ಫ್ಲೋರಿಡಾ : ಅಮೇರಿಕಾ ಅಧ್ಯಕ್ಷೀಯ ಚುನಾವಣೆಗೆ ಸಿದ್ದತೆಗಳು ನಡೆಯುತ್ತಿರುವ ಮಧ್ಯೆದಲ್ಲೇ ರಿಪಬ್ಲಿಕನ್ ಪಕ್ಷದಿಂದ ಎರಡನೇ ಬಾರಿ ಸ್ಪರ್ಧಿಸಿರುವ ಡೊನಾಲ್ಡ್ ಟ್ರಂಪ್ ಮೇಲೆ ಮತ್ತೆ ಹತ್ಯೆ ಯತ್ನ ನಡೆದಿದೆ.
ಭಾನುವಾರ ಫ್ಲೋರಿಡಾದ ಗಾಲ್ಫ್ ಕ್ಲಬ್ನಲ್ಲಿದ್ದ ಟ್ರಂಪ್ ನ ಮೇಲೆ ಗುಂಡಿನ ದಾಳಿ ನಡೆಸಲಾಗಿದೆ ಅದರಿಂದ ಅವರು ಪಾರಾಗಿದ್ದಾರೆ ಎಂದು ವರದಿಯಾಗಿದೆ
ಈ ಬಗ್ಗೆ ಮಾಹಿತಿ ನೀಡಿರುವ ಅಧಿಕಾರಿಗಳು ಗುಂಡಿನ ದಾಳಿ ನಡೆಸಿದ ವ್ಯಕ್ತಿಯನ್ನು ಬಂಧಿಸಲಾಗಿದೆ, ವಿಚಾರಣೆ ನಡೆಸುತ್ತಿದ್ದೇವೆ. ಮಾಜಿ ಅಧ್ಯಕ್ಷರು ಆರೋಗ್ಯವಾಗಿದ್ದಾರೆ. ಯಾವುದೇ ಅಪಾಯವಿಲ್ಲ ಎಂದಿದ್ದಾರೆ.
ಇನ್ನೂ ಈ ಬಗ್ಗೆ ತಮ್ಮ ಸಾಮಾಜಿಕ ಜಾಲತಾಣದಲ್ಲಿ ಬರೆದುಕೊಂಡಿರುವ ಟ್ರಂಪ್ ‘ನನ್ನ ಸಮೀಪದಲ್ಲಿ ಗುಂಡಿನ ದಾಳಿಗಳು ನಡೆದಿವೆ. ಆದರೆ ವದಂತಿಗಳಿಗೆ ಕಿವಿಗೊಡುವ ಮುನ್ನ ನಿಮಗೆ ಹೇಳ ಬಯಸುವುದೇನೆಂದರೆ, ನಾನು ಸುರಕ್ಷಿತವಾಗಿದ್ದೇನೆ, ಯಾವುದೂ ನನ್ನನ್ನು ನಿಲ್ಲಿಸಲು ಸಾಧ್ಯವಾಗಿಲ್ಲ. ಎಂದಿದ್ದಾರೆ ಟ್ರಂಪ್ ಅವರು ಫ್ಲೋರಿಡಾದ ತಮ್ಮ ಗಾಲ್ಫ್ ಕ್ಲಬ್ನಲ್ಲಿ (ಸೆ.18ರಂದು) ಆಡುತ್ತಿದ್ದ ವೇಳೆ 400 ಗಜ ದೂರದಿಂದ AK ಶೈಲಿಯ ಬಂದೂಕಿನಿಂದ ದಾಳಿಕೋರ ಗುಂಡು ಹಾರಿಸಿದ್ದಾನೆ. ತಕ್ಷಣವೇ ಭದ್ರತಾ ಸಿಬ್ಬಂದಿಯೂ ಗುಂಡು ಹಾರಿಸಿದ್ದು ದಾಳಿಕೋರ ಗನ್, ಎರಡು ಬ್ಯಾಕ್ಪ್ಯಾಕ್, ಗುರಿ ಇಡಲು ಬಳಸಿದ ಸ್ಕೋಪ್ ಮತ್ತು ಗೋಪ್ರೊ ಕ್ಯಾಮೆರಾಗಳನ್ನು ಸ್ಥಳದಲ್ಲೇ ಬಿಟ್ಟು ಹೋಗಿದ್ದಾನೆ. ಬಳಿಕ ಕಾರ್ಯಾಚರಣೆ ನಡೆಸಿ ಪಕ್ಕದ ಪ್ರದೇಶದಲ್ಲಿ ಆತನನ್ನು ಬಂಧಿಸಿದ್ದೇವೆ ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.