ಎಬಿಸಿ ಜ್ಯೂಸ್ ಬಗ್ಗೆ ಸಾಮಾನ್ಯವಾಗಿ ಎಲ್ಲರಿಗೂ ತಿಳಿದಿರುತ್ತದೆ. ಇದನ್ನು ಸೇಬು, ಬೀಟ್ರೂಟ್ ಮತ್ತು ಕ್ಯಾರೆಟ್ ಮಿಶ್ರಣ ಮಾಡಿ ತಯಾರಿಸಲಾಗುತ್ತದೆ. ಇದನ್ನು ಪ್ರತಿದಿನ ಕುಡಿಯುವುದರಿಂದ ದೇಹಕ್ಕೆ ವಿವಿಧ ಪೋಷಕಾಂಶಗಳು ದೊರೆಯುತ್ತವೆ. ಅದಕ್ಕಾಗಿಯೇ ಆರೋಗ್ಯ ತಜ್ಞರು ನಿಮ್ಮ ಆಹಾರದಲ್ಲಿ ಎಬಿಸಿ ಜ್ಯೂಸ್ ಸೇರಿಸಲು ಶಿಫಾರಸು ಮಾಡುತ್ತಾರೆ. ಹಾಗಾದರೆ, ಈ ಜ್ಯೂಸ್ ಅನ್ನು ತಪ್ಪದೆ ಪ್ರತಿದಿನ ಸೇವಿಸುವುದರಿಂದ ಸಿಗುವ ಪ್ರಯೋಜನವೇನು? ಈ ಸ್ಟೋರಿ ಮೂಲಕ ತಿಳಿದುಕೊಳ್ಳಿ.
ಎಬಿಸಿ ಜ್ಯೂಸ್ ಬಗ್ಗೆ ಯಾರಿಗೆ ತಾನೇ ತಿಳಿದಿಲ್ಲ ಹೇಳಿ? ಇತ್ತೀಚಿನ ದಿನಗಳಲ್ಲಿ ಈ ಜ್ಯೂಸ್ ಸೇವನೆ ಮಾಡುವವರ ಸಂಖ್ಯೆ ಸಿಕ್ಕಾ ಪಟ್ಟೆ ಹೆಚ್ಚಾಗಿದೆ. ಎಲ್ಲರಿಗೂ ತಿಳಿದಿರುವಂತೆ ಈ ಪಾನೀಯವನ್ನು ಸೇಬು, ಬೀಟ್ರೂಟ್ ಮತ್ತು ಕ್ಯಾರೆಟ್ ಮಿಶ್ರಣದಿಂದ ತಯಾರು ಮಾಡಲಾಗುತ್ತದೆ. ಇದು ಆರೋಗ್ಯಕ್ಕೆ ಮಾತ್ರವಲ್ಲ ಇದರ ರುಚಿ ಕೂಡ ತುಂಬಾ ಚೆನ್ನಾಗಿರುತ್ತದೆ. ಇದನ್ನು ಪ್ರತಿದಿನ ಕುಡಿಯುವುದರಿಂದ ದೇಹಕ್ಕೆ ವಿವಿಧ ರೀತಿಯ ಪೋಷಕಾಂಶಗಳು ದೊರೆಯುತ್ತವೆ. ಅದಕ್ಕಾಗಿಯೇ ಆರೋಗ್ಯ ತಜ್ಞರು ನಿಮ್ಮ ಆಹಾರದಲ್ಲಿ ಎಬಿಸಿ ಜ್ಯೂಸ್ ಸೇರಿಸಲು ಶಿಫಾರಸು ಮಾಡುತ್ತಾರೆ. ಅದರಲ್ಲಿಯೂ ಬೆಳಿಗ್ಗೆ ಇದ್ದ ತಕ್ಷಣ ಈ ಜ್ಯೂಸ್ ಕುಡಿಯುವುದರಿಂದ ಹಲವಾರು ರೀತಿಯ ಪ್ರಯೋಜನಗಳನ್ನು ಪಡೆದುಕೊಳ್ಳಬಹುದು. ಹಾಗಾದರೆ, ಈ ಜ್ಯೂಸ್ ಯಾರಿಗೆ ಒಳ್ಳೆಯದು? ಯಾಕೆ ಸೇವನೆ ಮಾಡಬೇಕು? ಇದರಿಂದ ಸಿಗುವ ಪ್ರಯೋಜನವೇನು ಈ ಸ್ಟೋರಿ ಮೂಲಕ ತಿಳಿದುಕೊಳ್ಳಿ.
ರೋಗನಿರೋಧಕ ಶಕ್ತಿಯನ್ನು ಹೆಚ್ಚಿಸುತ್ತದೆ:
ಸೇಬು ಮತ್ತು ಬೀಟ್‌ರೂಟ್‌ಗಳಲ್ಲಿರುವ ವಿಟಮಿನ್ ಸಿ ಮತ್ತು ಕ್ಯಾರೆಟ್‌ನಲ್ಲಿರುವ ಬೀಟಾ- ಕ್ಯಾರೋಟಿನ್ ರೋಗನಿರೋಧಕ ಶಕ್ತಿಯನ್ನು ಬಲಪಡಿಸುವುದಕ್ಕೆ ಸಹಾಯ ಮಾಡುತ್ತದೆ. ಮಾತ್ರವಲ್ಲ, ಎಬಿಸಿ ಜ್ಯೂಸ್ ಸೋಂಕು ಮತ್ತು ಅನಾರೋಗ್ಯದ ವಿರುದ್ಧ ಹೋರಾಡಲು ಸಹಕಾರಿಯಾಗಿದೆ. ಅದಕ್ಕಾಗಿಯೇ ಎಬಿಸಿ ಜ್ಯೂಸ್ ಅನ್ನು ನಿಮ್ಮ ಆಹಾರದಲ್ಲಿ ಸೇರಿಸಿಕೊಳ್ಳುವುದು ಬಹಳ ಒಳ್ಳೆಯದು.
ಜೀರ್ಣಕ್ರಿಯೆಗೆ ಸಹಕಾರಿ:
ನಿಮ್ಮ ಆಹಾರದಲ್ಲಿ ಎಬಿಸಿ ರಸವನ್ನು ಸೇರಿಸುವುದರಿಂದ ಅದರಲ್ಲಿರುವ ಹೆಚ್ಚಿನ ಫೈಬರ್ ಅಂಶ ಜೀರ್ಣಕ್ರಿಯೆ ಪ್ರಕ್ರಿಯೆಯನ್ನು ಉತ್ತೇಜಿಸುತ್ತದೆ. ಇದು ಮಲಬದ್ಧತೆಯನ್ನು ತಡೆಯುತ್ತದೆ. ಸೇಬು, ಬೀಟ್ರೂಟ್ ಮತ್ತು ಕ್ಯಾರೆಟ್‌ಗಳಲ್ಲಿರುವ ಪೌಷ್ಟಿಕಾಂಶದ ಮೌಲ್ಯಗಳು ಕರುಳಿನ ಚಲನೆಯನ್ನು ಸುಧಾರಿಸುತ್ತದೆ.
ಚರ್ಮದ ಆರೋಗ್ಯಕ್ಕೆ ಒಳ್ಳೆಯದು:
ಎಬಿಸಿ ಜ್ಯೂಸ್‌ನಲ್ಲಿರುವ ಉತ್ಕರ್ಷಣ ನಿರೋಧಕಗಳು ಮತ್ತು ವಿಟಮಿನ್ ಎ ಮತ್ತು ಸಿ ವಯಸ್ಸಾದ ಲಕ್ಷಣಗಳನ್ನು ಕಡಿಮೆ ಮಾಡಲು, ಚರ್ಮದ ಹೊಳಪನ್ನು ಹೆಚ್ಚಿಸಲು ಮತ್ತು ಸುಕ್ಕು ಮತ್ತು ಮೊಡವೆಗಳನ್ನು ಕಡಿಮೆ ಮಾಡಿ ಚರ್ಮವನ್ನು ಕಾಂತಿಯುತವಾಗಿರಿಸಲು ಸಹಾಯ ಮಾಡುತ್ತದೆ.
ದೇಹವನ್ನು ನಿರ್ವಿಷಗೊಳಿಸುತ್ತದೆ:
ನಿಮ್ಮ ದೈನಂದಿನ ಆಹಾರದ ಭಾಗವಾಗಿ ಎಬಿಸಿ ರಸವನ್ನು ಕುಡಿಯುವುದರಿಂದ ಯಕೃತ್ತಿನ ಕಾರ್ಯ ಸುಧಾರಿಸುತ್ತದೆ, ಮಾತ್ರವಲ್ಲ ಈ ಮೂರು ಪದಾರ್ಥಗಳು ಜೀರ್ಣಾಂಗ ವ್ಯವಸ್ಥೆಯನ್ನು ಸ್ವಚ್ಛಗೊಳಿಸಲು ಸಹಾಯ ಮಾಡುತ್ತದೆ. ಜೊತೆಗೆ ದೇಹದ ನಿರ್ವಿಷೀಕರಣಕ್ಕೆ ಕಾರಣವಾಗುತ್ತದೆ.
ತೂಕ ಇಳಿಸಿಕೊಳ್ಳಲು ಸಹಾಯ ಮಾಡುತ್ತದೆ:
ಕಡಿಮೆ ಕ್ಯಾಲೋರಿ ಮತ್ತು ಹೆಚ್ಚಿನ ಫೈಬರ್ ಅಂಶವನ್ನು ಹೊಂದಿರುವ ಎಬಿಸಿ ಜ್ಯೂಸ್ ಅನ್ನು ನಿಮ್ಮ ಆಹಾರದಲ್ಲಿ ಸೇರಿಸಿಕೊಳ್ಳುವುದರಿಂದ ದೀರ್ಘಕಾಲದ ವರೆಗೆ ಹೊಟ್ಟೆ ತುಂಬಿದ ಭಾವನೆ ಇರುತ್ತದೆ. ಕ್ಯಾಲೋರಿ ಸೇವನೆಯನ್ನು ಕಡಿಮೆ ಮಾಡುವುದು ಮತ್ತು ಚಯಾಪಚಯ ಕ್ರಿಯೆಯನ್ನು ಹೆಚ್ಚಿಸುವುದು ತೂಕ ಇಳಿಸಿಕೊಳ್ಳಲು ಸಹಾಯ ಮಾಡುತ್ತದೆ.
For More Updates Join our WhatsApp Group :
