ಬೆಂಗಳೂರು: ರಸ್ತೆ ಅಪಘಾತ ಅಥವಾ ತುರ್ತು ಸಂದರ್ಭಗಳಲ್ಲಿ ಗಾಯಾಳುಗಳಿಂದ ಚಿಕಿತ್ಸೆಗೆ ಮುನ್ನ ಹಣ ಕೇಳಿದರೆ ಸರ್ಕಾರಿ ಮತ್ತು ಖಾಸಗಿ ಆಸ್ಪತ್ರೆಯ ವೈದ್ಯರಿಗೆ ಜೈಲು ಶಿಕ್ಷೆ ಹಾಗೂ ದಂಡ ವಿಧಿಸಲಾಗುವುದು ಎಂದು ಕರ್ನಾಟಕ ಸರ್ಕಾರ ಘೋಷಿಸಿದೆ.
ಸರ್ಕಾರದ ಆದೇಶ: ಶುಕ್ರವಾರ ರಾಜ್ಯ ಸರ್ಕಾರ ಅಧಿಕೃತವಾಗಿ ಸುತ್ತೋಲೆ ಹೊರಡಿಸಿದೆ. ಗುರುವಾರ ಸಿಎಂ ಸಿದ್ದರಾಮಯ್ಯ ಅಧ್ಯಕ್ಷತೆಯಲ್ಲಿ ನಡೆದ ಸಚಿವ ಸಂಪುಟ ಸಭೆಯಲ್ಲಿ ಈ ನಿರ್ಧಾರ ಕೈಗೊಳ್ಳಲಾಯಿತು.ತುರ್ತು ಚಿಕಿತ್ಸೆಯಲ್ಲಿ ಯಾವುದೇ ರೀತಿಯ ವಿಳಂಬ ಮಾಡಬಾರದು.
ಕರ್ನಾಟಕ ಖಾಸಗಿ ವೈದ್ಯಕೀಯ ಸಂಸ್ಥೆಗಳ ಕಾಯ್ದೆ 2007ರ ಪ್ರಕಾರ:
* ರಸ್ತೆ ಅಪಘಾತ ಪ್ರಕರಣಗಳು
* ಆಕಸ್ಮಿಕ ಅಥವಾ ಪ್ರೇರಿತ ಬೆಂಕಿ ಅವಘಡಗಳು
* ವಿಷಪ್ರಾಶನ
* ಕ್ರಿಮಿನಲ್ ಹಲ್ಲೆ ಪ್ರಕರಣಗಳು
ಶಿಕ್ಷೆ ಹಾಗೂ ದಂಡ
* ಚಿಕಿತ್ಸೆ ನೀಡಲು ವಿಳಂಬ ಮಾಡಿದರೆ ಅಥವಾ ಮುಂಗಡ ಹಣ ಕೇಳಿದರೆ
* ₹1 ಲಕ್ಷ ವರೆಗೆ ದಂಡ
* ಜೈಲು ಶಿಕ್ಷೆ ಕೂಡ ವಿಧಿಸಲಾಗುವುದು.
For More Updates Join our WhatsApp Group :

