ಪೀಣ್ಯದಲ್ಲಿ Double Murder ಶಾಕ್.

ಪೀಣ್ಯದಲ್ಲಿ Double Murder ಶಾಕ್.

ಅಕ್ರಮ ಸಂಬಂಧ ವಿಚಾರಕ್ಕೆ ಬಂದ ಅಕ್ಕ-ತಮ್ಮ ಹತ್ಯೆ, 16ರ ಬಾಲಕನ ಕೃತ್ಯ..

ಬೆಂಗಳೂರು: ಪೀಣ್ಯದ ಹೆಚ್​ಎಂಟಿ ಲೇಔಟ್‌ನ​ ಮನೆಯೊಂದರಲ್ಲಿ 16 ವರ್ಷದ ಅಪ್ರಾಪ್ತ ಬಾಲಕನಿಂದ ಡಬಲ್ ಮರ್ಡರ್​​  ನಡೆದಿರುವಂತಹ ಘಟನೆ ನಡೆದಿದೆ. ಅಕ್ರಮ ಸಂಬಂಧ ಪ್ರಶ್ನಿಸಲು ಬಂದಿದ್ದ ಅಕ್ಕ ಮತ್ತು ತಮ್ಮನನ್ನ ಹತ್ಯೆ ಮಾಡಲಾಗಿದೆ. ಯಮುನಾ(36) ಮತ್ತು ಸುದೀಪ್(34) ಕೊಲೆಯಾದವರು. ಸ್ಥಳಕ್ಕೆ ಡಿಸಿಪಿ ನಾಗೇಶ್, ಎಫ್‌ಎಸ್‌ಎಲ್ ತಂಡ ಭೇಟಿ ನೀಡಿ ಪರಿಶೀಲನೆ ನಡೆಸಿದೆ.

ಆರೋಪಿ ತಾಯಿ ಛಾಯಾ ಹಾಗೂ ಯುಮುನಾ ಗಂಡನ ಮಧ್ಯೆ ಅಕ್ರಮ ಸಂಬಂಧ ಹಿನ್ನೆಲೆ ಇದನ್ನು ಪ್ರಶ್ನಿಸಲು ಛಾಯಾ ಮನೆಗೆ ಬಂದಿದ್ದ ಯಮುನಾ ಮತ್ತು ತಮ್ಮ ಸುದೀಪ್ ಜಗಳವಾಡುತ್ತಿದ್ದರು. ಈ ವೇಳೆ ಜಗಳದ ಮಧ್ಯೆ ಎಂಟ್ರಿಯಾದ ಛಾಯಾ ಪುತ್ರ ಚಾಕುವಿನಿಂದ ಇರಿದು ಇಬ್ಬರನ್ನು ಹತ್ಯೆಗೈದಿದ್ದಾನೆ.

ಅಪ್ರಾಪ್ತ ಬಾಲಕ ಇಬ್ಬರಿಗೂ ಹತ್ತಾರು ಬಾರಿ ಚಾಕುವಿನಿಂದ ಇರಿದಿದ್ದಾನೆ. ನಂತರ ಕೋಣೆ ಒಳಗೆ ಹೋಗಿ ಬಾಗಿಲು ಹಾಕಿಕೊಂಡಿದ್ದ. ಪೊಲೀಸರು ಬಂದರೂ ಬಾಗಿಲು ತೆಗೆದಿರಲಿಲ್ಲ. ತಂದೆ ಬಂದು ಹೇಳಿದಾಗ ಬಾಗಿಲು ತೆಗೆದು ಅಪ್ರಾಪ್ತ ಹೊರಬಂದಿದ್ದಾನೆ.

ಕಸ್ತೂರಿಬಾಯಿಯನ್ನು ಮುದ್ದೇಬಿಹಾಳ ತಾಲೂಕಿನ ಗೆದ್ದಲಮರಿ ಗ್ರಾಮದ ನಿವಾಸಿ ಎಂದು ಗುರುತಿಸಲಾಗಿದೆ. ಅಪಘಾತದ ವೇಳೆ ಕಾರು ಪಲ್ಟಿಯಾಗಿದೆ. ಇನ್ನು ಘಟನೆಯಲ್ಲಿ ಚಲಮಿ ತಾಂಡಾದ ಸಂಜಯ ಸುರಪುರ ಹಾಗೂ ಗುರಪ್ಪ ಚೌವ್ಹಾನ್ ಇವರಿಗೆ ಗಾಯಗಳಾಗಿದ್ದು, ಮುದ್ದೇಬಿಹಾಳ ತಾಲ್ಲೂಕಾಸ್ಪತ್ರೆಯಲ್ಲಿ ಪ್ರಾಥಮಿಕ ಚಿಕಿತ್ಸೆ ನೀಡಿ ಹೆಚ್ಚಿನ ಚಿಕಿತ್ಸೆಗಾಗಿ ವಿಜಯಪುರ ಜಿಲ್ಲಾಸ್ಪತ್ರೆಗೆ ರವಾನಿಸಲಾಗಿದೆ. ಸ್ಥಳಕ್ಕೆ ಮುದ್ದೇಬಿಹಾಳ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಮುದ್ದೇಬಿಹಾಳ ಪೊಲೀಸ್ ಠಾಣಾ ವ್ಯಾಪ್ತಿ ಪ್ರಕರಣ ದಾಖಲಾಗಿದೆ.

For More Updates Join our WhatsApp Group :

https://chat.whatsapp.com/JVoHqE476Wn3pVh1gWNAcH

Leave a Reply

Your email address will not be published. Required fields are marked *