ್ತಿಲ್ಲ, ಬದಲಿಗೆ ವಿರೋಧ ವ್ಯಕ್ತಪಡಿಸುತ್ತಿದ್ದು ಭಾರೀ ಚರ್ಚೆಗೆ ಗ್ರಾಸವಾಗಿದೆ.
For More Updates Join our WhatsApp Group :




